ಮೊದಲ ಬಾರಿ ವಿಧಾನಸಭೆಗೆ ನೂತನ ಶಾಸಕರು
Team Udayavani, May 17, 2018, 4:50 PM IST
ತುಮಕೂರು : ಕಲ್ಪತರು ನಾಡಿನಲ್ಲಿ ಈ ಬಾರಿ ನಾಲ್ಕು ಜನ ವಿವಿಧ ಪಕ್ಷಗಳಿಂದ ನೂತನವಾಗಿ ಆಯ್ಕೆಯಾಗಿ ವಿಧಾನ ಸಭೆ ಪ್ರವೇಶ ಮಾಡುತ್ತಿದ್ದಾರೆ. ಕ್ಷೇತ್ರದ ಬಗ್ಗೆ ಹತ್ತು ಹಲವು ಕನಸುಗಳನ್ನು ಒತ್ತು ವಿಧಾನ ಸಭೆಗೆ ಹೋಗುತ್ತಿರುವ ಈ ನೂತನ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ 11 ಶಾಸಕರ ಪೈಕಿ ಹತ್ತು ಜನ ಶಾಸಕರು ಪರಾಭವ ಹೊಂದಿದ್ದಾರೆ. ಗುಬ್ಬಿಯ ಎಸ್.ಆರ್. ಶ್ರೀನಿವಾಸ್ ಮಾತ್ರ ಗೆಲುವು ಸಾಧಿಸಿದ್ದು ಈ ಬಾರಿಯ ಚುನಾವಣೆಯಲ್ಲಿ ನಾಲ್ವರು ಹೊಸ ಶಾಸಕರು ಮೂವರು ಮಾಜಿ ಸಚಿವರು, ಮೂವರು ಮಾಜಿ ಶಾಸಕರು ಆಯ್ಕೆಯಾಗಿರುವುದು ವಿಶೇಷ.
ವಿಧಾನ ಸಭೆ ಪ್ರವೇಶಿಸಿದ ನೂತನ ಶಾಸಕರು: ತುಮಕೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಬಿ. ಜ್ಯೋತಿಗಣೇಶ್, ತುರುವೇಕೆರೆ ಬಿಜೆಪಿ ಅಭ್ಯರ್ಥಿ ಮಸಾಲೆ ಜಯರಾಮ್, ಕುಣಿಗಲ್ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ರಂಗನಾಥ್, ಮಧುಗಿರಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ವೀರಭದ್ರಯ್ಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಇದೇ ಪ್ರಥಮ ಬಾರಿಗೆ ವಿಧಾನಸಭೆ ಪ್ರವೇಶಿಸುವ ಶಾಸಕರಾಗಿದ್ದಾರೆ.
ತುಮಕೂರಿನಲ್ಲಿ ಮತ್ತೆ ಕಮಲ ಅರಳಿಸಿದ ಜ್ಯೋತಿ: ತುಮಕೂರು ವಿಧಾನ ಸಭಾ ಕ್ಷೇತ್ರ ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆ ಆ ಭದ್ರಕೋಟೆಯನ್ನು ಒಡೆದು 1994ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸೊಗಡು ಎಸ್. ಶಿವಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾಗಿದ್ದ ಎಸ್. ಷಫೀ ಅಹಮದ್ ಸೋಲು ಅನುಭವಿ ಸಿದ್ದರು. ಅಲ್ಲಿಂದ ನಿರಂತರ ವಾಗಿ ಈ ಕುಟುಂಬಕ್ಕೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡತ್ತಾ ಬಂದಿತ್ತು. ಕಾರಣ ತುಮಕೂರು ನಗರದಲ್ಲಿ ಮುಸ್ಲಿಂ ಮತ ದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಒಂದು ಸ್ಥಾನ ನೀಡಬೇಕೆನ್ನುವ ದೃಷ್ಟಿಯಿಂದ ನೀಡತ್ತಿದ್ದರು.
2008ರ ಚುನಾವಣೆಯಲ್ಲಿ ಮಾವನ ಬದಲು ಅಳಿಯ ಡಾ.ಎಸ್ ರಫೀಕ್ ಅಹಮದ್ ಅವರಿಗೆ ಟಿಕೆಟ್ ನೀಡಿ ದ್ದರು. ಆದರೆ ಕಳೆದ ಚುನಾವಣೆಯಲ್ಲಿ ರಫೀಕ್ ಅಹಮದ್ ಶಿವಣ್ಣ ಅವರ ವಿರುದ್ಧ 1949 ಅಂತರದಿಂದ ಪರಾಭವ ಗೊಂಡಿದ್ದರು. ಚುನಾವಣೆಯಲ್ಲಿ ಸೋಲು ಕಂಡರೂ ಧೃತಿಗೆಡದೆ ಪಕ್ಷದ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಕೊಂಡು ಕೆಪಿಸಿಸಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.
