ಯುಜಿಡಿ ಕಳಪೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ
Team Udayavani, Oct 19, 2019, 6:02 PM IST
ತಿಪಟೂರು: ನಗರದ ಗೊರಗೊಂಡನ ಹಳ್ಳಿಯಲ್ಲಿ ನಿರ್ಮಿಸುತ್ತಿರುವ ಯುಜಿಡಿ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಈ ಬಗ್ಗೆ ನಗರಸಭೆ ಅಧಿಕಾರಿಗಳು ಹಾಗೂ ಎಂಜಿನಿಯರ್ ಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ನಿವಾಸಿಗಳು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.
ಗೊರಗೊಂಡನಹಳ್ಳಿ ಕಾಲೋನಿ ನಿವಾಸಿ ಉಮೇಶ್ ಮಾತನಾಡಿ, ಯುಜಿಡಿ ಚೇಂಬರ್ ನಿರ್ಮಿಸಲು ಕಾಲೋನಿಯ ಮುಖ್ಯ ರಸ್ತೆಯ ಮುಂಭಾಗ ಗುಂಡಿ ತೋಡಿದ್ದು, ಜನರುಓಡಾಡಲು ಕಷ್ಟವಾಗಿದೆ. ಯುಜಿಡಿ ಚೇಂಬರ್ ನಿರ್ಮಾಣದಲ್ಲಿ ಕಳಪೆ ಗುಣಮಟ್ಟದ ವಸ್ತು ಬಳಸುತ್ತಿದ್ದು, ಕಡಿಮೆ ಪ್ರಮಾಣದಲ್ಲಿ ಸಿಮೆಂಟ್ ಬಳಸಲಾಗಿದೆ. ನಿರ್ಮಿಸಿರುವ ಚೇಂಬರ್‌ನಲ್ಲಿಚೇಂಬರ್‌ನ ಅರ್ಧದಷ್ಟು ಮಣ್ಣು ತುಂಬಿದ ಮೇಲೆ ಪ್ಲಾಸ್ಟಿಂಗ್ ಮಾಡಲಾಗುತ್ತಿದೆ. ಈ ಬಗ್ಗೆ ಎಂಜಿನಿಯರ್ ಗಮನಕ್ಕೆ ತಂದರೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕಾಮಗಾರಿಯಿಂದ ಕಾಲೋನಿಗೆ ಕುಡಿಯುವ ನೀರು ಇಲ್ಲ ದಂತಾಗಿದೆ ಸಂಬಂಧಪಟ್ಟ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಬಂದು ಕಳಪೆ ಕಾಮಗಾರಿ ನಿಲ್ಲಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕಾಲೋನಿಯ ನಿವಾಸಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.