ತೈಲಬೆಲೆ ಹೆಚ್ಚಳ ವಿರೋಧಿಸಿ ಪ್ರತಿಭಟನೆ
Team Udayavani, Jun 23, 2020, 6:54 AM IST
ತುಮಕೂರು: ನಿರಂತರವಾಗಿ ತೈಲಬೆಲೆ ಹೆಚ್ಚಳವನ್ನು ಖಂಡಿಸಿ ಸೋಮವಾರ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಸಮಾ ವೇಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸಿದರು.
ಹೋರಾಟ ಅನಿವಾರ್ಯ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ಕೋವಿಡ್ 19 ಸಂಕಷ್ಟದಲ್ಲಿ ಜನರು ಜೀವನ ನಡೆಸುವುದೇ ಕಷ್ಟವಾಗಿರುವಾಗ ಸರ್ಕಾರ ನಿರಂತರವಾಗಿ ತೈಲ ಬೆಲೆ ಹೆಚ್ಚಳ ಮಾಡುವ ಮೂಲಕ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ದೂರಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಕಷ್ಟಗಳಿಗೆ ಸ್ಪಂದಿಸದಿದ್ದರೆ ಬೀದಿಗಿಳಿದು ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.
ಸಂದೇಶ ರವಾನಿಸಿ: ಮಾಜಿ ಶಾಸಕ ಡಾ.ಎಸ್. ರಫೀಕ್ ಅಹಮದ್ ಮಾತನಾಡಿ, ಕಳೆದ ಒಂದು ತಿಂಗಳಿಂದ ಕಚ್ಚಾ ತೈಲ ಬೆಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದು ಬ್ಯಾರಲ್‌ಗೆ 40 ಡಾಲರ್ ಇದೆ. ಆದರೆ ಡಿಸೇಲ್ ಮತ್ತು ಪೆಟ್ರೋಲ್ ಬೆಲೆ ಕಳೆದ 14 ದಿನಗಳಲ್ಲಿ 6-10 ರೂ.ಗಳಿಗೆ ಹೆಚ್ಚಳವಾಗಿದೆ. ಇದರ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದು ಅವಕಾಶ ಕೇಳಿದರೂ ಸರ್ಕಾರಗಳು ಅನುಮತಿ ನೀಡದೇ ಪ್ರತಿರೋಧದ ಧ್ವನಿಗಳನ್ನು ಅಡಗಿಸುವ ಕೆಲಸ ಮಾಡುತ್ತಿವೆ. ನಮ್ಮ ಈ ಹೋರಾಟದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒಂದು ಸಂದೇಶ ರವಾನೆಯಾಗಬೇಕಿದೆ ಎಂದರು.
ಜನರು ವಿರೋಧಿಸಬೇಕು: ಕಾಂಗ್ರೆಸ್ ಮುಖಂಡ ಮುರಳೀಧರ ಹಾಲಪ್ಪ ಮಾತನಾಡಿ, 2012ರಲ್ಲಿ ಅಂದಿನ ಮನಮೋಹನ್‌ಸಿಂಗ್ ಸರಕಾರ ತೈಲ ಬೆಲೆಯನ್ನು 12 ಪೈಸೆಗಳಷ್ಟು ಹೆಚ್ಚಳ ಮಾಡಿದ್ದನ್ನು ಖಂಡಿಸಿ, ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಇಂದಿನ ಪ್ರಧಾನಿ ನರೇಂದ್ರಮೋದಿ 24 ಗಂಟೆಗಳ ಕಾಲ ಗುಜರಾತ್ ಬಂದ್ ನಡೆಸಿ, ಪ್ರಬಲವಾಗಿ ವಿರೋಧಿಸಿದ್ದರು.
