62 ಹಾಸ್ಟೆಲ್‌ಗೆ ಖಾಯಂ ವಾರ್ಡನ್ ಹುದ್ದೆ ಖಾಲಿ ;ಸಿಸಿಟಿವಿ ನಿರ್ವಹಣೆಯಲ್ಲಿಯೂ ವಿಫಲ

ರಾತ್ರಿವೇಳೆ ನಿದ್ರೆಗೆ ಜಾರುವ ಕಾವಲುಗಾರ ; ಪೋಕ್ಸೋ ಮತ್ತು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ

Team Udayavani, Jul 16, 2023, 11:40 PM IST

1wewee

ಕೊರಟಗೆರೆ: ಕೊರಟಗೆರೆ ಪಟ್ಪಣದ ಬಾಲಕಿಯರ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಯನ್ನ ತಡರಾತ್ರಿ ಆಟೋ ಹತ್ತಿಸಿಕೊಂಡು ಹೋಗಿದ್ದ ದುಗ್ಗೆನಹಳ್ಳಿಯ ಆಟೋಚಾಲಕ ಆರ್ಯಗೌಡ(24) ಬಂಧಿಸಲಾಗಿದೆ. ಆರೋಪಿಯ ಮೇಲೆ ಪೋಕ್ಸೋಕಾಯ್ದೆ ಮತ್ತು ಅಟ್ರಾಸಿಟಿ ಕಾಯ್ದೆಯಡಿ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ವೆಂಕಟೇಶ ನಾಯ್ಡು, ಕೊರಟಗೆರೆ ಪಿಎಸೈ ಚೇತನಗೌಡ ಭೇಟಿ ನೀಡಿ ತನಿಖೆಯನ್ನು ಇನ್ನಷ್ಟು ಚುರುಕು ಗೊಳಿಸಿದ್ದಾರೆ.

ಕಲ್ಪತರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ 102 ಹಾಸ್ಟೆಲ್‌ಗಳಲ್ಲಿ 40 ಕಡೆ ಮಾತ್ರ ಖಾಯಂ ವಾರ್ಡನ್‌ಗಳ ನೇಮಕವಾಗಿದೆ. ಬರೋಬ್ಬರಿ 62 ವಸತಿ ನಿಲಯಗಳ ವಾರ್ಡನ್ ಹುದ್ದೆಯೇ ಖಾಲಿ ಇದೆ.102 ವಸತಿ ಶಾಲೆಗಳಿಗೆ ಕಾವಲುಗಾರನ ನೇಮಕ ಇದ್ದರೂ ಭದ್ರತೆಯೇ ಮರೀಚಿಕೆಯಾಗಿದೆ. ನಿಲಯದ ಕಟ್ಟಡಗಳಲ್ಲಿ ನೆಪಮಾತ್ರಕ್ಕೆ ಸಿಸಿಟಿವಿ ಲಭ್ಯವಿದ್ದರೂ ನಿರ್ವಹಣೆಯೇ ಇಲ್ಲದಾಗಿ ಭಯವೇ ಇಲ್ಲದಾಗಿದೆ.

ತುಮಕೂರು ಜಿಲ್ಲೆಯ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಗುಬ್ಬಿ, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಕುಣಿಗಲ್ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ೧೦೨ ವಸತಿ ನಿಲಯಗಳಿವೆ. ಸರಕಾರಿ ಮೆಟ್ರಿಕ್ ನಂತರದ ಮತ್ತು ಪೂರ್ವದ 102 ವಸತಿ ಶಾಲೆಗಳಲ್ಲಿ 62 ಕಡೆ ಖಾಲಿಯಿವೆ. ವಾರ್ಡನ್ ಮತ್ತು ಕಾವಲಗಾರನ ಕೊರತೆಯಿಂದ ನಿರ್ವಹಣೆಗೆ ಸಮಸ್ಯೆಯಾಗಿದೆ.

