ಜಿಲ್ಲೆಯಲ್ಲೂ ಲಸಿಕೆ ವಿತರಿಸಲು ಸಿದ್ಧತೆ
Team Udayavani, Dec 21, 2020, 4:39 PM IST
ತುಮಕೂರು: ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲೂ ಕೋವಿಡ್ ಲಸಿಕೆ ನೀಡಲು ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ಕುಮಾರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಮಾತನಾಡಿ,ಶೀಘ್ರದಲ್ಲೇ ಜಿಲ್ಲೆಯಲ್ಲೂ ಕೋವಿಡ್ ಲಸಿಕೆ ನೀಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ, ವೈದ್ಯರು,ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಹೆಲ್ತ್‌ಕೇರ್ ವರ್ಕರ್‌ಗಳಿಗೆ ಲಸಿಕೆ ನೀಡಲು ಅಗತ್ಯಕ್ರಮಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
ಪರಿಕರಗಳ ಸಿದ್ಧತೆ: ಆರ್‌ಸಿಎಚ್ ಅಧಿಕಾರಿ ಡಾ. ಕೇಶವರಾಜ್ ಸಭೆಗೆ ಮಾಹಿತಿ ನೀಡಿ, ಈಗಾಗಲೇಜಿಲ್ಲೆಯ ಸರ್ಕಾರಿ, ಖಾಸಗಿ ನರ್ಸಿಂಗ್ ಕಾಲೇಜು,ಮೆಡಿಕಲ್ ಕಾಲೇಜು, ಫಾರ್ಮಸಿಯಲ್ಲಿಕಾರ್ಯನಿರ್ವಹಿಸುತ್ತಿರುವ 19271 ಹೆಲ್ತ್‌ಕೇರ್‌ವರ್ಕರ್‌ಗಳನ್ನು ಕೋವಿಡ್ ಪೋರ್ಟಲ್‌ನಲ್ಲಿ ಅಪ್ ಲೋಡ್ ಮಾಡಲಾಗಿದೆ. ಲಸಿಕೆಯ ಶೇಖರಣೆ ಹಾಗೂ ವಿತರಣೆಗಾಗಿ ಜಿಲ್ಲೆಯ 134 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಕೋಲ್ಡ್‌ಚೈನ್ ಪಾಯಿಂಟ್‌ಗಳಲ್ಲಿ ಪರಿಕರಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಲಸಿಕೆಯನ್ನು ಶೇಖರಿಸಲು ಅಗತ್ಯವಿರುವ ಪರಿಕರಗಳ ಬಗ್ಗೆ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು. ತುರ್ತು ಸಂದರ್ಭದಲ್ಲಿ ಬಳಸಿಕೊಳ್ಳಲು ಹೆಚ್ಚುವರಿಯಾಗಿ ಪಶು ಸಂಗೋಪನಾ ಇಲಾಖೆಯಲ್ಲಿರುವ 29 ಕೋಲ್ಡ್‌ಚೈನ್ ಪಾಯಿಂಟ್‌ಗಳನ್ನು ಕಾಯ್ದಿರಿಸಲು ಪಶುವೈದ್ಯಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿನಿರ್ದೇಶನ ನೀಡಿದರು.
ಕೋವಿಡ್ ಲಸಿಕೆ ನೀಡುವ ಬಗ್ಗೆ ಮುಂದಿನ 10 ದಿನಗಳೊಳಗೆ ಗ್ರಾಪಂ ಚುನಾವಣೆ ದಿನಹೊರತುಪಡಿಸಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅಗತ್ಯತರಬೇತಿ ನೀಡಬೇಕು ಎಂದು ಸೂಚಿಸಿದರು.
