ಕಡ್ಡಾಯ ಮಾಸ್ಕ್ ಧರಿಸಲು ಆದೇಶ ನೀಡಿ
Team Udayavani, Jul 21, 2020, 8:28 AM IST
ಕೊರಟಗೆರೆ: ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜನರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ತಾಲೂಕು ಆಡಳಿತ ಕಡ್ಡಾಯ ಮಾಸ್ಕ್ ಧರಿಸಬೇಕೆಂದು ಆದೇಶ ಜಾರಿಗೊಳಿಸ ಬೇಕು ಎಂದು ಫ್ರೆಂಡ್ಸ್ ಗ್ರೂಪ್ ಅಧ್ಯಕ್ಷ ಕೆ.ಎನ್.ರವಿಕುಮಾರ್ ಒತ್ತಾಯಿಸಿದ್ದಾರೆ.
ಪಟ್ಟಣದಲ್ಲಿ ಕಳೆದ 15 ದಿನಗಳಿಂದ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಹಾಕಿಕೊಂಡು ಓಡಾಡುವಂತೆ ಮನವಿ ಮಾಡಿ ಮಾಸ್ಕ್ ಇಲ್ಲದವರಿಗೆ ಉಚಿತ ಮಾಸ್ಕ್ ವಿತರಿಸಿ ಮಾತನಾಡಿದರು.
ಕಟ್ಟುನಿಟ್ಟಿನ ಆದೇಶ ನೀಡಿ: ಮಾಸ್ಕ್ ಜಾಥಾ ಕಾರ್ಯಕ್ರಮದ ಮೂಲಕ ಜನರಲ್ಲಿ ಅರಿವು ಮೂಡಿಸುತ್ತಿದ್ದು, ಇದರೊಂದಿಗೆ ಕೋವಿಡ್ ವೈರಸ್ ಹರಡುವುದನ್ನು ತಡೆಗಟ್ಟಲು ಪಟ್ಟಣದ ವರ್ತಕರು ಸ್ವಯಂ ಲಾಕ್‌ಡ್‌ನ್ ಕಳೆದ ಒಂದು ವಾರಗಳಿಗೆ ಘೋಷಿಸಿದರೂ ತಾಲೂಕಿನಲ್ಲಿ ಪ್ರತಿನಿತ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಇದನ್ನು ಮನಗೊಂಡಿರುವ ತಾಲೂಕು ಆಡಳಿತ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಒಡಾಡುವಂತೆ ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ವಿಶೇಷ ಕಾಳಜಿವಹಿಸಿ: ಜನತೆಯಲ್ಲಿ ಅರಿವು ಮೂಡಿಸಿ ಫೇಸ್‌ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸುವಂತಾಗಬೇಕು. ಕೈಗಳಿಗೆ ಸ್ಯಾನಿಟೈಸರ್ ಬಳಸಿ ಆಗಾಗ ಸೋಪಿನಿಂದ ಕೈಗಳನ್ನು ತೊಳೆಯಬೇಕು. ಸಾಮಾಜಿಕ ಅಂತರ ವನ್ನು ಕಾಪಾಡಲು ಗಮನಹರಿಸಬೇಕು. ಅನ ಗತ್ಯವಾಗಿ ಓಡಾಡುವುದನ್ನು ನಿಲ್ಲಿಸಬೇಕು. ವಸ್ತು ಅಥವಾ ವ್ಯಕ್ತಿಗಳನ್ನು ಅನಾವಶ್ಯಕವಾಗಿ ಮುಟ್ಟಬಾರದು. ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಕಷಾಯ ಮತ್ತು ಬಿಸಿ ನೀರು ಕುಡಿಯಬೇಕು. ಮನೆಯಲ್ಲಿ ಚಿಕ್ಕ ಮಕ್ಕಳು, ವೃದ್ಧರ ಬಗ್ಗೆ ವಿಶೇಷ ಕಾಳಜಿವಹಿಸಿ ಎಂದು ಸಲಕೆ ನೀಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಅನೇಕ ಮಾರ್ಗ ಸೂಚಿಗಳ ಮೂಲಕ ಕಾರ್ಯನಿರ್ವಹಿಸುತ್ತಿದ್ದು ಅದರಂತೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಜಗ್ಗೇಶ್ ಅಭಿಮಾನಿ ಸಂಘದ ಅಧ್ಯಕ್ಷ ಮಲ್ಲಣ್ಣ, ಫ್ರೆಂಡ್ಸ್ ಗ್ರೂಪ್‌ನ ಸದಸ್ಯರಾದ ಶಿವಶಂಕರ್, ಜಗದೀಶ್, ಗಿರೀಶ್, ಶ್ರೀಕಾಂತ್, ಕೆ.ಎಲ್.ಮಂಜುನಾಥ್, ಗೋಪಿನಾಥ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.