ಅಧಿಕಾರಿಗಳ ನಿರ್ಲಕ್ಷ್ಯ: ಕೊಬ್ಬರಿ ಬೆಲೆ ಕುಸಿತ
Team Udayavani, Jun 7, 2020, 6:11 AM IST
ತಿಪಟೂರು: ಅಧಿಕಾರಿಗಳ ಕೊರತೆಯಿಂದಾಗಿ ಕೊಬ್ಬರಿ ಬೆಲೆ ಇಳಿಕೆಯಾಗಿದೆ. ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ನಾಮಕೇವಾಸ್ತೆಯಲ್ಲಿದ್ದು, ಕೊಬ್ಬರಿಗೆ ಬೆಂಬಲ ಬೆಲೆ ಹಾಗೂ ನಫೆಡ್ ಕೇಂದ್ರ ಸ್ಥಾಪಿಸುವ ಬಗ್ಗೆ ಸರ್ಕಾರಕ್ಕೆ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ತಾಲೂಕು ಜೆಡಿಎಸ್‌ಮುಖಂಡ ಎಂ. ನಾಗರಾಜು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಪಿಎಂಸಿ ಕಾರ್ಯದರ್ಶಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ.
ಎಪಿಎಂಸಿಗೆ ಪ್ರತಿ ಹರಾಜು ಸಂದರ್ಭದಲ್ಲಿ ಕೇವಲ 4,500 ಚೀಲ ಕೊಬ್ಬರಿ ಮಾತ್ರ ರೈತರಿಂದ ಬಂದಿದ್ದು, ಇದರಿಂದ ಸೆಸ್ ಆದಾಯ ಕೂಡ ಕಡಿಮೆಯಾಗಿದೆ ಎಂದರು. ಹೊರಭಾಗಗಳಿಂದ ಹೆಚ್ಚು ಕೊಬ್ಬರಿ ಮಾರಾಟ ವಾಗುತ್ತಿದ್ದು ಎಪಿಎಂಸಿಗೆ ಕೊಬ್ಬರಿ ಸರಿಯಾಗಿ ಬಾರದೇ ಇರಲು ಅಧಿಕಾರಿಗಳು ಕೂಡ ಕಾರಣರಾಗಿದ್ದಾರೆ. ಎಪಿಎಂಸಿ ಮಾರುಕಟ್ಟೆಯಲ್ಲಿ 37 ಕೋಟಿ ರೂ. ಹಣವಿದ್ದು, ಆ ಹಣದಲ್ಲಿ ಎಪಿಎಂಸಿ ಆವರಣ ಸ್ವತ್ಛತೆ, ಕುಡಿವ ನೀರು, ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳನ್ನು ಪ್ರಾರಂಭಿಸಬಹುದು.
ಆದರೆ ಅಧಿಕಾರಿಗಳು ಯಾವುದೇ ಕೆಲಸ ಮಾಡದಿದ್ದರೂ ಬೇಕಾಬಿಟ್ಟಿ 3 ರಿಂದ 4 ಲಕ್ಷ ರೂ. ಬಳಸಿಕೊಳ್ಳುತ್ತಿದ್ದು, ಎಪಿಎಂಸಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿದರು. ತಾಲೂಕು ಜೆಡಿಎಸ್ ಕಾರ್ಯಾಧ್ಯಕ್ಷ ಶಿವಸ್ವಾಮಿ ಮಾತನಾಡಿ, ತಾಲೂಕಿನಲ್ಲಿ ಕೊಬ್ಬರಿ ಬೆಲೆ ಸೇರಿದಂತೆ ಅನೇಕ ಸಮಸ್ಯೆಗಳು ತಾಂಡವವಾಡುತ್ತಿದ್ದು ಜನಪ್ರತಿ ನಿಧಿಗಳು ಗಮನಹರಿಸುತ್ತಿಲ್ಲ. ಕೇಂದ್ರ ಸರ್ಕಾರ ರೈತರಿ ಗಿಂತ ಕೈಗಾರಿಕೆಗಳಿಗೆ ಸಾಲ ನೀಡಲು ಗಮನ ಹರಿಸುತ್ತಿದೆ.
ರೈತನಿಗೂ ಕೂಡ ಸಾಲ ನೀಡುವ ಸಂದರ್ಭದಲ್ಲಿ ಸರ್ಕಾರವೇ ಜಾಮೀನುದಾರ ಆಗಬೇಕು ಎಂದು ಒತ್ತಾಯಿಸಿದರು. ಜೆಡಿಎಸ್ ತಾ. ಉಪಾಧ್ಯಕ್ಷ ಉಮಾಮಹೇಶ್, ಎಪಿ ಎಂಸಿ ಮಾಜಿ ಉಪಾಧ್ಯಕ್ಷ ಎನ್.ಸಿ. ರಮೇಶ್, ರಾಜ್ಯ ಜೆಡಿಎಸ್ ಯುವ ಪ್ರಧಾನ ಕಾರ್ಯದರ್ಶಿ ಗುರು ಪ್ರಸನ್ನ, ತಾ.ಪ್ರಧಾನ ಕಾರ್ಯದರ್ಶಿ ರಾಜಶೇಖರ್, ಮುಖಂಡ ರಾದ ರಾಕೇಶ್, ತಿಮ್ಮೇಗೌಡ, ಈಶಣ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.