ಬಜೆಟ್‌ನಲ್ಲಿ ಹಳೇ ಯೋಜನೆಗಳಿಗೆ ತೇಪೆ


Team Udayavani, Mar 6, 2020, 3:00 AM IST

bajetnaloi

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗುರುವಾರ 7ನೇ ಬಾರಿಗೆ ಮಂಡಿಸಿದ ಬಜೆಟ್‌ನಲ್ಲಿ ತುಮಕೂರು ಜಿಲ್ಲೆಗೆ ಬಂಪರ್‌ ಘೋಷಣೆ ಮಾಡಲಿದ್ದಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. ಹಳೆ ಯೋಜನೆಗಳಿಗೆ ತೇಪೆ ಹಾಕುವ ರೀತಿ ಯೋಜನೆ ಘೋಷಿಸಿದ್ದು, ಎತ್ತಿನಹೊಳೆ ನೀರೆತ್ತುವುದಕ್ಕೆ 1500 ಕೋಟಿ ರೂ., ತಿಪಟೂರಿನಲ್ಲಿ ತೆಂಗು ಆಧಾರಿತ ಕೈಗಾರಿಕಾ ಪಾರ್ಕ್‌, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೆಂದ್ರ, ಕುಣಿಗಲ್‌ಗೆ ಅಗ್ನಿಶಾಮಕ ಠಾಣೆ ಘೋಷಿಸಿದ್ದು, ಕಲ್ಪತರು ನಾಡಿನ ಜನರಿಗೆ ಮುಂಬರುವ ಯುಗಾದಿ ಬೇವೂ ಹೆಚ್ಚಿರದೆ, ಬೆಲ್ಲವೂ ಹೆಚ್ಚಿರದ ಕೊಡುಗೆ ನೀಡಿದ್ದಾರೆ.

ತುಮಕೂರು: ರಾಜ್ಯದ ರಾಜಧಾನಿಗೆ ಹತ್ತಿರವಾಗಿ ಎಲ್ಲಾ ಕ್ಷೇತ್ರದಲ್ಲೂ ಪ್ರಗತಿಯ ದಾಪುಗಾಲು ಹಾಕುತ್ತಿರುವ ಹಾಗೂ ಬೆಂಗಳೂರಿಗೆ ಉಪ ನಗರವಾಗಿ ಬೆಳೆಯುತ್ತಿರುವ ಕಲ್ಪತರು ನಾಡಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಜೆಟ್‌ನಲ್ಲಿ ಮಹತ್ವದ ಯೋಜನೆ ಪ್ರಕಟಿಸಿಲ್ಲ. ಜನ ನಿರೀಕ್ಷಿಸಿದ್ದ ಸರ್ಕಾರಿ ಮೆಡಿಕಲ್‌ ಕಾಲೇಜು, ತುಮಕೂರು-ಬೆಂಗಳೂರು ಮೆಟ್ರೋ, ವಿವಿ ಕ್ಯಾಂಪಸ್‌ ನಿರ್ಮಾಣಕ್ಕೆ ಅನುದಾನ ಬಗ್ಗೆ ಪ್ರಸ್ತಾಪಿಸದಿರುವುದು ನಿರಾಸೆ ಮೂಡಿಸಿದೆ.

ಎತ್ತಿನಹೊಳೆ ನೀರೆತ್ತುವುದಕ್ಕೆ 1500 ಕೋಟಿ ರೂ., ತಿಪಟೂರಿನಲ್ಲಿ ತೆಂಗು ಆಧಾರಿತ ಕೈಗಾರಿಕಾ ಪಾರ್ಕ್‌, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೆಂದ್ರ, ಕುಣಿಗಲ್‌ಗೆ ಅಗ್ನಿಶಾಮಕ ಠಾಣೆ ಘೋಷಿಸಿದ್ದಾರೆ. ತುಮಕೂರು ವಿಶ್ವವಿದ್ಯಾಲಯ ಪ್ರಾರಂಭವಾಗಿ 15 ವರ್ಷಗಳೇ ಕಳೆದಿದೆ. ಆದರೆ, ವಿವಿಗೆ ಸ್ವಂತ ಕ್ಯಾಂಪಸ್‌ ಇಲ್ಲ, ಈವರೆಗೂ ಇದರ ಕುರಿತು ಯಾವುದೇ ಸರ್ಕಾರಗಳೂ ಪ್ರಸ್ತಾಪ ಮಾಡಿಲ್ಲ. ಈ ಬಾರಿಯ ಬಜೆಟ್‌ನಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ ನಿರ್ಮಾಣಕ್ಕೆ 125 ಕೋಟಿ ರೂ. ಮೀಸಲಿಡುವರು ಎಂದು ಇಟ್ಟಿದ್ದ ನಿರೀಕ್ಷೆಯೂ ಹುಸಿಯಾಗಿದೆ.

