ಸಂಜೆವರೆಗೂ ವ್ಯಾಪಾರಕ್ಕೆ ಅವಕಾಶ
Team Udayavani, May 22, 2020, 6:17 AM IST
ಕುಣಿಗಲ್: ಲಾಕ್ಡೌನ್ ನಿರ್ಬಂಧ ಸಡಿಲಿಕೆ ಹಿನ್ನೆಲೆಯಲ್ಲಿ ಷರತ್ತುಗಳು ಅನ್ವಯ ದಂತೆ ಬೆಳಗ್ಗೆ 6 ರಿಂದ ಸಂಜೆ 6 ರವೆರೆಗೆ ವ್ಯಾಪಾರ, ವಹಿವಾಟಿಗೆ ಅನುವು ಮಾಡಿ ಕೊಡಲಾಗಿದೆ. ವರ್ತಕರು, ಗ್ರಾಹಕರು ಸದ್ಬಳಕ್ಕೆ ಮಾಡಿಕೊಂಡಿಕೊಳ್ಳುವಂತೆ ಶಾಸಕ ಡಾ.ಎಚ್.ಡಿ.ರಂಗನಾಥ್ ಹೇಳಿದರು.
ತಾಪಂ ಸಭಾಂಗಣದಲ್ಲಿ ವರ್ತಕರ ಸಭೆಯಲ್ಲಿ ಮಾತನಾಡಿ, ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿ ಬೆಳಗ್ಗೆ 7 ರಿಂದ ಸಂಜೆ 7ಗಂಟೆವರೆಗೆ ವ್ಯಾಪಾರ ವಹಿವಾಟು ಗಳಿಗೆ ಅವಕಾಶ ಮಾಡಿಕೊಟ್ಟಿದೆ. ಆದರೆ ತಾಲೂಕಿನಲ್ಲಿ ಕೊರೊನಾ ತಡೆಗಟ್ಟುವ ದಿಸೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆವರೆಗೆ ವ್ಯಾಪಾರ ವಹಿವಾಟಿಕೆ ಅವಕಾಶ ನೀಡಲಾಗಿತ್ತು.
ಆದರೆ ವರ್ತ ಕರು ಮತ್ತು ಗ್ರಾಹಕರು ಮತ್ತಷ್ಟು ಸಮಯ ವನ್ನು ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ, ಈ ಕ್ರಮ ಕೈಗೊಳ್ಳಲಾಗಿದೆ. ವರ್ತಕರ, ಸಾರ್ವಜನಿಕರ ಸಹಕಾರದಿಂದ ತಾಲೂಕಿನಲ್ಲಿ ಈವರೆಗೂ ಕೊರೊನಾ ಕಾಣಿಸಿಕೊಂಡಿಲ್ಲ ತಡೆಗಟ್ಟಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ಹೇಳಿದರು. ವರ್ತಕರು ಗ್ರಾಹಕರಿಂದ ದುಪಟ್ಟ ಹಣ ಪಡೆಯುತ್ತಿದ್ದಾರೆ ಎಂದು ಸಭೆಯ ಲ್ಲಿದ್ದ ಜನರು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ರೈತರ ಮೇಲೆ ಹೊರೆ ಹಾಕಬೇಡಿ ಅಂಗಡಿಗಳ ಮುಂದೆ ಕಡ್ಡಾಯವಾಗಿ ದರಗಳ ಪಟ್ಟಿ ಹಾಕುವಂತೆ ವರ್ತಕರಿಗೆ ಸೂಚಿಸಿದರು. ತಹಶೀಲ್ದಾರ್ ವಿಶ್ವನಾಥ್ ಮಾತನಾಡಿ ನಾಲ್ಕನೇ ಲಾಕ್ಡೌನ್ ಮೇ 31ರವರೆಗೂ ಮುಂದುವರೆದಿದ್ದು 144 ಸೆಕ್ಷನ್ ಜಾರಿ ಯಲ್ಲಿ ಇದೆ ಎಂದರು. ಸಿಪಿಐ ನಿರಂಜನ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಆರ್.ರಮೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.