ಜಿಲ್ಲೆಯಲ್ಲಿ ಕೈ ಕೊಟ್ಟ ಮಳೆ: ರೈತರು ಕಂಗಾಲು

ಚಿಂತೆಯಲ್ಲೇ ಕಾಲ ಕಳೆಯುವ ಪರಿಸ್ಥಿತಿ • ಹೆಸರು, ಉದ್ದು, ಎಳ್ಳು, ತೊಗರಿ ಬಿತ್ತನೆ ಕಾರ್ಯ ವಿಳಂಬ

Team Udayavani, Jul 9, 2019, 1:31 PM IST

tk-tdy-1..

ಜೂನ್‌ ಮೊದಲ ವಾರ ಕೆಲವೇ ಭಾಗಗಳಿಗೆ ಬಿದ್ದಿದ್ದ ಅಲ್ಪಸ್ವಲ್ಪ ಮಳೆಗೆ ತಿಪಟೂರು ತಾಲೂಕಿನಲ್ಲಿ ಕೆಲವರು ಭೂಮಿ ಹದ ಮಾಡಿಕೊಳ್ಳುತ್ತಿರುವುದು.

ತಿಪಟೂರು: ಕಲ್ಪತರು ನಾಡಿನ ರೈತರು ಮಳೆ ಇಲ್ಲದೆ ರೈತರು ದಿನವೂ ಮೋಡ ಮುಸುಕಿದಂತೆ ಕಾಣುತ್ತಿರುವ ಆಕಾಶದೆಡೆಗೆ ದೃಷ್ಟಿ ನೆಟ್ಟು, ಮಳೆರಾಯ ಯಾವಾಗ ಕೃಪೆ ತೋರುವನೊ ಎಂಬ ಚಿಂತೆಯಲ್ಲೇ ಕಾಲ ಕಳೆಯುವಂತಾಗಿದೆ.

ಇತ್ತೀಚಿನ ಹಲವಾರು ವರ್ಷಗಳಲ್ಲಿ ತಾಲೂಕಿಗೆ ಸುರಿದಿರುವ ಮಳೆ ಪ್ರಮಾಣ ಲೆಕ್ಕ ಹಾಕಿ ನೋಡಿದರೆ ವರ್ಷ ವರ್ಷವೂ ಇಳಿಕೆಯಾಗುವ ಮೂಲಕ ಕಲ್ಪತರು ನಾಡಿನಲ್ಲಿ ನಿರಂತರವಾಗಿ ಬರಗಾಲವೇ ತಾಂಡವ ವಾಡುತ್ತಿದೆ. ಈ ವರ್ಷವೂ ಸಹ ಏಪ್ರಿಲ್ ಅಂತ್ಯ ಅಥವಾ ಮೇಯಿಂದ ಬರಬೇಕಾಗಿದ್ದ ಪೂರ್ವ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟ ಪರಿಣಾಮ ಪ್ರಮುಖ ಖುಷ್ಕಿ ಜಮೀನುಗಳಲ್ಲಿ ಬೆಳೆಯುವ ವಾಣಿಜ್ಯ ಬೆಳೆಗಳಾದ ಹೆಸರು, ಉದ್ದು, ಎಳ್ಳು ತೊಗರಿ ಮತ್ತಿತರೆ ಬೆಳೆಗಳನ್ನು ಬಿತ್ತನೆ ಮಾಡಲಾಗದೆ ರೈತರು ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ. ಅಲ್ಪಸ್ವಲ್ಪ ವಾದರೂ ಪೂರ್ವ ಮುಂಗಾರು ಮಳೆಯಾಗು ತ್ತಿದ್ದರಿಂದ ರೈತರು ಮನೆ ಬಳಕೆಗಲ್ಲದೆ ಮಾರಾಟಕ್ಕೂ ಈ ಬೆಳೆಗಳನ್ನು ಬೆಳೆದು ರಾಗಿ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ ಬೇಸಾಯದ ಖರ್ಚಿಗೆ ಹಣ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ ರೈತರ ಪಾಲಿಗೆ ಪೂರ್ವ ಮುಂಗಾರು ಕಹಿಯಾಗಿದ್ದಲ್ಲದೆ ಬರಗಾಲದ ಬೇಗೆಗೆಗೂ ತಳ್ಳಿತು.

