ಸಂಸದರಿಗೆ ಟಿಕೆಟ್ ವಂಚನೆ ವಿರೋಧಿಸಿ ಪ್ರತಿಭಟನೆ
Team Udayavani, Mar 17, 2019, 7:42 AM IST
ತುಮಕೂರು: ಸಂಸದ ಮುದ್ದಹನುಮೇಗೌಡರಿಗೆ ಟಿಕೆಟ್ ವಂಚನೆ ಆಗಿರುವುದನ್ನು ವಿರೋಧಿಸಿ, ಹಾಲಿ ಸಂಸದರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಯುವ ಕಾಂಗ್ರೆಸ್‌ನ ನೂರಾರು ಕಾರ್ಯಕರ್ತರು ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್. ರಾಜೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಟೌನ್‌ಹಾಲ್ ವೃತ್ತದಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಶನಿವಾರ ಜಮಾಯಿಸಿದ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‌ಗೆ ತುಮಕೂರು ಕ್ಷೇತ್ರ ಬಿಟ್ಟು ಕೊಟ್ಟಿರುವುದಕ್ಕೆ ಕಾಂಗ್ರೆಸ್‌ನ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಆಗ್ರಹ: ರಾಜ್ಯದಲ್ಲಿ ಹಾಲಿ ಸಂಸದರು ಇರುವ ಲೋಕಸಭಾ ಕ್ಷೇತ್ರಗಳ ಪೈಕಿ ತುಮಕೂರು ಕ್ಷೇತ್ರವನ್ನು ಮಾತ್ರ ಜೆಡಿಎಸ್‌ಗೆ ಬಿಟ್ಟು ಕೊಟ್ಟಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.
ಟಿಕೆಟ್ ನೀಡಲೇಬೇಕು: ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್.ರಾಜೇಂದ್ರ ಮಾತನಾಡಿ, ದೇಶದಲ್ಲಿ 44 ಜನ ಕಾಂಗ್ರೆಸ್ ಸಂಸದರು ಗೆದ್ದಿದ್ದಾರೆ. ಇವರ ಪೈಕಿ ಮುದ್ದಹನುಮೇಗೌಡರಿಗೆ ಟಿಕೆಟ್ ತಪ್ಪಿಸಲಾಗಿದೆ. ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟು ಕೊಡಬಾರದು. ಸಂಸದ ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಲೇಬೇಕು ಎಂದು ಪಕ್ಷದ ವರಿಷ್ಠರನ್ನು ಆಗ್ರಹಿಸಿದರು.
ಹಾಲಿ ಸಂಸದರ ಅಭಿವೃದ್ಧಿ ಕಾರ್ಯಗಳು, ಜನಪರ ಕಾಳಜಿ ಪಕ್ಷಕ್ಕೆ ಬಲ ತಂದು ಕೊಟ್ಟಿದೆ. ಪಕ್ಷದತ್ತ ಜನರ ಒಲವು ಇರುವ ವೇಳೆ ಕ್ಷೇತ್ರ ಬಿಟ್ಟು ಕೊಡುವುದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಲಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ರವರ ಮೂಲಕ ಹೈಕಮಾಂಡ್ ಗಮನ ಸೆಳೆಯಲಾಗುವುದು ಎಂದರು.
ವರಿಷ್ಠರಲ್ಲಿ ಮನವಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಮಾ.19ಕ್ಕೆ ಮುಂದೂಡಲಾಗಿದೆ. ಅಂದಿನ ಸಭೆಯಲ್ಲಿ ಪಕ್ಷದ ಹೈಕಮಾಂಡ್ ಈ ಕುರಿತು ಗಮನ ಹರಿಸಬೇಕು. ತುಮಕೂರು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಎಸ್.ಪಿ. ಮುದ್ದಹನುಮೇಗೌಡರನ್ನೇ ಘೋಷಣೆ ಮಾಡಬೇಕು ಎಂದು ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.
ಬಿಟ್ಟು ಕೊಡಬಾರದು: ಮಾಜಿ ಶಾಸಕ ಎಸ್. ಶಫಿ ಅಹಮದ್ ಮಾತನಾಡಿ, ಸಂಸದ ಮುದ್ದಹನುಮೇಗೌಡರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಪಕ್ಷದ ಕಾರ್ಯಕರ್ತರು ಹೊತ್ತಿದ್ದಾರೆ. ಈಗಾಗಲೇ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಕಾಂಗ್ರೆಸ್‌ನ ಎಲ್ಲ ನಾಯಕರನ್ನು ಭೇಟಿ ಮಾಡಿ ಕ್ಷೇತ್ರ ಉಳಿಸುವಂತೆ ಮನವಿ ಮಾಡಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷಕ್ಕೆ ಕ್ಷೇತ್ರ ಬಿಟ್ಟು ಕೊಡದೆ ಕಾಂಗ್ರೆಸ್‌ಗೆ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಸದ ಮುದ್ದಹನುಮೇಗೌಡ ಅವರ ಪರ ಜೈಕಾರ, ಜಯಘೋಷಗಳು ಮೊಳಗಿದವು. ಪ್ರತಿಭಟನೆಯಲ್ಲಿ ಮುಖಂಡರಾದ ಚೌದ್ರಿರಂಗಪ್ಪ, ಗೀತಾರುದ್ರೇಶ್, ಆಟೋರಾಜು, ತರುಣೇಶ್, ತು.ಬಿ. ಮಲ್ಲೇಶ್, ಪಾಲಿಕೆ ಸದಸ್ಯ ನಯಾಜ್ ಅಹಮದ್, ವೇಣುಗೋಪಾಲ್ ಸೇರಿದಂತೆ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.