ತುಮಕೂರು ಬೆಂಗಳೂರಿಗೆ ಉಪನಗರವಾಗಿ ಬೆಳವಣಿಗೆಯಾಗುತ್ತಿದ್ದು, ನಗರಕ್ಕೆ ಬೇರೆ ಭಾಗಗಳಿಂದ ಬಂದು ನೆಲೆಸುವವರ ಸಂಖ್ಯೆ ಹೆಚ್ಚುತ್ತಿದೆ. ಖಾಸಗಿ ಮೆಡಿಕಲ್‌, ಇಂಜಿನಿಯರಿಂಗ್‌ ಕಾಲೇಜುಗಳಿರುವುದರಿಂದ ವಿವಿಧ ಕಡೆಗಳಿಂದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಇಲ್ಲಿ ಬರುತ್ತಾರೆ. ಜೊತೆಗೆ ಬೆಂಗಳೂರು ಸಮೀಪವಿರುವುದರಿಂದ‌ ಅಲ್ಲಿ ಉದ್ಯೋಗ ಮಾಡುವವರೂ ತುಮಕೂರಿನಲ್ಲಿ ನೆಲೆಸುತ್ತಿದ್ದಾರೆ.

ನಗರದ ನಾಗರಿಕರಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಮಹಾನಗರಪಾಲಿಕೆಗೆ 100 ಕೋಟಿ ರೂ. ಅನುದಾನ ನೀಡಬೇಕೆಂದು ಶಾಸಕರು ಮನವಿ ಮಾಡಿದ್ದರು. ಆದರೂ ವಿಶೇಷ ಅನುದಾನ ಪ್ರಕಟಿಸದಿರುವುದು ನಿರಾಸೆ ಮೂಡಿಸಿದೆ. ತುಮಕೂರಿನಿಂದ ಬೆಂಗಳೂರಿಗೆ ಪ್ರತಿನಿತ್ಯ ಉದ್ಯೋಗ, ಇತರೆ ಕೆಲಸಕ್ಕೆ ಹೋಗುವರ ಸಂಖ್ಯೆ ಹೆಚ್ಚು. ಹಾಗಾಗಿ ಸಂಚರಿಸಲು ಮೆಟ್ರೋ ಯೋಜನೆ ವಿಸ್ತರಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆ. ಈ ಬೇಡಿಕೆ ಈ ಸಲದ ಬಜೆಟ್‌ನಲ್ಲೂ ಪೂರೈಕೆಯಾಗದಿರುವುದು ನಿರಾಸೆ ತಂದಿದೆ.

ಎತ್ತಿನಹೊಳೆಗೆ 1500 ಕೋಟಿ: ಕುಡಿಯುವ ನೀರಿನ ಹಾಹಾಕಾರ ಎದುರಿಸುತ್ತಿರುವ ತುಮಕೂರು, ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಶೀಘ್ರ ಕುಡಿಯುವ ನೀರು ಒದಗಿಸುವ ಸಲುವಾಗಿ “ಎತ್ತಿನಹೊಳೆ ಯೋಜನೆ’ಗೆ ಸರ್ಕಾರ ಆದ್ಯತೆ ನೀಡಿದ್ದು, ಸದರಿ ಯೋಜನೆಯ ಮೊದಲನೇ ಹಂತದ ಲಿಫ್ಟ್ ಕಾಂಪೋನೆನೆಂಟ್‌’ ಕಾಮಗಾರಿ ಪೂರ್ಣಗೊಳಿಸಿ ಮುಂಗಾರು ಹಂಗಾಮಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸಲು ಕಾಮಗಾರಿ ರೂಪಿಸಲಾಗಿದ್ದು, ಅದಕ್ಕಾಗಿ ಯೋಜನೆಗೆ 1500 ಕೋಟಿ ರೂ.ನೀಡಿದ್ದಾರೆ. ಇದರಿಂದ ಈ ಭಾಗದಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಕಾಮಗಾರಿ ಇನ್ನೂ ಚುರುಕಾಗಲಿದೆ.

