ಕುಡಿವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ
Team Udayavani, Jul 2, 2020, 6:43 AM IST
ತುಮಕೂರು: ಕೆಲವೇ ತಿಂಗಳಲ್ಲಿ ನಗರದಲ್ಲಿ ಕುಡಿವ ನೀರಿನ ಸಮಸ್ಯೆ ಬಗೆಹರಿಯಲಿದೆ. 200 ಕೋಟಿ ರೂ. ವೆಚ್ಚದಲ್ಲಿ 24/7 ಸ್ಕೀಂ ಅಡಿಯಲ್ಲಿ ನಗರಕ್ಕೆ ಕುಡಿವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ನಗರದ 2ನೇ ವಾರ್ಡ್‌ನ ಅಂತರಸನಹಳ್ಳಿ ಎಸ್‌ಎಲ್‌ಎನ್ ಬಡಾವಣೆಯಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಸಂಸದ ಜಿ.ಎಸ್. ಬಸವರಾಜು ಅವರು ಈ ಹಿಂದೆ ಅನುಮೋ ದನೆ ಮಾಡಿಸಿದ್ದ 200 ಕೋಟಿ ರೂ.ಗಳ ಅನುದಾನದಲ್ಲಿ ಈ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು. ನಗರದ ಅತ್ಯಂತ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಈ ಭಾಗವನ್ನು ನಾನು ಶಾಸಕನಾಗಿ ಆಯ್ಕೆ ಯಾದ ಮೇಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುಮಕೂರು ನಗರದ ಅಭಿವೃದ್ಧಿಗೆ ಶಾಸಕರ ಅನುದಾನದಲ್ಲಿ ಕೊಟ್ಟಂತಹ 15 ಕೋಟಿ ರೂ.ಗಳಲ್ಲಿ ವಿವಿಧ ಕಾಮಗಾರಿ ಗಳಿಗೆ ಚಾಲನೆ ನೀಡಲಾಗಿದೆ.
ಇದೇ ಅನುದಾನದಲ್ಲಿ ಅಂತರಸನಹಳ್ಳಿಯ ಎಸ್‌ಎಲ್ ಎನ್ ಬಡಾವಣೆಯಲ್ಲಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ 1.50 ಕಿ.ಮೀ ಉದ್ದದ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು. ಅಂತರಸನಹಳ್ಳಿಯ ಕೆಲವು ಪ್ರದೇಶಗಳು ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟರೆ, ಇನ್ನೂ ಕೆಲವು ಪ್ರದೇಶಗಳು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುತ್ತವೆ. ಯಾವ ರೀತಿ ಮಿಶ್ರಣ ಮಾಡಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದರು.
ಎಸ್‌ಟಿಪಿ, ಟಿಎಸ್‌ಪಿ ಅನುದಾನ ವನ್ನೂ ಈ ಬಡಾವಣೆಯ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಹೇಳಿದರು. ವೈದ್ಯರು ಮತ್ತು ಪತ್ರಕರ್ತರ ದಿನಾಚರಣೆ ಪ್ರಯುಕ್ತ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ವೈದ್ಯರಿಗೆ ಮತ್ತು ಪತ್ರಕರ್ತರಿಗೆ ಶುಭಾಶಯ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.