ಆನ್‌ಲೈನಿಗಿಂತ ಆಫ್ ಲೈನ್ ಕ್ಲಾಸೇ ಲೇಸು

ಅಂತಿಮ ಪದವಿ 450 ವಿದ್ಯಾರ್ಥಿಗಳಲ್ಲಿ ಮೂರು ವಿದ್ಯಾರ್ಥಿಗಳಿಗೆ ಮಾತ್ರಕಾಲೇಜಿನಲ್ಲಿ ಉಪನ್ಯಾಸ

Team Udayavani, Nov 24, 2020, 5:06 PM IST

ಆನ್‌ಲೈನಿಗಿಂತ ಆಫ್ ಲೈನ್  ಕ್ಲಾಸೇ ಲೇಸು

ತುಮಕೂರು: ಕೋವಿಡ್ ಲಾಕ್‌ಡೌನ್‌, ಅನ್‌ ಲಾಕ್‌ ಬಳಿಕ ಕಾಲೇಜುಗಳು ಪುನರಾರಂಭವಾಗಿಒಂದು ವಾರ ಕಳೆದಿದೆ. ಕಾಲೇಜುಗಳಿಗೆ ಬರುವವಿದ್ಯಾರ್ಥಿಗಳ ಸಂಖ್ಯೆ ತೀರಾ ವಿರಳವಾಗಿದೆ.ಒಂದು ಕಾಲೇಜಿನ ಅಂತಿಮ ವರ್ಷದ 450 ವಿದ್ಯಾರ್ಥಿಗಳಿಗೆ ಮೂವರು ವಿದ್ಯಾರ್ಥಿ ಗಳು ಮಾತ್ರ ಆಫ್ಲೈನ್‌ನಲ್ಲಿ ಪಾಠ ಕೇಳುತ್ತಿದ್ದಾರೆ.

ತುಮಕೂರು ವಿವಿ ವ್ಯಾಪ್ತಿಯ  ಸರ್ಕಾರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು, ಸಿದ್ಧ ಗಂ‌ಗಾ ಪದವಿಕಾಲೇಜು, ಸಿದ್ಧಗಂಗಾ ಡಿಪ್ಲೋಮಾಕಾಲೇಜು ಸೇರಿದಂತೆ ನಗರದ ವಿವಿಧಸ್ನಾತಕ ಪದವಿ, ಸ್ನಾತಕೋತ್ತರಪದವಿ, ಡಿಪ್ಲೋಮಾ ಕಾಲೇಜು ಗಳಲ್ಲಿ ತರಗತಿಗಳು ಸರ್ಕಾರದ  ಆದೇಶದ ಹಿನ್ನೆಲೆ ಕೋವಿಡ್‌ ಮಾರ್ಗಸೂಚಿ ಪಾಲನೆಯೊಂದಿಗೆ ತರಗತಿಗಳನ್ನು ಆರಂಭಿಸಿವೆ.

