ಪ್ರಗತಿ ಸಾಧಿಸದ ಅಧಿಕಾರಿಗಳೇ ನೇರ ಹೊಣೆ
Team Udayavani, Jul 1, 2020, 7:24 AM IST
ತುಮಕೂರು: ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸುವ ದಿಶಾ ಸಭೆಗೆ ಗೈರಾದ ಅಧಿಕಾರಿಗಳಿಗೆ ತಕ್ಷಣ ನೋಟಿಸ್ ನೀಡಿ ಎಂದು ಜಿಪಂ ಸಿಇಒ ಶುಭಾ ಕಲ್ಯಾಣ್‌ಗೆ ಸಂಸದ ಜಿ.ಎಸ್. ಬಸವರಾಜ್ ಖಡಕ್ ಸೂಚನೆ ನೀಡಿದರು. ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ದಿಶಾ ಸಭೆಯಲ್ಲಿ ಮಾತನಾಡಿದ ಸಂಸದರು, ಅತ್ಯಂತ ಪ್ರಮುಖ ವಾದ ಸಭೆಯಲ್ಲಿ ಅಧಿಕಾರಿಗಳು ಈ ಸಭೆಗೆ ಬಂದು ತಮ್ಮ ಇಲಾಖೆಯ ಪ್ರಗತಿಯ ಮಾಹಿತಿ ನೀಡಬೇಕು. ಗೈರು ಹಾಜರಾದ ಅಧಿಕಾರಿಗಳಿಗೆ ಜಿಲ್ಲೆಗೆ ಮಂಜೂರಾಗಿರುವ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಸಾಧಿಸದಿದ್ದಲ್ಲಿ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
ನಿರೀಕ್ಷಿತ ಗುರಿ ಸಾಧಿಸಿಲ್ಲ: ಕೇಂದ್ರದಿಂದ ಹಣ ಬಿಡುಗಡೆಯಾಗಿದ್ದರೂ ಕೆಲವು ಇಲಾಖೆ ಗಳು ನಿರೀಕ್ಷಿತ ಗುರಿ ಸಾಧಿಸಿಲ್ಲ. ಕೇಂದ್ರದಿಂದ ಅನುದಾನ ಮಂಜೂರಾಗಿದ್ದರೂ ರಾಜ್ಯ ಸರ್ಕಾರದ ಇಲಾಖೆಗಳೇ ಅನುಷ್ಠಾನಕ್ಕೆ ತರಬೇಕಾಗಿರುವುದರಿಂದ ಇಲಾಖಾಧಿಕಾರಿಗಳು ವಿಶೇಷ ಆಸಕ್ತಿವಹಿಸಿ ಪ್ರಗತಿ ಸಾಧಿಸಬೇಕು, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಎಲ್ಲಾ ಇಲಾಖೆಗಳು ತಾವು ಅನುಷ್ಠಾನ ಮಾಡುವ ಯೋಜನೆಗಳ ಮಾಹಿತಿಯನ್ನು ಕಡ್ಡಾಯವಾಗಿ ಭೌಗೋಳಿಕ ಮಾಹಿತಿ ವ್ಯವಸ್ಥೆ ಪೋರ್ಟಲ್‌ಗೆ ಅಪ್‌ಲೋಡ್ ಮಾಡಬೇ ಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪ್‌ಲೋಡ್ ಮಾಡಿ: ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಕೈಗೊಂಡಿರುವ ಯೋಜನೆ ಗಳು, ಪ್ರಸ್ತುತ ಪ್ರಗತಿಯಲ್ಲಿರುವ ಯೋಜನೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳ ಸಂಪೂರ್ಣ ಅಂಕಿ- ಅಂಶಗಳನ್ನು ತುಮಕೂರು ಜಿಐಎಸ್ ಪೋರ್ಟಲ್‌ನಲ್ಲಿ 1 ತಿಂಗಳೊಳಗಾಗಿ ಅಪ್ ಲೋಡ್ ಮಾಡಬೇಕು. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಲು ಅನುವಾಗುತ್ತದೆ ಎಂದರು.
ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಹಾಗೂ ಬಾಡಿಗೆ ಕಟ್ಟಡ ದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಗಳಿಗೆ ಸ್ವಂತ ನಿವೇಶನ ಗುರುತಿಸಲು ಗ್ರಾಪಂಗೆ ಸೂಚನೆ ನೀಡಬೇಕು. ಅಂಗನವಾಡಿ ಕಟ್ಟಡಗಳಲ್ಲಿ ಕಡ್ಡಾಯವಾಗಿ ನೀರು, ವಿದ್ಯುತ್ ಸೌಕರ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕಾಮಗಾರಿ ಶೀಘ್ರ ಮುಗಿಸಿ: ತುಮಕೂರು – ದಾವಣಗೆರೆ, ತುಮಕೂರು – ರಾಯ ದುರ್ಗ, ತುಮಕೂರು – ಅರಸೀಕೆರೆ ದ್ವಿಪಥ ರೈಲ್ವೆ ಯೋಜನೆ, ಸಿದ್ಧಗಂಗಾ ಮಠದ ಬಳಿ ರೈಲ್ವೆ ಮೇಲ್ಸೇತುವೆ, ಮತ್ತಿತರ ರೈಲ್ವೆ ಇಲಾಖೆ ಯೋಜನೆಗಳನ್ನು ತ್ವರಿತವಾಗಿ ಪೂರ್ಣ ಗೊಳಿಸಬೇಕೆಂದರು.
ರೈತರಿಗೆ ವಿಮಾ ಸೌಲಭ್ಯ: ಕೃಷಿ ಜಂಟಿ ನಿರ್ದೇಶಕಿ ರಾಜ ಸುಲೋಚನಾ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರ ನೋಂದಣಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಕಳೆದ 2019-20ನೇ ಸಾಲಿನಲ್ಲಿ 40,181 ರೈತರಿಗೆ ಒಟ್ಟಾರೆ 42.36 ಕೋಟಿ ರೂ.ಗಳ ವಿಮಾ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮಾತನಾಡಿ, ಮೊಬೈಲ್ ಮಣ್ಣು ಪರೀಕ್ಷಾ ಪ್ರಯೋಗಾಲಯವನ್ನು ಒದಗಿಸುವ ಪ್ರಸ್ತಾವನೆ ಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಸಲಹೆ ನೀಡಿದರು. ಮೊಬೈಲ್ ಮಣ್ಣು ಪರೀಕ್ಷಾ ಪ್ರಯೋಗಾಲಯದಿಂದ ರೈತರ ಜಮೀನಿಗೆ ಭೇಟಿ ನೀಡಿ ಸ್ಥಳದಲ್ಲಿಯೇ ಮಣ್ಣು ಪರೀಕ್ಷೆ ಮಾಡಬಹುದಾಗಿದೆ ಎಂದು ತಿಳಿಸಿದರು. ಡಾ.ಕೇಶವರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಂಸಿಕೃಷ್ಣ, ಜಿಪಂ ಅಧ್ಯಕ್ಷೆ ಲತಾ, ಮೇಯರ್ ಫರೀದಾ ಬೇಗಂ ಇದ್ದರು.
ಕೇಂದ್ರದ ಅಟಲ್ ಭೂಜಲ್ ಯೋಜನೆಗೆ ಜಿಲ್ಲೆಯ 6 ತಾಲೂಕುಗಳು ಆಯ್ಕೆಯಾಗಿದ್ದು, ಉಳಿದ 4 ತಾಲೂಕುಗಳಲ್ಲಿ ಜಲಾಮೃತ ಯೋಜನೆಯನ್ನು ಅನುಷ್ಠಾನಗೊಳಿಸ ಬೇಕು. ಈ ಯೋಜನೆಗಳ ಅನುಷ್ಠಾನ ಕ್ಕಾಗಿ ನೋಡಲ್ ಏಜೆನ್ಸಿಯಾಗಿ ಸಣ್ಣ ನೀರಾವರಿ ಇಲಾಖೆಯನ್ನು ನೇಮಕ ಮಾಡಲಾಗಿದೆ.
-ಜಿ.ಎಸ್.ಬಸವರಾಜ್, ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.