ಕಳೆದ 14 ದಿನ ಗಳಲ್ಲಿ ತೈಲ ಬೆಲೆ ಶೇ. 10-12ರಷ್ಟು ಹೆಚ್ಚಳ ವಾದರೂ ಜನರು ವಿರೋಧಿಸುತ್ತಿಸುತ್ತಿಲ್ಲ. ಕಳೆದ 2014ರಿಂದ ಇಲ್ಲಿಯವರೆಗೂ ತೈಲ ಬೆಲೆಗಳ ಮೇಲೆ ವಿಧಿಸುವ ಸೆಸ್‌ನಿಂದಲೇ 17.80 ಲಕ್ಷ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಸಂಗ್ರಹಿಸಿದೆ. ಕಚ್ಚಾತೈಲದ ಬೆಲೆ ಕಡಿಮೆ ಯಾದರೂ ಅದರ ಲಾಭ ಜನ ಸಾಮಾನ್ಯರಿಗೆ ದೊರೆಯುತ್ತಿಲ್ಲ. ಇದು ಜನ ಸಾಮಾನ್ಯರಿಗೆ ತಲುಪಬೇಕು ಎಂದು ಆಗ್ರಹಿಸಿದರು.
ಮುಂದಿನ ಪೀಳಿಗೆಗೆ ಉಳಿಗಾಲವಿಲ್ಲ:ಜಿಪಂ ಸದಸ್ಯ ಕೆಂಚಮಾರಯ್ಯ ಮಾತನಾಡಿ, ನಿರಂ ತರವಾಗಿ ತೈಲಬೆಲೆ ಹೆಚ್ಚಳವಾದರೂ ಜನ ಸಾಮಾನ್ಯರಿಗೆ ಅದು ತಿಳಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವ ಮೂಲಕ ಬಿಜೆಪಿ ಕಾರ್ಯಕರ್ತರು ಬಡವರಿಗೆ ಆಗುತ್ತಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದನ್ನು ದಿಟ್ಟವಾಗಿ ಎದುರಿಸದಿದ್ದರೆ ಬಡವರಿಗೆ ಉಳಿಗಾಲವಿಲ್ಲ.
ಕೇಂದ್ರದ ಅನ್ಯಾಯ ಜನಸಾಮಾನ್ಯರಿಗೆ ತಿಳಿಯಬೇಕೆಂದರೆ, ಅದರ ವೈಫಲ್ಯಗಳನ್ನು ಜನರ ಮುಂದೆ ಬಿಚ್ಚಿಡಬೇಕು ಎಂದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಸ್.ಷಫಿ ಅಹಮದ್, ಮುಖಂಡರಾದ ಆರ್. ನಾರಾಯಣ್, ಡಿ.ಟಿ.ವೆಂಕಟೇಶ್, ನರಸೀ ಯಪ್ಪ, ಪಾಲಿಕೆ ಸದಸ್ಯರಾದ ನೈಯಾಜ್, ಮಹೇಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾರುದ್ರೇಶ್ ಮೊದಲಾದವರು ಪಾಲ್ಗೊಂಡಿದ್ದರು.
ಬೆಲೆ ಹೆಚ್ಚಳ ಸಮಂಜಸವಲ್ಲ: ನಗರ ಪಾಲಿಕೆ ಮೇಯರ್ ಫರೀದಾ ಬೇಗಂ ಮಾತನಾಡಿ, ದೇಶವೇ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಇರುವಂತಹ ಸಂದರ್ಭದಲ್ಲಿ ನಿರಂತರವಾಗಿ ತೈಲ ಬೆಲೆಗಳ ಹೆಚ್ಚಳ ಸಮಂಜಸವಲ್ಲ. ಇದನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಅವರಿಗೆ ಆಗುತ್ತಿರುವ ಅನ್ಯಾಯವನ್ನು ಮನವರಿಕೆ ಮಾಡಿಕೊಡುವ ಮೂಲಕ ಅವರನ್ನು ಎಚ್ಚರಿಸುವ ಕೆಲಸ ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಮಾಡಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.