ಲಸಿಕೆ ನೀಡಲು ಅಗತ್ಯಕ್ರಮ: ಮೊದಲ ಹಂತದ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದಾಗ ಮಾತ್ರ 2ನೇ ಹಂತದ ಲಸಿಕಾ ಕಾರ್ಯ ಯಶಸ್ವಿ ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ಎಲ್ಲಾ ಹೆಲ್ತ್ ಕೇರ್ ವರ್ಕ್ ರ್‌ಗಳು ತಪ್ಪದೇ ಲಸಿಕೆ ಪಡೆಯಬೇಕೆಂದು ಸೂಚಿಸಿದರು. ಕೋವಿಡ್ ಲಸಿಕೆಯನ್ನು ಮತದಾನ ಮಾದರಿಯಲ್ಲಿ ನೀಡಬೇಕು. ಮತದಾನ ಲಸಿಕಾಬೂತ್ ಗಳನ್ನು ಸ್ಥಾಪಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದರು. ಕೋವಿಡ್ ಲಸಿಕೆ ನೆಪವೊಡ್ಡದೆ ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿ 2 ವರ್ಷದ ಮ ಕ್ಕಳಿಗೆ ನೀಡಲಾಗುವ ಬಿಸಿಜಿ, ಪೆಂಟಾದಂತಹ ಲಸಿಕೆಗಳನ್ನು ತಪ್ಪದೇ ನೀಡಬೇಕು. ಜಿಲ್ಲೆಯಲ್ಲಿ ಶೇ.100ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿರುವ ಪಾವಗಡ, ಶಿರಾ,ಚಿಕ್ಕ ನಾಯಕನಹಳ್ಳಿ, ಮಧುಗಿರಿ ತಾಲೂಕಿನಲ್ಲಿ ಶೇ.100 ರಷ್ಟು ಲಸಿಕೆ ನಿಡಬೇಕೆಂದು ಸೂಚನೆ ನೀಡಿದರು. ಪ್ರತಿ ವರ್ಷದಂತೆ 2021ರ ಜ.17ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಯಂದಿರ ಮೇಲೆ ನಿಗಾ ವಹಿಸಿ: ಜಿಲ್ಲೆಯಲ್ಲಿ ಶಿಶು ಮತ್ತು ತಾಯಿಮರಣ ಹೆಚ್ಚುತ್ತಿದೆ, ಬಹುತೇಕಗರ್ಭಿಣಿಯರಲ್ಲಿ ಕಾಣುವ ರಕ್ತದೊತ್ತಡ, ಹೆರಿಗೆನಂತರದ ರಕ್ತಸ್ರಾವ ಮತ್ತಿತರ ಕಾರಣಗಳಿಂದ ತಾಯಿಮರಣ ಹಾಗೂ ಶ್ವಾಸಕೋಶದ ಸೋಂಕು, ದಿನ ತುಂಬದೆ ಜನಿಸುವುದರಿಂದ ಮಕ್ಕಳ ಮರಣ ಪ್ರಕರಣಗಳು ವರದಿಯಾಗಿವೆ ಎಂದು ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ತಾಯಿ-ಶಿಶು ಮರಣ ತಪ್ಪಿಸಲು ಗರ್ಭಧರಿಸಿದಾಗಲೇ ಆರೋಗ್ಯ ಕಾರ್ಯಕರ್ತೆಯರು ತಾಯಂದಿರ ಮೇಲೆ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಾ.ಮೋಹನ್ ದಾಸ್‌ಮಾತನಾಡಿ, ನಿಯಮ ಉಲ್ಲಂ ಸಿದ ಒಟ್ಟು 769ಪ್ರಕರಣಗಳನ್ನು ದಾಖಲಿಸಿಕೊಂಡು 76,510 ರೂ.ದಂಡಸೇರಿದಂತೆ 2016-17ನೇಸಾಲಿನಿಂದ ಈ ವರೆಗೂ 9429 ಪ್ರಕರಣಗಳನ್ನುದಾಖಲಿಸಿಕೊಂಡು1,098,730ರೂ.ಗಳ ದಂಡ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ಬೀದಿ ನಾಯಿಗಳ ಸಂಖ್ಯೆ ತಗ್ಗಿಸಿ: ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದ ಸಮನ್ವಯ ಸಮಿತಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ನಾಯಿಕಡಿತದ ಪ್ರಕರಣಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದರಲ್ಲದೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೋಳಿ, ಮಾಂಸದ ಅಂಗಡಿಗಳಮಾಲೀಕರು ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೇ ಇರುವುದರಿಂದ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ತ್ಯಾಜ್ಯ ವಿಲೇವಾರಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸದ ಅಂಗಡಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದರು. ರಾಷ್ಟ್ರೀಯ ಸಮಗ್ರ ಕಣ್ಗಾವಲು ಘಟಕದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ ಡಾ.ಪುರುಷೋತ್ತಮ ಜಿಲ್ಲೆಯಲ್ಲಿ ಕಳೆದ ಏಪ್ರಿಲ್‌ನಿಂದ 3 ಮಲೇರಿಯಾ, 24 ಡೆಂಗ್ಯೂ 67 ಚಿಕುನ್‌ಗುನ್ಯಾ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಸನತ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಜನವರಿಯಿಂದ ಡಿಸೆಂಬರ್‌ವರೆಗೆ 2269 ಮಂದಿಯಲ್ಲಿ ಕ್ಷಯರೋಗವನ್ನು ಪತ್ತೆ ಮಾಡಲಾಗಿದೆ. ಕೋವಿಡ್-19ಸಂದರ್ಭದಲ್ಲಿಕೋವಿಡ್‌ಶಂಕಿತರೆಂದು ದಾಖಲಾದ 60 ಮಂದಿಯಲ್ಲಿ ಕ್ಷಯ ಪತ್ತೆಯಾಗಿದೆ. ಅಲ್ಲದೆ 86 ಕೋವಿಡ್ ಸೋಂಕಿತರ ಪರೀಕ್ಷೆ ಮಾಡಲಾಗಿದ್ದು, ಇವರಲ್ಲಿ9ಮಂದಿಗೆ ಕ್ಷಯ ದೃಢಪಟ್ಟಿದೆ ಎಂದು ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ, ಡಾ.ಎಚ್. ವೀಣಾ, ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು, ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗೇಶ್‌ಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.