ಪ್ರಧಾನಿ ಭಾಷಣಕ್ಕೆ ಅಡ್ಡಿ: ಜಾವಡೇಕರ್ ಆಕ್ರೋಶ
Team Udayavani, Feb 10, 2018, 6:55 AM IST
ತುಮಕೂರು: ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಕಾಗ್ರೆಸಿಗರು ನಡೆದುಕೊಂಡ ರೀತಿ ಪ್ರಜಾಪ್ರಭುತ್ವಕ್ಕೆ ಮತ್ತು ಪ್ರಧಾನಿಯವರಿಗೆ ಮಾಡಿದ ಅಪಮಾನ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸತ್ತಿನ ಇತಿಹಾಸದಲ್ಲೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಪ್ರಧಾನಿಗಳ ಭಾಷಣಕ್ಕೆ ಕಾಂಗ್ರೆಸ್ ಸದಸ್ಯರು ಅಡ್ಡಿಪಡಿಸಿದ ಘಟನೆ ನಡೆದಿದೆ. ಸ್ವಾತಂತ್ರಾÂ ನಂತರ ಕಾಂಗ್ರೆಸ್ ನಡೆದುಕೊಂಡ ರೀತಿಯನ್ನು ಪ್ರಧಾನಿಗಳು ಸಂಸತ್ತಿನಲ್ಲಿ ಸವಿವರವಾಗಿ ವಿವರಿಸಿದ ನಂತರ ಕಾಂಗ್ರೆಸಿಗರ ಬಣ್ಣ ಜನರ ಮುಂದೆ ಬಯಲಾಗಿದ್ದು, ಇದರಿಂದ ಅವರು ಭಯಗೊಂಡಿದ್ದಾರೆ ಎಂದು ಹೇಳಿದರು.
ಕರ್ನಾಟಕದಲ್ಲಿ ಅರಾಜಕತೆ: ರಾಜ್ಯದಲ್ಲಿ ಅರಾಜಕತೆ ಉಂಟಾಗಿದೆ. ಅರಾಜಕತೆಯ ಬಗ್ಗೆ ವಿಧಾನಮಂಡಲದಲ್ಲಿ ವಿಪಕ್ಷಗಳು ಮಾಡುವ ಆಕ್ಷೇಪಗಳಿಗೆ ಉತ್ತರ ನೀಡದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳಿದ್ದಾರೆ. ಮಠಗಳು ಮತ್ತು ಅವು ನಡೆಸುವ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹತೋಟಿ ಪಡೆಯಲು ಧಾರ್ಮಿಕ ದತ್ತಿ ಕಾಯ್ದೆಗೆ ತಿದ್ದುಪಡಿ ತರಲು ಹೋಗಿ ಜನರು ಮತ್ತು ಮಠಾಧೀಶರಿಂದ ಛೀಮಾರಿಗೊಳಗಾಗಿದ್ದಾರೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಓವೈಸಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಹೇಳುವ ಮೂಲಕ ಗೃಹ ಸಚಿವರು ತಮ್ಮ ಬಾಲಿಶತನವನ್ನು ತೋರಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.