ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ
Team Udayavani, Oct 6, 2020, 3:21 PM IST
ತುಮಕೂರು: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿ, ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಹಾಗೂ ದಲಿತ ಸಂಘಟನೆಗಳ ಒಕ್ಕೂಟ ದಿಂದ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅತ್ಯಾಚಾರ ನಡೆಸಿರುವ ಆರೋಪಿಗಳು, ಆಕೆಯ ಕೈ ಕಾಲ ಮುರಿದು, ನಾಲಿಗೆ ಕತ್ತರಿಸಿ ಸತ್ಯ ನುಡಿಯದಂತೆ ಮಾಡಿರುವುದು ನಾಗರಿಕಸಮಾಜ ತಲೆ ತಗ್ಗಿಸುವಂತಹ ವಿಚಾರವಾಗಿದೆ,ಕೂಡಲೇ ಸರ್ಕಾರ ಸಂತಸ್ತರು ನೀಡಿದ ಮರಣ ಪೂರ್ವ ಹೇಳಿಕೆಯನ್ನು ಪರಿಗಣಿಸಿ ಬಂಧಿಸಿರುವ ನಾಲ್ವರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣದ ದಾರಿ ತಪ್ಪಿಸಲುಹೊರಟಿರುವ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿಯ ನಡೆ ಅನುಮಾನಾಸ್ಪದವಾಗಿದ್ದು, ಪ್ರಕರಣವನ್ನು ಕೂಲಂಕಷ ತನಿಖೆಗೆ ಒಳಪಡಿಸಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಅರ್ಜುನ್ ಪಾಳ್ಳೆಗಾರ್ ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಎಚ್.ಜಿ.ರಂಗನಾಥ್ ಮಾತನಾಡಿ, ಉತ್ತರದ ಪ್ರದೇಶದಲ್ಲಿ ದಲಿತರು, ದಲಿತ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಳೆದ 10 ದಿನಗಳಲ್ಲಿ15ಕ್ಕೂ ಹೆಚ್ಚು ದಲಿತ ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣಗಳು ದಾಖಲಾಗಿವೆ.ಕೇಂದ್ರ ಸರಕಾರ ಯೋಗಿ ಆದಿತ್ಯನಾಥ್ ಸರಕಾರವನ್ನು ವಜಾಗೊಳಿಸಬೇ ಕೆಂದು ಆಗ್ರಹಿಸಿದರು. ಜಿಲ್ಲಾ ಗೌರವಾಧ್ಯಕ್ಷ ಮಧುಸೂ ದನ್, ಹರೀಶ್, ವಿನೋದ್, ರಾಜಣ್ಣ ಇದ್ದರು.
ಯುಪಿ ಸರ್ಕಾರ ವಜಾಗೊಳಿಸಿ: ಡೀಸಿಗೆ ಮನವಿ :
ತುಮಕೂರು: ಕೇಂದ್ರ ಸರ್ಕಾರ ಉತ್ತರ ಪ್ರದೇಶ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಒತ್ತಾಯಿಸಿ ಬಹುಜನ ಸಮಾಜ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬಿಎಸ್‌ಪಿ ಜಿಲ್ಲಾಧ್ಯಕ್ಷ ಮಹಮದ್ ಹಾಸೀಮ್ ಇಕ್ಬಾಲ್ ಮಾತನಾಡಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದಲಿತರು, ದಲಿತ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಬಿಎಸ್‌ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗಧಾಮಯ್ಯ ಮಾತನಾಡಿ, ಮುಖ್ಯಮಂತ್ರಿ ಆದಿತ್ಯನಾಥ ಸರ್ಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹತೋಟಿಯಲ್ಲಿಡುವಲ್ಲಿ ವಿಫಲವಾಗಿದೆ. ಸಾಕ್ಷ್ಯಗಳನ್ನು ನಾಶ ಪಡಿಸಿರುವ ಪೊಲೀಸರನ್ನುಸೇವೆಯಿಂದ ವಜಾ ಮಾಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿಗಳಾದ ಸೂಲಯ್ಯ, ರುದ್ರಪ್ಪ, ವಕೀಲರಾದ ರಂಗರಾಜು, ಮುಖಂಡರಾದ ಶಿವಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.