ತಡವಾಗುತ್ತಿರುವ ರಾಗಿ ಬಿತ್ತನೆ: ತಾಲೂಕಿನ ಜನ- ಜಾನುವರುಗಳ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು ಜೂನ್‌ ಕೊನೇ ಅಥವಾ ಜುಲೈ ಮೊದಲ ವಾರದಿಂದಲೇ ಬಿತ್ತನೆ ಪ್ರಾರಂಭಿ ಸಬೇಕಾಗಿತ್ತು. ಆದರೆ ಈವರೆಗೂ ಕಲ್ಪತರು ನಾಡಿಗೆ ಮಳೆಯೇ ಬಾರದಿ ರುವುದು ರೈತರಾದಿಯಾಗಿ ಎಲ್ಲರಲ್ಲೂ ತೀವ್ರ ಆತಂಕ ಉಂಟು ಮಾಡಿದ್ದು, ಈ ವರ್ಷವೂ ರಾಗಿ ಬೆಳೆ ಕೈಕೊಟ್ಟು ಬಿಡುತ್ತೇನೋ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಜುಲೈ ಮೊದಲ ವಾರದಿಂದ ದೀರ್ಘಾವಧಿ ಉತ್ತಮ ರಾಗಿ ತಳಿ ಬಿತ್ತನೆ ಮಾಡಬೇಕಿತ್ತು. ದೀರ್ಘಾವಧಿ ತಳಿ ರಾಗಿ ಬಿತ್ತನೆಯಿಂದ ಅಧಿಕ ಇಳುವರಿ ಮತ್ತು ಉತ್ತಮ ಮೇವು ದೊರಕುತಿತ್ತು. ರಾಗಿ ಬಿತ್ತಲು ಸಾವಿರಾರು ರೂಪಾಯಿ ಸಾಲ ಮಾಡಿ ಬಿತ್ತನೆ ಬೀಜ, ಗೊಬ್ಬರ ಖರೀದಿಸಿ ಮಳೆರಾಯನಿಗೆ ಕಾಯ್ದು ಕುಳಿತಿರುವ ರೈತರು ದಿನನಿತ್ಯವೂ ಮೋಡ ಮುಸುಕಿರುವ ಆಕಾಶದತ್ತ ನೋಡುತ್ತ ಮಳೆರಾಯನ ಕೃಪೆಗೆ ನಿತ್ಯ ಕಾಯುತ್ತಲೇ ಬರದ ಬೇಗೆಯಲ್ಲಿ ಬದುಕು ಸವೆಸುತ್ತಿದ್ದಾರೆ.

ಮೋಡ ಮುಸುಕಿದ ವಾತಾವರಣ: ರಾಗಿ ಬಿತ್ತನೆಗೆ ಭೂಮಿ ಸಿದ್ಧತೆ ಮಾಡಿಕೊಳ್ಳಲು ರೈತರು ಮಳೆಗಾಗಿ ಕಾಯುತ್ತಿದ್ದಾರೆ. ಆದರೆ ಪ್ರತಿನಿತ್ಯ ಮೋಡ ಮುಸುಕಿದ ವಾತಾವರಣವಿದ್ದರೂ, ಮಳೆರಾಯ ಮಾತ್ರ ಕೃಪೆ ತೋರುತ್ತಿಲ್ಲ.

ಜೂನ್‌ ಮೊದಲ ವಾರ ತಾಲೂಕಿನ ಕೆಲ ಭಾಗಗಳಿಗೆ ಮಾತ್ರ ಬಿದ್ದಿದ್ದು, ಹದ ಮಳೆಗೆ ಕೆಲವರು ಒಂದೆರಡು ಸಾಲು ಮಾತ್ರ ಉಳುಮೆ ಮಾಡಿ ಕೊಂಡಿದ್ದು ಬಿಟ್ಟರೆ ಬಿತ್ತನೆ ಹೊಲಗಳನ್ನು ಪೂರ್ಣವಾಗಿ ಸ್ವಚ್ಛ ಮಾಡಿಕೊಳ್ಳಲಾಗಿಲ್ಲ. ಅಲ್ಲದೆ ಬಿತ್ತನೆ ಸಮಯ ದಲ್ಲಿಯೇ ಮಳೆ ಕೈಕೊಡುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದ್ದು, ಮುಂದೆನೋ ಎಂಬ ಆತಂಕ ರೈತರಲ್ಲಿ ಮನೆ ಮಾಡಿದೆ.

ಮೇವಿಗೆ ಬರ: ತಾಲೂಕಿನಲ್ಲಿನ ಪ್ರಮುಖ ವಾಣಿಜ್ಯ ಬೆಳೆ ತೆಂಗು ಬಿಟ್ಟರೆ, ನಂತರದ ರೈತರ ಆದಾಯವೆಂದರೆ ಪಶುಸಂಗೋಪನೆ. ಆದರೆ ಪಶು ಸಂಗೋಪನೆಗೆ ಪ್ರಮುಖವಾಗಿ ರಾಗಿ ಹುಲ್ಲು ಅಗತ್ಯವಾಗಿದೆ.

ಮಳೆ ರಾಯನ ಮುನಿಸಿನಿಂದ ಕಳೆದ ಬಾರಿಯಂತೆ ಈ ವರ್ಷವೂ ದನಕರುಗಳಿಗೂ ಮೇವಿಲ್ಲದಂತಾಗಿದೆ. ಈಗಾಗಲೆ ದನಕರುಗಳು, ಕುರಿ ಮೇಕೆ ಮೇಯಿಸಲು ಬದುಗಳಲ್ಲಾಗಲಿ, ಕೆರೆ ಅಂಗಳಗಳಲ್ಲಾಗಲಿ ಹಸಿರು ಮೇವು ಬಾರದೆ ಭೀಕರ ಬರಗಾಲ ಎದುರಾಗಿದ್ದರೂ, ಜಿಲ್ಲಾ ಹಾಗೂ ತಾಲೂಕು ಆಡಳಿತಗಳು ಮೇವು ಬ್ಯಾಂಕುಗಳು ಅಥವಾ ಗೋಶಾಲೆ ತೆರೆಯದೆ ನಿರ್ಲಕ್ಷ್ಯ ವಹಿಸಿದೆ.

 

● ಬಿ. ರಂಗಸ್ವಾಮಿ

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.