ಚುನಾವಣೆಯಲ್ಲಿ ಸೋತಿದ್ದರೂ ಈ ಸೋಲೆ ಮುಂದಿನ ಗೆಲುವಿನ ಸೋಪಾನ ಎಂದು ಭಾವಿಸಿ ನಿರಂತರವಾಗಿ ಕ್ಷೇತ್ರದಲ್ಲಿ ಸಂಪರ್ಕ ಇಟ್ಟುಕೊಂಡು ಎಲ್ಲಾ ಸಭೆ ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದರು ಇದರ ಪರಿ ಣಾಮ 2013 ರಲ್ಲಿ ನಡೆದ ಚುನಾವಣೆಯಲ್ಲಿ ಅಂದು ಕೆಜೆಪಿ ಯಿಂದ ಸ್ಪರ್ಧಿಸಿದ್ದ ಜಿ.ಬಿ. ಜ್ಯೋತಿಗಣೇಶ್ ವಿರುದ್ಧ ಗೆಲುವು ಸಾಧಿಸಿ ಡಾ. ಎಸ್. ರಫೀಕ್ ಅಹಮದ್ ಶಾಸಕ ರಾಗುವ ಮೂಲಕ ಬಿಜೆಪಿ ಭದ್ರಕೋಟೆಯನ್ನು ಒಡೆದು ಹಾಕಿದರು.
ಈ ಬಾರಿಯ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಎನ್ನುವ ನಿರೀಕ್ಷೆಯನ್ನು ಹೊಂದಿದ್ದರು. ಆದರೆ ತುಮಕೂರಿನ ಮತದಾರ ಮತ್ತೆ ಬಿಜೆಪಿಗೆ ಮಣೆ ಹಾಕಿ ಜಿ.ಬಿ. ಜ್ಯೋತಿ ಗಣೇಶ್ ಅವರನ್ನು ಗೆಲ್ಲಿಸುವ ಮೂಲಕ ತುಮಕೂರು ಬಿಜೆಪಿಯ ಭದ್ರಕೋಟೆ ಎನ್ನುವುದನ್ನು ಉಳಿಕೊಂಡಿದೆ.
ಮೊದಲ ಬಾರಿಗೆ ವಿಧಾನ ಸಭೆ ಪ್ರವೇಶ ಮಾಡುತ್ತಿರುವುದು ಖುಷಿ ತಂದಿದ್ದರು ಜವಾಬ್ದಾರಿ ಹೆಚ್ಚಿದೆ. ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಬೆಂಬಲ ಸಿಕ್ಕಿದೆ ಇದೇ ಮೊದಲ ಬಾರಿಗೆ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ನಾನು ನಗರದ ಜನರ ಸಮಸ್ಯೆಗಳಿಗೆ ಸ್ಪ$ಧಿಸಿ ಕೆಲಸ ಮಾಡುತ್ತೇನೆ ನಮ್ಮ ನಾಯಕರಾದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಮಿತ್ ಶಾ ಮತ್ತು ಯಡಿಯೂರಪ್ಪ ಅವರು ತುಮಕೂರಿಗೆ ಬಂದು ಪ್ರಚಾರ ಮಾಡಿದ್ದು ಜಿಲ್ಲೆಯಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿಯಾಗಿತು ಜೊತೆಗೆ ಎಲ್ಲ ವರ್ಗದ ಜನ ಬಿಜೆಪಿಗೆ ಮತ ನೀಡಿದ್ದಾರೆ. ಅವರ ಸೇವೆಯನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತೇನೆ.
ಜಿ.ಬಿ. ಜ್ಯೋತಿಗಣೇಶ್, ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ.
ಮೊದಲ ಬಾರಿಗೆ ಸದನ ಪ್ರವೇಶಿಸಿದ ಜಯರಾಂ
ತುಮಕೂರು: ಸಾಮಾನ್ಯರಲ್ಲಿ ಸಾಮಾನ್ಯರಾಗಿ ಬೆರೆತು ಜನರ ಕಷ್ಟ ಸುಖಗಳಿಗೆ ಸ್ಪಂಧಿಸಿ ಜನ ಮನ್ನಣೆ ಗಳಿಸಿದ್ದ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಸಾಲೆ ಜಯರಾಂ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸು ತ್ತಿರುವ ಶಾಸಕರಾಗಿದ್ದಾರೆ.