ಕಾಲೇಜಿಗೆ ಬರುವ ಮನಸ್ಸಿಲ್ಲ: ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ತರಗತಿ ಪ್ರವೇಶಕ್ಕೆ ಮುನ್ನಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸ್‌ ಕಡ್ಡಾಯಗೊಳಿಸಿ, ತರಗತಿ‌ಗಳಲ್ಲಿ ಸಾಮಾಜಿಕ ಅಂತರಕಾಪಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ. ಆದರೆ ಪೋಷಕರು ಕಾಲೇಜು ಪ್ರಾರಂಭವಾಗಿ ಒಂದು ವಾರ ಕಳೆದರೂ ಮಕ್ಕಳನ್ನು ಕಾಲೇಜು ಗಳಿಗೆ ಕಳುಹಿಸಲು ಮನಸ್ಸು ಮಾಡುತ್ತಿಲ್ಲಪೋಷಕರ ಅನುಮತಿ ಪತ್ರ ನೀಡುತ್ತಿಲ್ಲ.ಬೆರಳೆಣಿಕೆಯಷ್ಟು ವಿದ್ಯಾರ್ಥಿ-ವಿದ್ಯಾರ್ಥಿನಿಯರುಮಾತ್ರಕಾಲೇಜುಗಳತ್ತಮುಖಮಾಡಿದ್ದು,ಬಹುತೇಕ ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರುವ ಮನಸ್ಸು ಮಾಡಿಯೇ ಇಲ್ಲ.ತುಮಕೂರು ವಿ.ವಿ. ಕುಲಸಚಿವ ಪ್ರೊ. ಗಂಗಾನಾಯಕ್‌ ಪ್ರತಿಕ್ರಿಯಿಸಿ, ಕೋವಿಡ್‌ ಈ ವೇಳೆಯಲ್ಲಿ ಸರ್ಕಾರ ಮತ್ತು ಯುಜಿಸಿ ಮಾರ್ಗಸೂಚಿ ಅನುಸರಿಸಿ ಕಾಲೇಜುಗಳನ್ನುಪ್ರಾರಂಭ ಮಾಡಿ ಒಂದು ವಾರವಾಗಿದೆ. ಈಗ ಶೇ.9 ರಿಂದ 10 ರಷ್ಟು ವಿದ್ಯಾರ್ಥಿಗಳುಕಾಲೇಜಿಗೆ ಹಾಜರಾಗುತ್ತಿದ್ದಾರೆ ಎಂದರು.

ಮಾರ್ಗಸೂಚಿ ಪ್ರಕಾರ ಎಲ್ಲ ಮುಂಜಾಗ್ರತಾಕ್ರಮಗಳನ್ನು ಕೈಗೊಳ್ಳಲಾಗಿದೆ.ಕಾಲೇಜು ಆವರಣ ಹಾಗೂ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಲಾಗಿದೆ.ಅಗತ್ಯಮೂಲಭೂತಸೌಲಭ್ಯಕಲ್ಪಿಸಲಾಗಿದೆ,ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಿಸಲು ಸೂಚಿಸಲಾಗಿದೆ. ಕೋವಿಡ್‌ ಪರೀಕ್ಷೆ ಮಾಡಿಸಿಮಾಸ್ಕ್ ಧರಿಸಿ ಕಾಲೇಜಿಗೆ ಬರಬಹುದು ಎಂದರು. ಕಾಲೇಜಿಗೆ ಹಾಜರಾಗಲು ಬಯಸದ ವಿದ್ಯಾರ್ಥಿಗಳಿಗೆಆನ್‌ಲೈನ್‌ಪಾಠಮಾಡಲು ಸಹ ಕ್ರಮ ಕೈಗೊಳ್ಳಲಾ ಗಿದೆ. ಆನ್‌ಲೈನ್‌ನಲ್ಲಿ ಶೇ. 80 ವಿದ್ಯಾರ್ಥಿಗಳು ಪಾಠಕೇಳುತ್ತಿದ್ದಾರೆ ಎಂದರು.

ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನಿಸಿ ಅಗತ್ಯ ಕ್ರಮಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳುಮತ್ತು ಪೋಷಕರು ಆತಂಕ ಪಡುವ ಅಗತ್ಯವಿಲ್ಲ.ಎಲ್ಲ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾದರೆಹಂತ ಹಂತವಾಗಿ ಹಾಸ್ಟೆಲ್‌ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದರು.

