ಕರುನಾಡಿನಲ್ಲಿ ಕನ್ನಡಿಗನೇ ಸಾರ್ವಭೌಮ: ಪಿ.ಆರ್.ಸುಧಾಕರ್ ಲಾಲ್
ಹಿಂದಿ ದಿವಸ್ ವಿರುದ್ದ ಜೆಡಿಎಸ್ ಪ್ರತಿಭಟನೆ, ಕೊರಟಗೆರೆ ಕನ್ನಡಪರ ಸಂಘಟನೆಗಳ ಆಕ್ರೋಶ
Team Udayavani, Sep 14, 2022, 6:01 PM IST
ಕೊರಟಗೆರೆ: ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕರುನಾಡಿನಲ್ಲಿ ಸಾವಿರಾರು ವರ್ಷಗಳ ಇತಿಹಾಸವುಳ್ಳ ಕನ್ನಡ ಭಾಷೆಯನ್ನು ತುಳಿಯುವ ಪ್ರಯತ್ನ ಬೇಡ.ಹಿಂದಿ ದಿವಸ್ ಆಚರಣೆ ದಿನವನ್ನು ಕರಾಳ ದಿನವನ್ನಾಗಿ ನಾವು ಆಚರಣೆ ಮಾಡುತ್ತೇವೆ ಎಂದು ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ತಿಳಿಸಿದರು.
ಕೊರಟಗೆರೆ ಪಟ್ಟಣದ ಕಂದಾಯ ಇಲಾಖೆಯ ಆವರಣದಲ್ಲಿ ಜಾತ್ಯತೀತ ಜನತಾದಳ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ರಣಧೀರರ ವೇದಿಕೆ, ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಬುಧವಾರ ಏರ್ಪಡಿಸಲಾಗಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕ ರಾಜ್ಯದಲ್ಲಿ ಮಾಜಿ ಸಿಎಂ ಕುಮಾರಣ್ಣ ನೇತೃತ್ವದ ಜಾತ್ಯತೀತ ಜನತಾದಳ ಪಕ್ಷದಿಂದ ಹಿಂದಿ ದಿವಸ್ ವಿರುದ್ದವಾಗಿ ಪ್ರತಿಭಟನೆ ನಡೆಯುತ್ತಿದೆ. ಕನ್ನಡಿಗರ ಮೇಲೆ ಬಲವಂತಹ ಹಿಂದಿಬಾಷೆಯ ಏರಿಕೆಯ ಒತ್ತಡ ಬೇಡ. ನಮ್ಮ ನೆಲ, ಜಲ ಮತ್ತು ಬಾಷೆಯ ವಿಚಾರದಲ್ಲಿ ಸಮಸ್ಯೆಯಾದ್ರೇ ನಾವು ಸುಮ್ಮನಿರಲು ಸಾಧ್ಯವೇ ಇಲ್ಲ ಎಂದು ಎಚ್ಚರಿಕೆ ನೀಡಿದರು.
ಕೊರಟಗೆರೆ ಜೆಡಿಎಸ್ ಪಕ್ಷದ ಕಾರ್ಯಧ್ಯಕ್ಷ ನರಸಿಂಹರಾಜು ಮಾತನಾಡಿ ಹಿಂದಿ ದಿವಸ ಆಚರಣೆಗೆ ಆದೇಶ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ನಮ್ಮ ದಿಕ್ಕಾರವಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮಾತ್ರ ಅವಕಾಶ ನೀಡಬೇಕಿದೆ. ಜೆಡಿಎಸ್ ಪಕ್ಷ ಮತ್ತು ಕನ್ನಡಪರ ಸಂಘಟನೆಯಿಂದ ಸಾಕಷ್ಟು ವಿರೋಧವಿದೆ. ಕೇಂದ್ರ ಸರಕಾರದ ಬಲವಂತವಾಗಿ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡಬಾರದು ಎಂದು ಹೇಳಿದರು.
ಕೇಂದ್ರ ಸರಕಾರದ ಹಿಂದಿ ದಿವಸ್ ಆಚರಣೆಯ ಆದೇಶಕ್ಕೆ ಕರವೇಯಿಂದ ಖಂಡನೆ. ಕರ್ನಾಟಕ ಜನತೆಯ ತೆರಿಗೆಯ ಹಣದಿಂದ ಹಿಂದಿ ದಿವಸ್ ಆಚರಣೆ ಬೇಡ. ಭಾರತ ಮತ್ತು ಕರ್ನಾಟಕ ಆಳುತ್ತಿರುವ ರಾಜಕೀಯ ನಾಯಕರ ಕುತಂತ್ರವು ಹೆಚ್ಚುಕಾಲ ಇರುವುದಿಲ್ಲ. ಕನ್ನಡಿಗರನ್ನು ರಾಜಕೀಯ ನಾಯಕರು ಕೆಣಕುವ ಪ್ರಯತ್ನ ಮಾಡಬೇಡಿ ಎಂದು ಕೊರಟಗೆರೆ ಕರವೇ ಅಧ್ಯಕ್ಷ ಕೆ.ಎನ್.ನಟರಾಜ್ ಹೇಳಿದರು.
ಪ್ರತಿಭಟನೆಯಲ್ಲಿ ಕೋಳಾಲ ಜಿಪಂ ಮಾಜಿ ಸದಸ್ಯ ಶಿವರಾಮಯ್ಯ, ಜೆಡಿಎಸ್ ಪಕ್ಷದ ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್, ಪಪಂ ಉಪಾಧ್ಯಕ್ಷೆ ಭಾರತಿ ಸಿದ್ದಮಲ್ಲಪ್ಪ, ಕರವೇ ಅಧ್ಯಕ್ಷ ಕೆ.ಎನ್.ನಟರಾಜ್, ರಣಧೀರರ ವೇದಿಕೆ ಅಧ್ಯಕ್ಷ ದೇವರಾಜು, ಮಂಜುಸ್ವಾಮಿ, ಗ್ರಾಪಂ ಅಧ್ಯಕ್ಷರಾದ ಶಿವರಾಮಯ್ಯ, ರಮೇಶ್, ಮುಖಂಡರಾದ ಬಸವರಾಜು, ಮರುಡಪ್ಪ, ಸೈಯದ್‌ಸೈಪುಲ್ಲಾ, ರಾಜಣ್ಣ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.