ಜೆಡಿಎಸ್‌ನ ಭದ್ರಕೋಟೆಯಾಗಿದ್ದ ತುರುವೇಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಈ ಕ್ಷೇತ್ರದಲ್ಲಿ ಈ ಹಿಂದೆ 1999ರಲ್ಲಿ ಎಂ.ಡಿ ಲಕ್ಷ್ಮೀನಾರಾಯಣ್ ಗೆಲ್ಲುವ ಮೂಲಕ ಬಿಜೆಪಿ ಸ್ಥಾನ ಪಡೆದು ಕೊಂಡಿತ್ತು. ಆನಂತರ ಈ ಕ್ಷೇತ್ರದಲ್ಲಿ ಜೆಡಿಎಸ್ ನಿರಂತರ ಗೆಲುವು ಸಾಧಿಸಿತ್ತು. 2018 ರ ಚುನಾವಣೆಯಲ್ಲಿ ತುರುವೇಕೆರೆ ಮತದಾರ ಬಿಜೆಪಿಯ ಕಮಲ ಅರಳಿಸಿ ಮೊದಲ ಬಾರಿಗೆ ಮಸಾಲೆ ಜಯರಾಂ ಅವರನ್ನು ವಿಧನ ಸಭೆ ಕಳುಹಿಸಿದ್ದಾರೆ. ಕಳೆದ 2013 ರ ವಿಧಾನ ಸಭಾ ಚುನಾವಣೆಯಲ್ಲಿ ತುರುವೇಕೆರೆ ವಿಧಾನ ಸಭಾ ಕ್ಷೇತ್ರದಿಂದಲೇ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೆಲವೇ ಮತಗಳ ಅಂತರದಿಂದ ಫರಾಭವ ಹೊಂದಿದ್ದ ಮಸಾಲೆ ಜಯರಾಂ ನಂತರ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದು ಐದು ವರ್ಷ ಕ್ಷೇತ್ರದಲ್ಲಿ ಜನರೊಂದಿಗೆ ಬೆರೆತು ಅಲ್ಲಿಯ ಜನರ ಸಮಸ್ಯೆಗಳಿಗೆ ಸ್ಪಧಿಸಿದ್ದ ಹಿನ್ನೆಲೆಯಲ್ಲಿ ಈ ಬಾರಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಚುನಾವಣೆ ಘೋಷಣೆಯಾಗುವುದಕ್ಕೂ ಮುಂಚೆಯೇ ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಸಾಲೆ ಜಯರಾಂ ಎಂದು ಆ ಪಕ್ಷದ ರಾಜ್ಯಾದ್ಯಕ್ಷರಾದ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದರು. ಈ ಎಲ್ಲದರ ಹಿನ್ನೆಲೆಯಲ್ಲಿ ಪಕ್ಷವನ್ನು ಸದೃಢವಾಗಿ ಕಟ್ಟಿ ತನ್ನದೇ ಆದ ಕಾರ್ಯಕರ್ತರನ್ನು ಬೆಳೆಸಿಕೊಂಡು ಈ ಚುನಾವಣೆಯಲ್ಲಿ ತುರುವೇಕೆರೆ ಕ್ಷೇತ್ರದ ಜೆಡಿಎಸ್‌ನ ಘಟಾನುಘಟಿ ಅಭ್ಯರ್ಥಿ ಎಂ.ಟಿ. ಕೃಷ್ಣಪ್ಪ ಅವರನ್ನು ಮಣಿಸಿ ಮೊದಲ ಭಾರಿಗೆ ವಿಧಾನ ಸಭೆ ಪ್ರವೇಶಿಸಿದ್ದಾರೆ.
ವಿಧಾನಸಭೆಗೆ ವೀರಭದ್ರಯ್ಯ
ತುಮಕೂರು: ಜಿಲ್ಲೆಯ ಪ್ರತಿಷ್ಠಿತ ಕ್ಷೇತ್ರ ಎಂದೇ ಬಿಂಬಿತವಾಗಿದ್ದ ಮಧುಗಿರಿ ವಿಧಾನ ಸಭಾ ಕ್ಷೇತ್ರದಿಂದ ನಿವೃತ್ತ ಐಎಎಸ್ ಅಧಿಕಾರಿ ವೀರಭದ್ರಯ್ಯ ಇದೇ ಮೊದಲ ಬಾರಿಗೆ ವಿಧಾನ ಸಭೆಗೆ ಪ್ರವೇಶ ಮಾಡುತ್ತಿದ್ದಾರೆ. ಮಧುಗಿರಿ ವಿಧಾನ ಸಭಾ ಕ್ಷೇತ್ರ ಈ ಹಿಂದೆ ಮೀಸಲು ಕ್ಷೇತ್ರವಾಗಿತ್ತು. ಕಾಂಗ್ರೆಸ್‌ನ ಡಾ. ಜಿ. ಪರಮೇಶ್ವರ್ ಗೆಲುವು ಸಾಧಿಸುತ್ತಾ ಬಂದಿದ್ದರು.
