ತಾಲೂಕು ಆಡಳಿತದ ಆದೇಶಕ್ಕೆ ಕಿಮ್ಮತ್ತಿಲ್ಲ

ಕೆಲವೆಡೆ ತಂಬಾಕು ಉತ್ಪನ್ನ ಮಾರಾಟ: ಕ್ರಮ ಕೈಗೊಳ್ಳದ ಅಧಿಕಾರಿಗಳು

Team Udayavani, Apr 29, 2020, 2:39 PM IST

ತಾಲೂಕು ಆಡಳಿತದ ಆದೇಶಕ್ಕೆ ಕಿಮ್ಮತ್ತಿಲ್ಲ

ಸಾಂದರ್ಭಿಕ ಚಿತ್ರ

ಚಿಕ್ಕನಾಯಕನಹಳ್ಳಿ: ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ವೈರಸ್‌ ತಡೆಗಟ್ಟಲು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೊಳಿಸಿದ ಕೆಲ ಆದೇಶ ಪತ್ರಗಳು ಹಾಗೂ ತಿಳಿವಳಿಕೆ ಪತ್ರಗಳು ಅನುಷ್ಠಾನಕ್ಕೆ ತರುವಲ್ಲಿ ವಿಫ‌ಲವಾಗಿದೆ. ಕೋವಿಡ್ ತಡೆಗಟ್ಟಲು ತಾಲೂಕು ಆಡಳಿತ ಅನೇಕ ಮುಂಜಾಗ್ರತ ಕ್ರಮಗಳನ್ನು ಜಾರಿಗೊಳಿಸಿದ್ದು ಹಾಗೂ ಲಾಕ್‌ಡೌನ್‌ನಿಂದ ಸಾರ್ವಜನಿಕರಿಗೆ ಅನಾನುಕೂಲಗಳು ಸಂಭವಿಸಬಾರದು ಎಂದು ಕೆಲ ಮಾರ್ಗ ಸೂಚನೆಯನ್ನು ಹೊರಡಿಸಲಾಗಿತ್ತು. ಆದರೇ ತಾಲೂಕು ಆಡಳಿತದ ಮಾರ್ಗಸೂಚನೆಗೆ ಬೆಲೆ ಇಲ್ಲದಂತಾಗಿದೆ.

ನೋಟಿಸ್‌ಗಳಿಗೆ ಬೆಲೆ ಇಲ್ಲ: ತಾಲೂಕು ಆಡಳಿತ ಕೋವಿಡ್ ತಡೆಗಟ್ಟಲು ಹಗಲಿರುಳು ಶ್ರಮ ಹಾಕುತ್ತಿರುವುದರಲ್ಲಿ ಎರಡು ಮಾತಿಲ್ಲ, ಆದರೇ ಕಟ್ಟುನಿಟ್ಟಿನ ಆದೇಶಗಳಿಗೆ ತಾಲೂಕಿನಲ್ಲಿ ಬೆಲೆ
ಇಲ್ಲದಂತಾಗಿದೆ. ದಿನಸಿ ಸಾಮಗ್ರಿಗಳ ಬೆಲೆ ಅಂಗಡಿಗಳ ಮೇಲೆ ಪ್ರಕಟಣೆ ಮಾಡಬೇಕು. ನಿಗದಿ ದರಕ್ಕಿಂತ ಹೆಚ್ಚಿಗೆಯಾಗಿ ಮಾರಾಟ ಮಾಡುವಂತಿಲ್ಲ ಎಂದು ಪ್ರಕಟಣೆ ನೀಡಲಾಗಿತ್ತು. ಆದರೇ ದಿನಸಿ ಅಂಗಡಿಗಳಿಗೆ ನೋಟಿಸ್‌ ಪ್ರತಿಗಳನ್ನು ನೀಡಿಲ್ಲ ಹಾಗೂ ಯಾವ ಅಧಿಕಾರಿಗಳು ಒಂದು ದಿನಸಿ ಅಂಗಡಿಗಳ ತಪಾಸಣಾ ಕಾರ್ಯ ನಡೆಸಿಲ್ಲ.

ಅಕ್ರಮ ಗುಟ್ಕಾ ಹಾಗೂ ಧೂಮಪಾನ ಮಾರಾಟ ಮಾಡಬಾರದು ಎಂದು ಆದೇಶ ನೀಡಿದ್ದು, ಕೆಲ ಹಳ್ಳಿಗಳಲ್ಲಿ ಸಣ್ಣ ಸಣ್ಣ ಅಂಗಡಿಗಳಲ್ಲಿ ಬೀಡಿ, ಸಿಗರೇಟ್‌ ವಶಪಡಿಸಿಕೊಂಡಿದ್ದು ಬಿಟ್ಟರೆ ಬೇರೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ, ಔಷಧಿ ಅಂಗಡಿ ಗಳಲ್ಲಿ ವೈದ್ಯರು ನೀಡಿದ ಚೀಟಿಗಳ ಆಧಾರದ ಮೇಲೆ ಮಾತ್ರ ಔಷಧಗಳನ್ನು ನೀಡಬೇಕು ಎಂದು ತಾಲೂಕು ಆಡಳಿತ ಆದೇಶ ನೀಡಿತ್ತು. ಆದರೆ ಇದು ಯಾವ ಔಷಧ ಅಂಗಡಿಗಳಲ್ಲಿ ಅನುಷ್ಠಾನವಾಗಿಲ್ಲ. ಸರ್ಕಾರ ಬೇಕರಿಗಳನ್ನು ಲಾಕ್‌ಡೌನ್‌ ಸಮಯದಲ್ಲಿ ತೆರೆಯಲು ಆವಕಾಶ ನೀಡಿದ್ದು, ಕೆಲ ಮಾರ್ಗ ಸೂಚನೆಯನ್ನು ಸಹ ನೀಡಿದೆ ಅದರೇ ತಾಲೂಕಿನಲ್ಲಿನ ಬೇಕರಿಗಳಲ್ಲಿ ಯಾವ ಯಾವ ತಿನಿಸುಗಳನ್ನು ಮಾರಾಟ ಮಾಡಲಾಗುತ್ತಿದೆ ಎಷ್ಟು ದಿನ ಅವುಗಳನ್ನು ಇರಿಸಲಾಗಿರುತ್ತದೆ ಎಂಬ ತಪಾಸನೆ ಕಾರ್ಯ ನಡೆದಿಲ್ಲ. ತಾಲೂಕು ಆಡಳಿತ ಜಾರಿ ಗೊಳಿಸಿದ್ದ ಎಲ್ಲಾ ಆದೇಶಗಳು ಜನಪರವಾಗಿದ್ದು, ಆದರೆ ಆದೇಶಗಳು ಹಲ್ಲು ಕಿತ್ತ ಹಾವಿನಂತಾಗಿವೆ.

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kunigal

Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.