ಸೌಲಭ್ಯಕ್ಕೆ ವಸತಿ ರಹಿತರ ಧರಣಿ


Team Udayavani, Sep 15, 2020, 2:03 PM IST

ಸೌಲಭ್ಯಕ್ಕೆ ವಸತಿ ರಹಿತರ ಧರಣಿ

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಕೊಳಚೆ ಪ್ರದೇಶಗಳಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ, ಪಂಗಡ,ಅಲೆಮಾರಿ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೋಮವಾರ ವಸತಿ ರಹಿತರು ಪ್ರತಿಭಟನೆ ನೆಡೆಸಿದರು.

ನಗರದ ವಿವಿಧೆಡೆಯಿಂದ ಆಗಮಿಸಿದ ವಸತಿ ರಹಿತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಮಾವೇಶಗೊಂಡು ವಸತಿ ನೀಡ ಬೇಕೆಂದುಜಿಲ್ಲಾಡಳಿತವನ್ನುಒತ್ತಾಯಿಸಿದರು. ನಗರ ವ್ಯಾಪ್ತಿಯಲ್ಲಿ ಕೂಲಿ ಮಾಡಿಕೊಂಡು ಬಾಡಿಗೆ ಮನೆಗಳಲ್ಲಿ ಜೀವನ ಸಾಗಿಸುತ್ತಿರುವ ವಿವಿಧ ಸಮುದಾಯದ281ಕುಟುಂಬಗಳಿಗೆ ತುರ್ತಾಗಿ ಸರ್ಕಾರಿ ಭೂಮಿ ಗುರುತಿಸಿ ಮಂಜೂರು ಮಾಡಲು ಒತ್ತಾಯಿಸಿದರು.

ಈ ವೇಳೆ ನಮ್ಮ ಮನೆ ಹೋರಾಟ ಸಮಿತಿ ಮತ್ತು ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತ ರಕ್ಷಣಾ ಸಮಿತಿ ಕಾರ್ಯಕರ್ತರು ನಿವೇಶನ ರಹಿತರ ಪಟ್ಟಿ ಹಾಗೂ ರಾಜ್ಯಾದ್ಯಂತ ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡುವ ಸಂಪುಟ ಸಭೆಯ ನಿರ್ಣಯದಂತೆ ಮಾರ್ಗಸೂಚಿ ರೂಪಿಸಲು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕಎ.ನರಸಿಂಹಮೂರ್ತಿನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ರಾಕೇಶ್‌ಕುಮಾರ್‌, ಈ ಹಿಂದೆ ಕೊಳೆಗೇರಿ ಸಮಿತಿಯ ಕುಂದುಕೊರತೆ ಸಭೆಯಲ್ಲಿ ನಿವೇಶನ ರಹಿತರಿಗೆ ಭೂಮಿ ಗುರುತಿಸಲು ತಹಶೀಲ್ದಾರ್‌ಗಳಿಗೆ ಸೂಚಿಸಲಾಗಿದೆ. ಇತ್ತೀಚೆಗೆ ಜಿಲ್ಲೆಗೆ ಕಂದಾಯ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ನಿವೇಶನ ರಹಿತರಿಗೆ ಭೂಮಿ ಗುರುತಿಸಿಕೊಡಲು ಸೂಚಿಸಿದ್ದಾರೆ ಎಂದರು.

ಸಂಸದರು, ನಗರ ಶಾಸಕರು ನಿವೇಶನ ರಹಿತ ಕುಟುಂಬಗಳಿಗೆ ವಸತಿ ಕಲ್ಪಿ ಸಲು ಸರ್ಕಾರಿ ಭೂಮಿಗಳನ್ನು ಗುರುತಿಸಲು ಒತ್ತಾಯಿಸುತ್ತಿದ್ದು, ಕೊಳೆಗೇರಿ ಸಮಿತಿ ನೀಡಿರುವ ನಿವೇಶನ ರಹಿತರ ಪಟ್ಟಿಯನ್ನು ಪರಿಶೀ ಲಿಸಿ ಅರ್ಹ ಕುಟುಂಬಗಳಿಗೆ ನಿವೇಶನ ನೀಡಲು ಕ್ರಮವಹಿಸಲಾಗುವುದು. ಇದಕ್ಕೆ ಬೇಕಿರುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಕೋವಿಡ್ ನ ಈ ಸಂಕಷ್ಟದಲ್ಲಿ ಬಾಡಿಗೆ ಮನೆಗಳಲ್ಲಿರುವ ಕುಟುಂಬಗಳಿಗೆ ಮಾಲೀಕರು ಕಿರುಕುಳ ನೀಡಬಾರದು ಇಂತಹ ದೂರುಗಳಿದ್ದಲ್ಲಿ ಖುದ್ದು ಭೇಟಿ ಮಾಡುವಂತೆ ತಿಳಿಸಿದರು.