2008 ರಲ್ಲಿ ಕ್ಷೇತ್ರ ಪುನ್ ವಿಂಗಡಣೆ ಆದ ನಂತರ ಸಾಮಾನ್ಯ ಕ್ಷೇತ್ರವಾಗಿದ್ದರಿಂದ ಡಿ.ಸಿ. ಗೌರಿಶಂಕರ್ ಈ ಕ್ಷೇತ್ರದಲ್ಲಿ ಸ್ಪರ್ಧಿಸಿಸಿ ಗೆಲುವು ಸಾಧಿಸಿದ್ದರು. ಆ ನಂತರ ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಹೋದರು. ಆಗ ನಡೆದ ಉಪ ಚುನಾವಣೆಯಲ್ಲಿ ಡಿ.ಸಿ. ಗೌರಿಶಂಕರ್ ಸೋಲು ಕಂಡು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಪತ್ನಿ ಅನಿತಾ ಕುಮಾರ ಸ್ವಾಮಿ ಗೆಲುವು ಸಾಧಿಸಿದರು.
2013 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಸ್ಪರ್ಧಿಸಿದ್ದರು ಇವರ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ ವೀರಭದ್ರಯ್ಯ ಸ್ಪರ್ಧಿಸಿದ್ದರು ಆಗ ಪರಾಭವ ಹೊಂದಿ ಕೆ.ಎನ್. ರಾಜಣ್ಣ ವಿಜಯ ಸಾಧಿಸಿದ್ದರು. 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೆ.ಎನ್. ರಾಜಣ್ಣ ಅವರನ್ನು ಸೋಲಿಸಿ ವಿಧಾನ ಸಭೆ ಇದೇ ಮೊದಲ ಬಾರಿಗೆ ಶಾಸಕರಾಗಿ ವೀರಭದ್ರಯ್ಯ ಹೋಗುತ್ತಿದ್ದಾರೆ.
ನನ್ನ ನಿರೀಕ್ಷೆ ಮೀರಿ ಕ್ಷೇತ್ರದ ಮತದಾರರು ನನಗೆ ಮತ ಹಾಕಿದ್ದಾರೆ. ಆನರ ಸೇವೆಯನ್ನು ಪ್ರಾಮಣಿಕವಾಗಿ ಮಾಡುತ್ತೇನೆ. ಕ್ಷೇತ್ರದಲ್ಲಿ ಭ್ರಷ್ಟಾಚಾರ ಆಗದಂತೆ ಎಚ್ಚರವಹಿಸುತ್ತೇನೆ. ಎಲ್ಲ ವರ್ಗದ ಜನರೊಂದಿಗೆ ಬೆರೆತು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ. ಕ್ಷೇತ್ರದ ಸಮಸ್ಯೆಗಳಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ ಮೊದಲ ಬಾರಿಗೆ ವಿಧಾನ ಸಭೆಗೆ ಪ್ರವೇಶ ಮಾಡುತ್ತಿರುವುದು ಸಂತಸವಾಗಿದೆ.
ವೀರಭದ್ರಯ್ಯ, ನೂತನ ಶಾಸಕ
ಮೊದಲಬಾರಿ ವಿಧಾನ ಸಭೆ ಪ್ರವೇಶಿಸಿದ ರಂಗನಾಥ್
ತುಮಕೂರು: ಕುಣಿಗಲ್ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ರಂಗನಾಥ್ ಇದೇ ಮೊದಲ ಬಾರಿಗೆ ವಿಧಾನ ಸಭೆಗೆ ಪ್ರವೇಶ ಪಡೆ ದಿದ್ದಾರೆ. ಕುಣಿಗಲ್ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಮತ್ತು ಜೆಡಿಎಸ್
ಪಕ್ಷಗಳನ್ನು ಆಗಿಂದಾಗೆ ಗೆಲ್ಲಿಸುವ ಕ್ಷೇತ್ರ 2008 ರಲ್ಲಿ ಕಾಂಗ್ರೆಸ್‌ನ ಬಿ.ಬಿ. ರಾಮಸ್ವಾಮಿ ಗೆಲುವು ಸಾಧಿಸಿದ್ದರು.
2013 ರಲ್ಲಿ ಜೆಡಿಎಸ್‌ನ ಡಿ. ನಾಗ ರಾಜಯ್ಯ ಗೆಲುವು ಸಾಧಿಸಿದ್ದರು. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಡಾ.
ರಂಗನಾಥ್ ಗೆಲುವು ಸಾಧಿಸುವ ಮೂಲಕ ವಿಧಾನ ಸಭೆಗೆ ಮೊದಲ ಬಾರಿಗೆ ಶಾಸಕರಾಗಿ ಹೆಜ್ಜೆ ಇಡಲಿದ್ದಾರೆ.
ಚಿ.ನಿ. ಪುರುಷೋತ್ತಮ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.