ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ ಪ್ರಕಟ
Team Udayavani, Sep 2, 2019, 4:37 PM IST
ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಬಿಡುಗಡೆ ಮಾಡಿದರು.
ತುಮಕೂರು: ಜಿಲ್ಲಾದ್ಯಂತ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ, ದೋಷರಹಿತ ಮತದಾರರ ಪಟ್ಟಿ ತಯಾರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.
ಅರ್ಹರು ಮತದಾನದಿಂದ ವಂಚಿತರಾಗದಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ಬೂತ್ ಮಟ್ಟದ ಅಧಿಕಾರಿಗಳು ಕಳುಹಿಸುವ ಪ್ರತಿ ವರದಿ ಕೂಲಂಕಷವಾಗಿ ಪರಿಶೀಲಿಸಿ ತದನಂತರ ಪಟ್ಟಿ ತಯಾ ರಿಸುವಂತೆ ಕಂದಾಯ ನಿರೀಕ್ಷಕರು ಮತ್ತು ಗ್ರಾಮಲೆಕ್ಕಿಗರಿಗೆ ಎಚ್ಚರಿಕೆ ನೀಡಿದರು.
ಬಿಎಲ್ಒಗಳಿಂದ ಪರಿಶೀಲನೆ: ಜಿಲ್ಲಾದ್ಯಂತ ಸೆ.1ರಿಂದ ಅ. 30ರವರೆಗೆ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಈ ವೇಳೆ ಜಿಲ್ಲೆಯ ಪ್ರತಿ ಮತದಾರರ ಮನೆಗೂ ಬಿಎಲ್ಒಗಳು ಹೋಗಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.
ಒಂದು ವೇಳೆ ಬೇರೆ ಕಡೆಗೆ ಕುಟುಂಬ ಬದಲಾಗಿದ್ದರೆ ಅವರಿದ್ದ ಮನೆಗೆ ನೊಟೀಸ್ ಅಂಟಿಸಿ ಅದನ್ನು ವಿಡಿಯೋ ಮಾಡಿ ವರದಿ ಸಲ್ಲಿಸಬೇಕು. ಈ ಎಲ್ಲಾ ಪ್ರಕ್ರಿಯೆಗಳ ನಂತರವೇ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಿಗದಿತ ಅರ್ಜಿ ನಮೂನೆ: ಸಮಗ್ರ ಮತದಾರರ ವಿಶೇಷ ಪರಿಷ್ಕರಣೆ ಸಂದರ್ಭ ಅ. 1ಕ್ಕೆ 18 ವರ್ಷ ತುಂಬುವ ಪ್ರತಿ ವ್ಯಕ್ತಿಯೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ತೆಗೆದು ಹಾಕುವುದು, ಹಾಲಿ ಮತದಾರರು ಗುರುತಿನ ಚೀಟಿಯಲ್ಲಿರುವ ಲೋಪದೋಷ ಸರಿಪಡಿಸಿಕೊಳ್ಳಲು, ಮತಗಟ್ಟೆ ಬದಲಾವಣೆಗೆ ಅವಕಾಶವಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ಜೊತೆಗೆ, ಸಾಮಾನ್ಯ ಸೇವಾ ಕೇಂದ್ರ, ಕರ್ನಾಟಕ ಒನ್, ಅಟಲ್ ಜನಸ್ನೇಹ ಕೇಂದ್ರ, ಮತಗಟ್ಟೆ ಅಧಿಕಾರಿ, ಬಾಪೂಜಿ ಸೇವಾ ಕೇಂದ್ರಗಳಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು ಪರಿಷ್ಕರಣೆ ಮಾಡ ಬಹುದಾಗಿದೆ. ಈ ವಿಷಯದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ತಪ್ಪು ಮರುಕಳಿಸದಿರಲಿ: ಮುಂದಿನ ವರ್ಷದ ಫೆಬ್ರವರಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬರುವ ಸಾಧ್ಯತೆಯಿದೆ. ಆ ಸಂದರ್ಭ ಈ ವರ್ಷದ ಅಕ್ಟೋಬರ್‌ನಲ್ಲಿ ಪ್ರಕಟಿಸುವ ಕರಡು ಮತದಾರರ ಪಟ್ಟಿಯೇ ಚಲಾವಣೆಗೆ ಬರಲಿದೆ. ಆದ್ದರಿಂದ ಎಚ್ಚರಿಕೆ ಯಿಂದ ಮತದಾರರ ಪಟ್ಟಿ ತಯಾರಿಸಬೇಕು. ಕಳೆದ ಲೋಕಸಭಾ ಚುನಾವಣೆ ಕೊನೆಯ ಕ್ಷಣದಲ್ಲಿ ತುಮ ಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿ ಇನ್ನಿ ತರ ಕಡೆ ಪಟ್ಟಿಯಲ್ಲಿ ಹೆಸರಿಲ್ಲದೆ ಕೆಲವರು ಮತ ದಾನದಿಂದ ವಂಚಿತರಾದರು. ಈ ಬಾರಿ ತಪ್ಪು ಮರು ಕಳಿಸದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.
ತಹಶೀಲ್ದಾರ್ ಯೋಗಾನಂದ್, ಚುನಾವಣಾ ತಹ ಶೀಲ್ದಾರ್ ನಾಗಭೂಷಣ್, ನರಸಿಂಹರಾಜು, ಶಿರಸ್ತೆ ದಾರ್ ಜಯಪ್ರಕಾಶ್, ಆರ್.ಐ ಶಿವಣ್ಣ, ಗ್ರಾಮ ಲೆಕ್ಕಿ ಗರಾದ ಮುರಳೀಧರ್, ಶ್ರೀನಿವಾಸ್, ಸ್ವಿಪ್ ಕಮಿಟಿ ಸದಸ್ಯರಾದ ಚಂದ್ರಶೇಖರ್, ಶ್ರೀನಿವಾಸ್‌ಮೂರ್ತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.