ನಂತರ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಹೊಂಬಯ್ಯನ ಪಾಳ್ಯದ ಶ್ವೇತಾ ಶಿರಾ ಗೇಟ್‌ ನಲ್ಲಿ40 ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ಕೊರೊನಾ ಸಂಕಷ್ಟಕ್ಕೆ ಸಿಲುಕಿ ದುಡಿಮೆಯಿಲ್ಲದೇ ನನ್ನ ಮಾಂಗಲ್ಯ ಮಾರಿ ಬಾಡಿಗೆ ಹಣ ಕಟ್ಟಿದ್ದೇನೆ ಎಂದು ಅಳಲು ತೋಡಿಕೊಂಡರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸ್ಲಂ ಜನಾಂದೋಲನಾ ಸಂಚಾಲಕರ ಎ,ನರಸಿಂಹ ಮೂರ್ತಿ ಮಾತನಾಡಿ ಕಳೆದ 20 ವರ್ಷ ಗಳಿಂದ ರಾಜ್ಯದಲ್ಲಿ ನಿವೇಶನ ನೀಡುವ ಪ್ರಕ್ರಿಯೆ ನಗರಪ್ರದೇಶಗಳಲ್ಲಿ ಸ್ಥಬ್ದಗೊಂಡಿದೆ, ದುರ್ಬಲ ವರ್ಗಗಳಿಗೆ ಮತ್ತು ನಗರ ಪ್ರದೇಶದಲ್ಲಿರುವ ನಿವೇಶನ ರಹಿತರಿಗೆ ಕರ್ನಾಟಕ ಭೂ ಮಂಜೂರಾತಿ ನಿಯಮ 1969ರ ಕಲಂ 18ಎ ರಡಿಯಲ್ಲಿ ಸರ್ಕಾರಿ ಭೂಮಿಗಳನ್ನು ಗುರುತಿಸಿ ನಿವೇಶನ ಹಂಚಿಕೆ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದರು.

ಅದರಂತೆ ನಗರದ ವಿವಿಧ ವಾರ್ಡ್‌ಗಳಲ್ಲಿ ಲಭ್ಯವಿರುವ ಸರ್ಕಾರಿ ಭೂಮಿಗಳ ವಿವರವನ್ನು ಫ‌.5 ರಂದು ಸ್ಲಂ ಜನರಕುಂದುಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ನೀಡಿದ್ದು ತಕ್ಷಣಕ್ಕೆ 281 ಕುಟುಂಬಗಳಿಗೆ ನಿವೇಶನ ಮಂಜೂರು ಮಾಡಬೇಕು ತಪ್ಪಿದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದೆಂದರು. ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದಶಂಕರಯ್ಯ , ಮೊಹಮ್ಮದ್‌ ಹಯತ್‌, ತಿರು ಮಲಯ್ಯ, ರಂಗನಾಥ್‌,ಮೋಹನ್‌, ಶಾರ ದಮ್ಮ, ಗಂಗಮ್ಮ, ಪುಟ್ಟರಾಜು ಹಾಗೂ ನಮ್ಮ ಮನೆ ಹೋರಾಟ ಸಮಿತಿಯ ಮಂಗಳಮ್ಮ, ಚಂದ್ರಿಕಾ,ಹನುಮಕ್ಕ, ಸುನಂದಮ್ಮ, ಗೋಪಾಲಯ್ಯ ಸೇರಿದಂತೆ ವಸತಿ ರಹಿತರಿದ್ದರು.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-koratagere

Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.