ವಾರ್ಡನ್ ಇಲ್ಲದಿರುವ ವಸತಿ ಶಾಲೆಗಳ ನಿರ್ವಹಣೆಗೆ ಎರಡು ಕಡೆ ಒಬ್ಬರಿಗೆ ಜವಾಬ್ದಾರಿ ನೀಡಲಾಗಿದೆ. ಇನ್ನೂ ಕೇಲವು ಕಡೆ ಇಲಾಖೆಯ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ವಾರ್ಡನ್ ನೇಮಕಾತಿ ಕೊರತೆಯಿಂದ ಸ್ಥಳೀಯವಾಗಿ ಪ್ರತಿನಿತ್ಯ ಸಮಸ್ಯೆಗಳ ಸರಮಾಲೆಯೇ ಉದ್ಬವಿಸುತ್ತಿವೆ. ಅಧಿಕಾರಿಗಳ ಭಯವೇ ವಿದ್ಯಾರ್ಥಿಗಳಿಗೆ ಇಲ್ಲದೇ ತಡರಾತ್ರಿ ಇಂತಹ ದುರ್ಘಟನೆ ನಡಿಯೋದು ಸರ್ವೇ ಸಾಮಾನ್ಯ ಎಂಬುದು ಸ್ಥಳೀಯರ ಮಾತಾಗಿದೆ.

ಹಾಸ್ಟೆಲ್ ಗೆ ಜಂಟಿ ನಿರ್ದೇಶಕ ಭೇಟಿ
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಹಾಸ್ಟೇಲ್‌ಗೆ ಬೇಟಿನೀಡಿ ಮೆಟ್ರಿಕ್ ಪೂರ್ವ ಮತ್ತು ನಂತರದ ನಿಲಯದ ವಾರ್ಡನ್, ಕಾವಲುಗಾರಿಗೆ ನೋಟಿಸ್ ಜಾರಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಸ್ಟೆಲ್‌ನ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ ಸಿಸಿಟಿವಿ ನಿರ್ವಹಣೆ ಮತ್ತು ರಾತ್ರಿ ಪಾಳೇಯದ ಲೋಪಗಳ ಬಗ್ಗೆ ಮಾಹಿತಿ ಕಲೆಹಾಕಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

358 ವಿದ್ಯಾರ್ಥಿಗಳ ರಕ್ಷಣೆ ಯಾರದ್ದು..?
ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ-50, ಬಾಲಕರ ವಿದ್ಯಾರ್ಥಿ ನಿಲಯ-70, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ-90, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ-90 ಮತ್ತು ಅಕ್ಕಿರಾಂಪುರದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ-58 ಜನ ಸೇರಿ ಒಟ್ಟು358 ಮಂದಿ ವಿದ್ಯಾರ್ಥಿಗಳ ಬಳಿಯು ಮೊಬೈಲ್ ಸೌಲಭ್ಯವಿದೆ. ತಡರಾತ್ರಿ 1 ಗಂಟೆವರೆಗೆ ವಿದ್ಯಾರ್ಥಿಗಳು ಮೊಬೈಲ್ ಬಳಸುತ್ತಿರುವ ಪರಿಣಾಮ ಇಂತಹ ಸಮಸ್ಯೆ ಸೃಷ್ಟಿ ಆಗುತ್ತಿವೆ. ಸರಕಾರ ಮತ್ತು ಇಲಾಖೆ ಇದರ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ.

ನಿಲಯದ ಭದ್ರತೆ ಮತ್ತು ಕರ್ತವ್ಯ ಲೋಪ ಎಸಗಿದ ವಾರ್ಡನ್-ಕಾವಲುಗಾರ ಮೇಲೆ ಕ್ರಮ ಆಗುತ್ತದೆ. ಆರೋಪಿಯ ಮೇಲೆ ಪೋಕ್ಸೋ ಮತ್ತು ಅಕ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ನಿರ್ವಹಣೆ ಮತ್ತು ರಾತ್ರಿ ಪಾಳೇಯದ ಭದ್ರತೆಯ ಬಗ್ಗೆ ತನಿಖೆ ನಡೆಯುತ್ತೆ. ತುಮಕೂರು ಜಿಲ್ಲೆಯ 102 ಹಾಸ್ಟೆಲ್‌ನಲ್ಲಿ 62 ಕಡೆ ವಾರ್ಡನ್ ಹುದ್ದೆಯೇ ಖಾಲಿಯಿದೆ. ಹುದ್ದೆಭರ್ತಿಗೆ ಈಗಾಗಲೇ ಸರಕಾರಕ್ಕೆ ಮನವಿ ಮಾಡಲಾಗಿದೆ.
ಕೃಷ್ಣಪ್ಪ.ಎಸ್. ಜಂಟಿ ನಿರ್ದೇಶಕ. ಸಮಾಜ ಕಲ್ಯಾಣ ಇಲಾಖೆ. ತುಮಕೂರು

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.