ನಕಲಿ ಕ್ಲಿನಿಕ್‌ಗಳಿಗೆ ಅಧಿಕಾರಿಗಳಿಂದ ಬೀಗ
3 ಕ್ಲಿನಿಕ್‌ಗಳ ಮೇಲೆ ಕ್ರಿಮಿನಲ್ ಕೇಸು: ಚಂದ್ರಕಲಾ
Team Udayavani, Jul 5, 2019, 3:51 PM IST
ಕೊರಟಗೆರೆ ತಾಲೂಕಿನಲ್ಲಿ ನಕಲಿ ಕ್ಲಿನಿಕ್‌ಗಳ ಮೇಲೆ ಜಿಲ್ಲಾ ವೈದ್ಯಾದಿಕಾರಿ ತಂಡ ದಾಳಿ ನಡೆಸಿ ಹೊಳನಹಳ್ಳಿಯಲ್ಲಿ ನಕಲಿ ಕ್ಲಿನಿಕ್‌ಗೆ ಬೀಗ ಜಡಿದಿರುವುದು.
ಕೊರಟಗೆರೆ: ತಾಲೂಕಿನ ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿದ ಜಿಲ್ಲಾ ವೈದ್ಯಾಧಿಕಾರಿ ಡಾ.ಚಂದ್ರಕಲಾ ಮತ್ತು ಅವರ ತಂಡ 3 ನಕಲಿ ಕ್ಲಿನಿಕ್‌ಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಬೀಗ ಮುದ್ರ ಹಾಕಿದರು.
ಜಂಟಿ ಕಾರ್ಯ:ತಾಲೂಕಿನಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಬಗ್ಗೆ ಕಳೆದ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳ ಸಾರ್ವ ಜನಿಕರಿಂದ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮತ್ತು ಜಿಲ್ಲಾ ಔಷಧ ನಿಯಂತ್ರಕರು ಜಂಟಿ ಕಾರ್ಯಾಚರಣೆ ನಡೆಸಿದರು.
ಈ ವೇಳೆ ಹೊಳವನಹಳ್ಳಿ ಹೋಬಳಿ ಯಲ್ಲಿ ರುವ ಹಲವು ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿ ಹೊಳವನ ಹಳ್ಳಿಯ ಶ್ರೀನಿವಾಸ ಕ್ಲಿನಿಕ್, ಭ್ಯಾಗ್ಯಮ್ಮ ಕ್ಲಿನಿಕ್, ಅಕ್ಕಿರಾಂಪುರದ ಕರೀಂ ಕ್ಲಿನಿಕ್‌ಗಳ ದಾಖಲೆಗಳನ್ನು ಪರಿಶೀಲಿಸಿದರು. ನಂತರ ಈ ಎಲ್ಲಾ ಕ್ಲಿನಿಕ್‌ಗಳಲ್ಲಿ ನಕಲಿ ವೈದ್ಯರೆಂದು ತಿಳಿದು ಬಂದಿದ್ದು ಸದರಿ ಆಸ್ಪತ್ರೆಗಳನ್ನು ಮುಚ್ಚಿಸಲಾಗಿದೆ.
ಈ ಬಗ್ಗೆ ಪ್ರತಿಕಿಯಿಸಿದ ಜಿಲ್ಲಾ ವೈದ್ಯಾ ಧಿಕಾರಿ ಡಾ.ಚಂದ್ರಿಕಲಾ, ಜಿಲ್ಲೆಯಲ್ಲಿ 93 ನಕಲಿ ವೈದ್ಯರ ಕ್ಲಿನಿಕ್ ಇರುವ ಮಾಹಿತಿ ಯಿದೆ, ಕೊರಟಗೆರೆ ತಾಲೂಕಿನಲ್ಲಿ 5 ನಕಲಿ ಕ್ಲಿನಿಕ್ ಇದ್ದು, ಈ ಮೊದಲು 2 ಕ್ಲಿನಿಕ್‌ಗಳಿಗೆ ಬೀಗ ಮುದ್ರೆ ಹಾಕಲಾಗಿದೆ, ಉಳಿದ 3 ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿದ್ದು ಕ್ರಿಮಿನಲ್ ಕೇಸ್ ದಾಖಲಿಸ ಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.