ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
Team Udayavani, Oct 6, 2020, 3:15 PM IST
ಕುಣಿಗಲ್: ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಪಟ್ಟಣದ ಕೋಟೆ ಮೊಹಲ್ಲಾ ಪ್ರದೇಶದ ನಾಗರಿಕರು ಪುರಸಭೆ ಎದುರು ಪ್ರತಿಭಟನೆ ನಡೆಸಿದರು. ಪುರಸಭೆ ಆಡಳಿತ ವೈಖರಿಗೆ ಬೇಸತ್ತ ಕೋಟೆ ಪ್ರದೇಶದ ಮೊಹಲ್ಲಾ ವಾಸಿಗಳು ಪುರಸಭೆ ಸದಸ್ಯೆ ಕೆ.ಎಂ ಅಸ್ಮಾ, ಮಾಜಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ನೇತೃತ್ವದಲ್ಲಿ ನೂರಾರು ಜನರು ಕೋಟೆಯಿಂದ ಪುರಸಭೆಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಡಳಿತದ ವಿರುದ್ಧ ಧಿಕ್ಕಾರ ಕೂಗಿದರು.
ಪುರಸಭಾ ಮಾಜಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಮಾತನಾಡಿ, ಕೋಟೆ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು 10 -15 ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದ್ದು ಇದರಿಂದಈ ಭಾಗದ ಜನರಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ. ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಟೆಂಡರ್ ಕರೆದು ಆರು ತಿಂಗಳಾದರೂ ಕಾಮಗಾರಿ ಪೂರ್ಣಗೊಳಿಸಿಲ್ಲ, ಈ ಸಂಬಂಧ ಹಲವು ಬಾರಿ ಮುಖ್ಯಾಧಿಖಾರಿ ಮತ್ತು ಎಂಜಿನಿಯರ್ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ, ಈ ಬಡಾವಣೆಯಲ್ಲಿ 400ಕ್ಕೂ ಹೆಚ್ಚು ಮನೆಯಿದ್ದು ಸ್ವಚ್ಛತಾ ಕಾರ್ಯ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.
ಈ ಖಾತೆಗೆ ಅರ್ಜಿ ನೀಡಿ ಹಲವು ದಿನಕಳೆದರೂ ಖಾತೆ ಮಾಡಿಕೊಟ್ಟಿಲ್ಲ, ಯುಜಿಡಿ ಕಾಮಗಾರಿ ಸಂಪೂರ್ಣ ಅವ್ಯವಸ್ಥೆಯ ಆಗರವಾಗಿದ್ದು, ಕಳೆದ ಹಲವು ವರ್ಷಗಳಿಂದ ಸಮರ್ಪಕ ಕಾಮಗಾರಿಹಾಗಿಲ್ಲ, ಗುಂಡಿ ಒಳಗೆ ವೃದ್ಧರು, ಮಹಿಳೆಯರು, ಮಕ್ಕಳು ಬಿದ್ದು ಗಾಯಗೊಂಡಿದ್ದಾರೆ. ಚುನಾಯಿತ ಪ್ರತಿನಿಧಿಗಳು ಇಲ್ಲದ ಕಾರಣ ಈ ಅವ್ಯವಸ್ಥೆಗೆ ಕಾರಣವಾಗಿದೆ ಎಂದು ಆರೋಪಿಸಿದ ಅವರು ಪುರಸಭಾ ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಊರಿನ ಹಿರಿಯ ನಾಗರಿಕರ ಸಭೆ ಕರೆದು ವಾರ್ಡ್ ಸಮಸ್ಯೆ ಕೇಳಿಲ್ಲ, ಇದರಿಂದ ನಾಗರಿಕರ ಕೆಲಸ ಕಾರ್ಯಗಳಿಗೆ ತೀವ್ರ ತೊಂದರೆ ಉಂಟಾಗಿದೆ, ಅಲ್ಲದೆ ಪುರಸಭಾ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ದೂರಿದರು.
ಮನವಿಗೆ ಕಿವಿಗೊಡದ ಪ್ರತಿಭಟನಾಕಾರರು: ನಿಮ್ಮ ಸಮಸ್ಯೆಗಳು ಏನು ಇದೆ ಎಂದು ಹೇಳಿ, ಅದಕ್ಕೆ ಸ್ಪಂದಿಸಿ ಕೆಲಸ ಮಾಡಿಕೊಡುತ್ತೇವೆ ಎಂದು ಪುರಸಭಾ ಮುಖ್ಯಾಧಿಕಾರಿ ಜಗರೆಡ್ಡಿ ಹಲವು ಬಾರಿ ಮನವಿ ಮಾಡಿದರೂ ಇದಕ್ಕೆ ಕಿವಿಗೊಡದ ಪ್ರತಿಭಟನಾಕಾರರು ತಹಶೀಲ್ದಾರ್ ಅವರು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು, ಬಳಿಕ ವಾರದ ಒಳಗೆ ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಾಧಿಕಾರಿಗಳು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟರು. ಪ್ರತಿಭಟನೆ ಯಲ್ಲಿ ಮುಖಂಡರಾದ ಅಜಾಂಪಾಷಾ, ನ್ಯಾಮತ್, ಆರಿಫ್, ಕಾಜಾವಾಲಿ, ಇಮ್ರಾನ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.