ಆಶ್ವಾಸನೆ ಈಡೇರಿಕೆಗೆ ಮುಂದಾಗದ ಅಧಿಕಾರಿಗಳು

Team Udayavani, Jun 22, 2019, 4:54 PM IST

22–June-40

ಪಾವಗಡ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಸಿ.ಬೋರಣ್ಣ ಮನೆಯಲ್ಲಿ ಊಟ ಸೇವಿಸಿದ್ದ ಸಿಎಂ

ಪಾವಗಡ: 20-20 ಸರ್ಕಾರದಲ್ಲಿ ಸಿಎಂ ಆಗಿದ್ದ ಎಚ್. ಡಿ.ಕುಮಾರಸ್ವಾಮಿ ಚಿಕ್ಕನಾಯಕನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡುವುದಾಗಿ ಪ್ರಕಟಿಸಿದಾಗ ಗ್ರಾಮದ ಜನರಲ್ಲಿ ಕಂಡಿದ್ದ ಕನಸು ಕೆಲವೇ ದಿನಗಳಲ್ಲಿ ಸುಳ್ಳಾದವು. ಆದರೆ ಕೆಲವೊಂದು ಕೆಲಸಗಳು ನಡೆದಿರುವುದಂತೂ ಸುಳ್ಳಲ್ಲ.

ತಾಲೂಕು ಕಸಬಾ ಹೋಬಳಿ ರಾಜವಂತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕನಾಯಕನಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಸಿ.ಬೋರಣ್ಣ ಮನೆಯಲ್ಲಿ 03-06- 2007ರಂದು ಊಟ ಸೇವಿಸಿ ಬಳಿಕ ಗ್ರಾಮದ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದರು. ನಂತರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ರಾತ್ರಿ ತಂಗಿದ್ದರು. ಈ ವೇಳೆ ಚಿಕ್ಕನಾಯಕನಹಳ್ಳಿ ಮಾತ್ರವಲ್ಲದೇ ಸುತ್ತ ಮುತ್ತಲಿನ ಗ್ರಾಮಸ್ಥರು ಆಗಮಿಸಿ ನಾಡಿನ ದೊರೆಗೆ ಅಹವಾಲು ಸಲ್ಲಿಸಿ ಪರಿಹಾರಕ್ಕೆ ಮನವಿ ಮಾಡಿದ್ದರು. ಈ ವೇಳೆ ಧನಾತ್ಮಕವಾಗಿ ಸ್ಪಂದಿಸಿದ ಕುಮಾರಸ್ವಾಮಿ ಗ್ರಾಮದ ಅಭಿವೃದ್ಧಿಗೆ ಹಲವು ಆಶ್ವಾಸನೆ ನೀಡಿದ್ದರು. ಇದರಿಂದ ಗ್ರಾಮಸ್ಥರೂ ಅಭಿವೃದ್ಧಿ ಕುರಿತು ಕನಸು ಕಂಡಿದ್ದರು.

ಕಾಣದ ಪ್ರಗತಿ: ಆದರೆ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಭರವಸೆ ಈಡೇರದೆ ಗ್ರಾಮದ ಅಭಿವೃದ್ಧಿಯೂ ಆಗಿಲ್ಲ. ಸರ್ಕಾರಿ ಅಧಿಕಾರಿಗಳು ಮುತುವರ್ಜಿ ವಹಿಸಿದ್ದರೆ ಕೆಲವೊಂದು ಪ್ರಗತಿ ಸಾಧ್ಯವಾಗುತಿತ್ತು. ಆದರೆ ಸ್ಥಳೀಯ ಜನಪ್ರತಿನಿಧಿಗಳು ಆ ಸಮಯದಲ್ಲಿ ಪ್ರಚಾರ ಪಡೆದುಕೊಂಡು ಸಿಎಂ ಆಶ್ವಾಸನೆ ಕಾರ್ಯ ರೂಪಕ್ಕೆ ತರುವಲ್ಲಿ ನಿರ್ಲಕ್ಷ್ಯ ವಹಿಸಿದರು. ಸಿಎಂ ಬಂದು ಹೋದರೂ ಗ್ರಾಮದಲ್ಲಿ ಏನೂ ಬದ ಲಾಗದ್ದರಿಂದ ಜನರೂ ಸುಮ್ಮನಾದರು.

ಅಂದು ನೀಡಿದ್ದ ಭರವಸೆ: ಗ್ರಾಮದಲ್ಲಿ 400ಕ್ಕೂ ಹೆಚ್ಚು ಕುಟಂಬಗಳಿರುವುದರಿಂದ ಪಡಿತರ ನೀಡುವ ವ್ಯವಸ್ಥೆ ಗ್ರಾಮದಲ್ಲಿ ಪ್ರಾರಂಭ, ಗ್ರಾಮಕ್ಕೆ ಬಸ್‌ ವ್ಯವಸ್ಥೆ, ಚರಂಡಿ, ರಸ್ತೆ, ಕುಡಿಯುವ ನೀರು, ಗ್ರಾಮದಲ್ಲಿನ ಗ್ರಂಥಾಲಯದ ದುರಸ್ತಿ, ಗ್ರಾಮದಲ್ಲಿರುವ ಪುರಾತನ ರಂಗನಾಥ ಸ್ವಾಮಿ ಹಾಗೂ ಆಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ, ಗುಡಿಸಲು ಮುಕ್ತ ಗ್ರಾಮವನ್ನಾಗಿಸಲು ಮನೆಗಳ ನಿರ್ಮಾಣಕ್ಕೆ ಪಟ್ಟಿ ಸಿದ್ಧಪಡಿಸಿ ನೀಡಲು ಅಧಿಕಾರಿಗಳಿಗೆ ಆದೇಶಿಸಿದ್ದರು. ವೃದ್ಧರಿಗೆ ಪಿಂಚಣಿ ಸೇರಿ ಹತ್ತು ಹಲವು ಭರವಸೆ ನೀಡಿದ್ದರು. ಆದರೆ ಇದ್ಯಾವುದೂ ಕಾರ್ಯರೂಪಕ್ಕೆ ತರಲು ಅಧಿಕಾರಿಗಳು ಮುಂದಾಗಲಿಲ್ಲ. ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಗಮನಕ್ಕೂ ತರಲಿಲ್ಲ.

ಆಗಿರುವ ಕೆಲಸಗಳು: ರಾಜವಂತಿ ಗ್ರಾಮದಿಂದ ಕೋಟೆ ಕೊತ್ತ್ತೂರು ಗ್ರಾಮದವರೆಗೂ ರಸ್ತೆ ದುರಸ್ತಿ ಮಾಡಿ ಡಾಂಬರೀಕರಣ ಮಾಡಲಾಗಿದೆ. ಗ್ರಾಮದಲ್ಲಿ ಕೆಲವು ಕಡೆ ಚರಂಡಿ ನಿರ್ಮಿಸಲಾಗಿದೆ. ಬಡವರ ವಾಸಿಸುವ ಕೆಲವು ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿ ಭಾಗ್ಯಜ್ಯೋತಿ ಯೋಜನೆ ಅನುಷ್ಠಾನ ಗೊಳಿಸುವ ಕೆಲಸ ಮಾಡಲಾಗಿದೆ.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

2-gubbi

Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ

4

Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

2

Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.