ಅನುಮತಿಯಿಲ್ಲದೇ ಜಾಹೀರಾತು ಅಂಟಿಸಿದರೆ ಶಿಕ್ಷೆ
Team Udayavani, Apr 1, 2023, 4:19 PM IST
ತುಮಕೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ತಿ ಹಾಗೂ ತೆರೆದ ಸ್ಥಳಗಳನ್ನು ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ್ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕರ್ನಾಟಕ ಓಪನ್ ಪ್ಲೇಸಸ್ ಪ್ರಿವೆನ್ಶನ್ ಆಫ್ ಡಿಸ್‌ಫಿಗರ್ ಮೆಂಟ್ ಕಾಯ್ದೆ 3, 4, 5, 6 ಮತ್ತು 8ರನ್ವಯ ಯಾವುದೇ ವ್ಯಕ್ತಿ ಅಥವಾ ಮತ್ತೂಬ್ಬ ವ್ಯಕ್ತಿ ಮೂಲಕ ಸ್ಥಳೀಯ ಆಡಳಿತದ ಲಿಖಿತ ಅನುಮತಿಯಿಲ್ಲದೆ ಸಾರ್ವಜನಿಕ ವೀಕ್ಷಣೆಗೆ ತೆರೆದಿರುವ ಸ್ಥಳಗಳಲ್ಲಿ ಯಾವುದೇ ಜಾಹೀರಾತನ್ನು ಅಂಟಿಸಿದರೆ ಅಥವಾ ನಿರ್ಮಿಸಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಭಾರತ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ಕಾನೂನು ಕ್ರಮ: ಆಯೋಗದ ನಿರ್ದೇಶನದಂತೆ ಸ್ಥಳೀಯ ಆಡಳಿತದ ಲಿಖೀತ ಅನುಮತಿಯಿಲ್ಲದೆ ಯಾವುದೇ ವ್ಯಕ್ತಿ ಯಾವುದೇ ಸ್ಥಳದಲ್ಲಿ ಯಾವುದೇ ಜಾಹೀರಾತನ್ನು ಸಾರ್ವಜನಿಕ ವೀಕ್ಷಣೆಗೆ ಪ್ರಚುರಪಡಿಸುವುದನ್ನು ನಿಷೇಧಿಸಲಾಗಿದ್ದು, ಈ ನಿಷೇಧವನ್ನು ವಿರೋಧಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಅಪರಾಧಿಯಿಂದ ವಸೂಲಿ: ಆಯೋಗದ ನಿಷೇಧ ಆದೇಶವನ್ನು ಉಲ್ಲಂಘಿಸಿದವರಿಗೆ 6 ತಿಂಗಳವರೆಗೆ ವಿಸ್ತರಿಸಬಹುದಾದ ಸೆರೆವಾಸ ಅಥವಾ 1000 ರೂ. ಗಳವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುವುದು. ವಿರೂಪಗೊಳಿಸುವಿಕೆಯಿಂದ ಯಾವುದೇ ವ್ಯಕ್ತಿಗೆ ಅಡಚಣೆ, ಕಿರಿಕಿರಿ ಅಥವಾ ಹಾನಿ ಉಂಟು ಮಾಡಿದರೆ ಅಪರಾಧವೆಂದು ಪರಿಗಣಿಸಲಾಗುವುದು. ಅಲ್ಲದೆ ವಿರೂಪಗಳಿಸುವಿಕೆಯ ಮರುಸ್ಥಾಪನೆಯ ಸಂಪೂರ್ಣ ವೆಚ್ಚವನ್ನು ಅಪರಾಧಿಯಿಂದ ವಸೂಲಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.