ಕೈಗಾರಿಕಾ ಪಾರ್ಕ್‌: ಕಲ್ಪತರು ನಾಡು ಎಂದೇ ಪ್ರಖ್ಯಾತಿ ಪಡೆದಿರುವ ತುಮಕೂರು ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಹೆಚ್ಚು ತೆಂಗು ಬೆಳೆಯುವ ರೈತರಿದ್ದಾರೆ. ರೈತರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದು, ಇವರಿಗೆ ಅನುಕೂಲವಾಗುವಂತೆ ಅಭಿವೃದ್ಧಿಪಡಿಸಲು ಸರ್ಕಾರ ಬಜೆಟ್‌ನಲ್ಲಿ ತೆಂಗು ಆಧಾರಿತ ಕೈಗಾರಿಕಾ ಪಾರ್ಕ್‌ ತಿಪಟೂರಿನಲ್ಲಿ ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕ ಸಹಭಾಗಿತ್ವದಲ್ಲಿ ರಾಜ್ಯದ ವಿವಿಧ ಕಡೆಗಳಲ್ಲಿ ಸ್ಥಾಪನೆಯಾಗುತ್ತಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ ಮತ್ತು ಇದರಿಂದ ಕೈಗಾರಿಕಾ ಉದ್ಯಮ ಕ್ಷೇತ್ರಗಳ ಉನ್ನತ ಮಟ್ಟದ ಡೊಮೈನ್‌ಗಳಲ್ಲಿ ಕೌಶಲ್ಯ ತರಬೇತಿ ನೀಡುವುದರ ಮೂಲಕ ರಾಜ್ಯದ ಯುವ ಜನತೆಗೆ ಉದ್ಯೋಗ ಅವಕಾಶ ಹೆಚ್ಚಿಸುವುದು, ಮುಂದಿನ 5 ವರ್ಷಗಳಲ್ಲಿ 12,600 ವಿದ್ಯಾರ್ಥಿಗಳಿಗೆ ಉದ್ಯೋಗ ಕೊಡುಸುವ ಗುರಿ ಹೊಂದಲಾಗಿದೆ.

ಕುಣಿಗಲ್‌ಗೆ ಅಗ್ನಿಶಾಮಕ ಠಾಣೆ: ರಾಜ್ಯದ ವಿವಿಧ ಕಡೆಗಳಲ್ಲಿ 10 ನೂತನ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪನೆ ಮಾಡಲಾಗುತ್ತಿದ್ದು, ತುಮಕೂರು ಜಿಲ್ಲೆಯ ತಾಲೂಕು ಕೇಂದ್ರ ಕುಣಿಗಲ್‌ಗೆ ಅಗ್ನಿಶಾಮಕ ಠಾಣೆ ಘೋಷಿಸಿದ್ದು, ಕುಣಿಗಲ್‌ ತಾಲೂಕಿನ ಜನರಿಗೆ ಸಂತಸ ತಂದಿದೆ. ಅಲೆಮಾರಿ ಸಮುದಾಯಕ್ಕೆ ಒತ್ತು ನೀಡಿರುವುದು ಜಿಲ್ಲೆಯಲ್ಲಿರುವ ಅಲೆಮಾರಿ ಸಮುದಾಯಕ್ಕೆ ಅನುಕೂಲವಾಗಿದೆ.

ತುಮಕೂರು ಜಿಲ್ಲೆ ಸದಾ ಬರಗಾಲ ಎದುರಿಸುತ್ತಿದ್ದರೂ, ಕೃಷಿಪ್ರಧಾನವಾಗಿದೆ. ಈ ಬಜೆಟ್‌ನಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಮನ್ನಣೆ ನೀಡಿರುವುದು, ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ವಾರ್ಷಿಕ 10 ಸಾವಿರ ನೆರವು, ರೈತರ ಅಧಿಕ ಬಡ್ಡಿ ದರ ತಪ್ಪಿಸಲು ಹೊಸ ಕಾರ್ಯಕ್ರಮ ಜಾರಿಗೆ ತಂದಿರುವುದು, ಸಂಚಾರಿ ಕೃಷಿ ಹೆಲ್ತ್‌ ಕ್ಲಿನಿಕ್‌ ಸ್ಥಾಪನೆ, ಮಣ್ಣು, ನೀರು ಪರೀಕ್ಷೆಗೆ ಸಹಕಾರಿ, ರೈತರ ಮನೆಬಾಗಿಲಿಗೆ ಕೀಟನಾಶಕ ಒದಗಿಸಲು ಕ್ರಮ ಕೈಗೊಂಡಿರುವುದು ರೈತರಿಗೆ ಆಶಾದಾಯಕವಾಗಿದೆ. ರೈತರ ಬೆಳೆಗಳಿಗೆ ಉತ್ತಮ ಬೆಲೆ ಸಿಗುವಂತೆ, ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಮಾರುಕಟ್ಟೆ ಮಧ್ಯಪ್ರವೇಶಿಸಿ ಕೃಷಿ ಉತ್ಪನ್ನ ಖರೀದಿಸುವ ಆವರ್ತ ನಿಧಿಗೆ ಬಜೆಟ್‌ನಲ್ಲಿ 2 ಸಾವಿರ ಕೋಟಿ ಮೀಸಲಿಟ್ಟಿರುವುದು ರೈತರ ನೆರವಾಗಲಿದೆ.

* ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.