ಸೋಂಕು ಹೆಚ್ಚಿರುವಕಡೆ ಲಸಿಕೆಗೆ ಆದ್ಯತೆ
ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸೂಚನೆ
Team Udayavani, Aug 24, 2021, 4:42 PM IST
ತುಮಕೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚಿರುವ ಪ್ರದೇಶಗಳಲ್ಲಿನ ಜನರಿಗೆ ಮೊದಲ ಆದ್ಯತೆಯಾಗಿ ಮೊದಲ ಹಾಗೂ
2ನೇ ಡೋಸ್ ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್-19 ಸಂಬಂಧ ಜರುಗಿದ ಸಭೆಯಲ್ಲಿ
ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಾಗೃತಿ ಮೂಡಿಸಿ: ಸೋಂಕಿನ ನಿಯಂತ್ರಣಕ್ಕಾಗಿ ಲಸಿಕಾಕರಣ ಅಭಿಯಾನವನ್ನು ಎಲ್ಲಾ ತಾಲೂಕುಗಳಲ್ಲಿಯೂ ಯಶಸ್ವಿಗೊಳಿಸಬೇಕು. ಲಸಿಕೆ ಕುರಿತು ಜಾಗೃತಿ ಮೂಡಿಸುವ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಲಸಿಕಾರಣ ಕಾರ್ಯ ಮಾಡಬೇಕೆಂದರು.
ಪಾವಗಡ ತಾಲೂಕಿನಲ್ಲಿ ಮಾದರಿ ಯೋಜನೆ ರೂಪಿಸಿ ಒಂದೊಂದು ದಿನ ಒಂದೊಂದು ಗ್ರಾಪಂ ವ್ಯಾಪ್ತಿಯಲ್ಲಿ ಸಂಪೂರ್ಣ ಲಸಿಕೆ ನೀಡಬೇಕು.
ಲಸಿಕೆ ನೀಡುವ ಮುನ್ನ ಗ್ರಾಪಂನಲ್ಲಿ ಡಂಗೂರ ಸಾರಬೇಕು ಎಂದು ತಹಶೀಲ್ದಾರ್, ಇಒ, ತಾ. ಆರೋಗ್ಯಾಧಿಕಾರಿಗಳಿಗೆ ಸಲಹೆ ನೀಡಿದರು.
ಎಲ್ಲಾ ತಾಲೂಕುಗಳಲ್ಲಿಯೂ ನಿಗದಿತ ಗುರಿಯಂತೆ ಕೋವಿಡ್ ಪರೀಕ್ಷೆ ನಡೆಸಬೇಕು.
ಇದನ್ನೂ ಓದಿ:ಎಲ್ಐಸಿ ‘ವಿಶೇಷ ನವೀಕರಣ ಅಭಿಯಾನ’ದ ಬಗ್ಗೆ ನಿಮಗೆ ತಿಳಿದಿದೆಯೆ..? ಇಲ್ಲಿದೆ ಮಾಹಿತಿ
ಸೋಂಕಿತರನ್ನು ಕಡ್ಡಾಯವಾಗಿ ಹೋಂ ಐಸೋಲೇಷನ್ ಅಥವಾ ಕೋವಿಡ್ ಕೇರ್ ಸೆಂಟರ್‌ನಲ್ಲಿಟ್ಟು ಚಿಕಿತ್ಸೆ ನೀಡಬೇಕೆಂದರು. ಬೆಳೆ ಸಮೀಕ್ಷೆಗೆ ಹೆಚ್ಚು ಪ್ರಚಾರ: ಬೆಳೆ ಸಮೀಕ್ಷೆ ಆ್ಯಪ್ ಮೂಲಕ ರೈತರು ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಬಗ್ಗೆ ಎಲ್ಲಾ ತಹಶೀಲ್ದಾರ್, ಕೃಷಿ ಇಲಾಖೆಅಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿಗಳು ಹೆಚ್ಚಿನ ಪ್ರಚಾರ ಮಾಡಿ ಬೆಳೆ ಸಮೀಕ್ಷೆ ಕೈಗೊಳ್ಳಲು ರೈತರಿಗೆ ಅರಿವು ಮೂಡಿಸಬೇಕು ಎಂದು ನಿರ್ದೇಶಿಸಿದರು.
ಇದೇ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ ಮಾತನಾಡಿ, ಈ ಬಾರಿಶೇ.50 ಬೆಳೆ ಸಮೀಕ್ಷೆ ಪ್ರಗತಿ ರೈತರಿಂದಲೇ
ಆಗಬೇಕಿದೆ. ಹೀಗಾಗಿ ರೈತರಿಗೆ ಹೆಚ್ಚು ಅರಿವು ಮೂಡಿಸಿ ರೈತರೇ ಬೆಳೆ ಸಮೀಕ್ಷೆಕೈಗೊಳ್ಳಲುಕ್ರಮ ವಹಿಸಬೇಕೆಂದರು.
ಸಮರ್ಪಕವಾಗಿ ಅನುಷ್ಠಾನಕ್ಕೆ ತನ್ನಿ: ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಸಂಭಾವ್ಯ 3ನೇ ಅಲೆ ತಡೆಗಾಗಿ ಸರ್ಕಾರ ಆರೋಗ್ಯ ನಂದನ್ ಕಾರ್ಯಕ್ರಮ ರೂಪಿಸಿದ್ದು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು. ಶಾಲೆಗೆ ಆಗಮಿಸುವ ಮಕ್ಕಳಿಗೆ ತಪಾಸಣೆ, ಮಕ್ಕಳಿಗೆ ಪೌಷ್ಟಿಕಾಂಶ ಆಹಾರ, ಶಾಲೆಗೆ ತೆರಳುವ ಪೋಷಕರಿಗೆ ಲಸಿಕೆ ನೀಡಲು ಕ್ರಮವಹಿಸಬೇಕು. ಆರೋಗ್ಯಾಧಿಕಾರಿ, ಇಒ, ಶಿಕ್ಷಣಾಧಿಕಾರಿ ಹಾಗೂ
ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಸಮನ್ವಯ ಸಾಧಿಸಿ ಕಾರ್ಯಕ್ರಮ ಯಶಸಿ ಗೊಳಿಸಬೇಕು ಎಂದು ಸೂಚನೆ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್,ಅಪರಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್,ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.