ಆಫ್ಲೈನ್‌ ತರಗತಿಗೆ ವಿದ್ಯಾರ್ಥಿಗಳ ಒತ್ತಾಯ :  ಪದವಿ ಕಾಲೇಜುಗಳಲ್ಲಿ ಇದುವರೆಗೂ ಶೇ.9 ರಷ್ಟು ವಿದ್ಯಾರ್ಥಿಗಳ ಹಾಜರಾತಿ ಕಂಡು ಬರುತ್ತಿದ್ದು, ದಿನದಿಂದ ದಿನಕ್ಕೆ ವಿದ್ಯಾರ್ಥಿಗಳ ಹಾಜರಾತಿಹೆಚ್ಚುತ್ತಿದೆ. ವಿದ್ಯಾರ್ಥಿಗಳಕೋವಿಡ್‌ ಪರೀಕ್ಷೆ ವರದಿಯನ್ನು ಆರೋಗ್ಯಇಲಾಖೆ ಅಧಿಕಾರಿಗಳು48 ಗಂಟೆ ಬದಲು 24 ಗಂಟೆಯೊಳಗೆ ನೀಡಲುಕ್ರಮಕೈಗೊಳ್ಳಬೇಕು.ಈನಿಟ್ಟಿನಲ್ಲಿ ಆರೋಗ್ಯ ಇಲಾಖೆ ತ್ವರಿತವಾಗಿ ಕೆಲಸ ಮಾಡಬೇಕು ಆಫ್ಲೈನ್‌ ತರಗತಿ ಮಾಡಲು ಒತ್ತಾಯವಿದೆ ಎಂದು ಉನ್ನತ ಶಿಕ್ಷಣಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ್‌ ಹೇಳಿದರು.

ಆಪ್‌ಲೈನ್‌- ಆನ್‌ಲೈನ್‌ ಎರಡರಲ್ಲೂ ಶಿಕ್ಷಣ :  ತುಮಕೂರು ವಿವಿಯಲ್ಲಿ40 ಸಾವಿರ ಸ್ನಾತಕ5000 ಸ್ನಾತಕೋತ್ತರ ವಿದ್ಯಾರ್ಥಿಗಳಿದ್ದಾರೆ. ಅಂತಿಮ ವರ್ಷದಲ್ಲಿ10 ಸಾವಿರ ಸ್ನಾತಕ 1500ಸ್ನಾತಕೋತ್ತರ ವಿದ್ಯಾರ್ಥಿಗಳು ಇದ್ದು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆನ್‌ಲೈನ್‌ ಮತ್ತು ಆಫ್ಲೈನ್‌ ಎರಡೂ ನಡೆಯುತ್ತಿದೆ. ಹಂತಹಂತವಾಗಿ ವಿದ್ಯಾರ್ಥಿಗಳುಕಾಲೇಜಿಗೆ ಬರಲಿದ್ದಾರೆ ಎಂದು ತುಮಕೂರು ವಿವಿ ಕುಲಸಚಿವಕೆ.ಎನ್‌.ಗಂಗಾ ನಾಯಕ್‌ ತಿಳಿಸಿದರು.

ಪದವಿ ತರಗತಿ ಪ್ರಾರಂಭಿಸಿರುವುದು ಉತ್ತಮ ಬೆಳವಣಿಗೆ.ಮುಂಜಾಗ್ರತಾ ಕ್ರಮಗಳೊಂದಿಗೆ ಆಫ್ಲೈನ್‌ ತರಗತಿಗಳು ನಡೆಸುತ್ತಿರುವುದು ಅನುಕೂಲ. ನಾವು ಕೋವಿಡ್‌ ಪರೀಕ್ಷೆ ಮಾಡಿಸಿ ಮನೆಯವರ ಅನುಮತಿ ಪತ್ರ ಪಡೆದು ಬಂದಿದ್ದೇವೆ. ಮೋನಿಕಾ, ವಿವಿ ವಿದ್ಯಾರ್ಥಿನಿ

ತುಮಕೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾಕಾಲೇಜಿನಲ್ಲಿಒಟ್ಟು 1208 ವಿದ್ಯಾರ್ಥಿಗಳಿದ್ದಾರೆ. ಅಂತಿಮ ವರ್ಷದ ಮೂರು ವಿದ್ಯಾಥಿನಿಯರುಕಾಲೇಜಿಗೆ ಬಂದಿದ್ದರು. ಅವರಿಗೆ ಪಾಠ ಆರಂಭ ಮಾಡಿದ್ದೇವೆ. ಡಾ.ಟಿ.ಆರ್‌.ಲೀಲಾವತಿ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ

-ಚಿ.ನಿ.ಪುರುಷೋತ್ತಮ್

ಟಾಪ್ ನ್ಯೂಸ್

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.