ಪೋಲಿಯೋ ಮುಕ್ತದಿಂದ ಸದೃಢರಾಷ್ಟ್ರ

Team Udayavani, Mar 11, 2019, 7:40 AM IST

poli-sadru.jpg

ತುಮಕೂರು: ದೇಶದ ಮಕ್ಕಳಿಗೆ ಪೋಲಿಯೋ ಬಾರದಂತೆ ತಡೆಯಲು ದೇಶಾದ್ಯಂತ ನಡೆಯುವ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಜಿಲ್ಲೆಯಲ್ಲಿಯೂ ಸಮರೋಪಾದಿಯಲ್ಲಿ ಆರೋಗ್ಯ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಅಧಿಕಾರಿಗಳು ಕಾರ್ಯ ನಿರ್ವಹಿಸಿ, ಪೋಲಿಯೋ ಮುಕ್ತ ರಾಷ್ಟ್ರಮಾಡಲು ಮುಂದಾಗಬೇಕು ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶುಭಾ ಕಲ್ಯಾಣ್‌ ತಿಳಿಸಿದರು.

ನಗರದ ಅಗ್ರಹಾರ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಪಲ್ಸ್‌ ಪೋಲಿಯೋ ವತಿಯಿಂದ ಭಾನುವಾರ ನಡೆದ ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿ, ದೇಶದಲ್ಲಿ 2011 ಜನವರಿಯಿಂದ ಯಾವುದೇ ಹೊಸ ಪೋಲಿಯೋ ಪ್ರಕರಣ ಕಂಡು ಬಂದಿರುವುದಿಲ್ಲ ಹಾಗೂ ದೇಶವು ಈಗ ವಿಶ್ವ ಆರೋಗ್ಯ ಸಂಸ್ಥೆ ವತಿಯಿಂದ ಪೋಲಿಯೋ ಮುಕ್ತ ರಾಷ್ಟ್ರ ಎಂಬ ನಿರ್ಮೂಲನೆ ಪ್ರಮಾಣ ಪತ್ರವನ್ನು 2014ರಲ್ಲಿ ಪಡೆದಿದೆ ಎಂದು ನುಡಿದರು.

ಪೋಲಿಯೋ ಹಾಕಿಸಿ: ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಮೊದಲನೇ ಸುತ್ತಿನ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಇದಾಗಿದ್ದು, ಪೋಷಕರು 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸಬೇಕು. ತಮ್ಮ ಹತ್ತಿರದ ಪೋಲಿಯೋ ಬೂತ್‌ಗಳಿಗೆ ತೆರಳಿ ತಪ್ಪದೇ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಲೇಬೇಕು ಎಂದು ಮನವಿ ಮಾಡಿದರು. 

1,202 ಲಸಿಕಾ ಕೇಂದ್ರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಚಂದ್ರಿಕಾ ಮಾತನಾಡಿ, ಜಿಲ್ಲಾದ್ಯಂತ 5 ವರ್ಷದೊಳಗಿನ 2,13,679 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ಟೋಲ್‌ ಗೇಟ್‌ ಸೇರಿದಂತೆ 1,202 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 61 ಟ್ರಾನ್ಸಿಪ್ಟ್ ಲಸಿಕೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಪಲ್ಸ್‌ ಪೋಲಿಯೋ ಕಾರ್ಯಕ್ಕೆ 4,936 ಸಿಬ್ಬಂದಿ ಹಾಗೂ 239 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದ ಅವರು, ವಲಸೆ ಬಂದಿರುವ ಸಮುದಾಯ, ಕೊಳಚೆ ಪ್ರದೇಶ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಲಸಿಕೆ ಹಾಕಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವೀರಭದ್ರಯ್ಯ, ಆರ್‌ಸಿಎಚ್‌ ಡಾ.ಕೇಶವರಾಜ್‌, ಇನ್ನರ್‌ವ್ಹೀಲ್‌ನ ಪ್ರೇಮಾ, ನಾಲ್ಕು ರೋಟರಿ ಸಂಸ್ಥೆಗಳಾದ ಅಧ್ಯಕ್ಷರಾದ ಆಶಾ ಪ್ರಸನ್ನಕುಮಾರ್‌, ಡಾ. ವಿಜಯಕುಮಾರ್‌, ಶಿವಕುಮಾರ್‌, ಉದಯ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.