ಶೀಘ್ರ ಗ್ರಂಥಾಲಯ ಡಿಜಿಟಲೀಕರಣ


Team Udayavani, Mar 1, 2020, 3:00 AM IST

shigra-gra

ಹುಳಿಯಾರು: ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜಿನ ಗ್ರಂಥಾಲಯಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣ ಮಾಡಿ 1 ಕೋಟಿ ಪುಸ್ತಕ ಅಪ್‌ಲೋಡ್‌ ಮಾಡುವ ಚಿಂತನೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಹುಳಿಯಾರು-ಕೆಂಕೆರೆ ಬಿಎಂಎಸ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಹಿಂದೆ ಬುದ್ಧಿವಂತರು ಬಿಎ ಓದಲೂ, ಉದ್ಯೋಗ ಅಗತ್ಯ ಉಳ್ಳವರು ತಾಂತ್ರಿಕ ಶಿಕ್ಷಣ ಓದಲು ಹೋಗುತ್ತಿದ್ದರು. ಈಗ ಎಲ್ಲರಲ್ಲೂ ತಾಂತ್ರಿಕ ಶಿಕ್ಷಣ ಓದುವ ಆಸಕ್ತಿ ಬೆಳೆದಿದ್ದು, ಇಲ್ಲಿ ಅವಕಾಶ ಸಿಗದವರು ಬಿ.ಎ, ಬಿ.ಎಸ್‌ಸಿ, ಬಿ.ಕಾಂ ಓದುವುದು ಅನಿವಾರ್ಯವಾಗಿದೆ. ಇಂತಹವರ ಶೈಕ್ಷಣಿಕ ಪ್ರಗತಿಗೆ ನೆರವಾಗಲೆಂದು ಉಚಿತವಾಗಿ ಲ್ಯಾಪ್‌ಟಾಪ್‌ ನೀಡಲಾಗುತ್ತಿದ್ದು, ಇದರಲ್ಲಿ ಕಾಲೇಜು ಶಿಕ್ಷಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಅಳವಡಿಸಲಾಗಿದೆ ಎಂದು ತಿಳಿಸಿದರು.

ಇತರೆ ಭಾಷೆಗಳ ಪಾಂಡಿತ್ಯ ಬೇಕು: ಮಾತೃಭಾಷೆಯಲ್ಲಿ ವಿಷಯ ಅರ್ಥವಾಗುವಂತೆ ಸುಲಭವಾಗಿ ಬೇರೆ ಭಾಷೆಯಲ್ಲಿ ವಿಷಯಗಳು ಅರ್ಥವಾಗುವುದಿಲ್ಲ. ಹಾಗಾಗಿ ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಒಳ್ಳೆಯದು. ಆದರೆ ವ್ಯವಹಾರಕ್ಕೆ ಇತರೆ ಭಾಷೆಗಳ ಪಾಂಡಿತ್ಯ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಬಾಲ್ಯದಲ್ಲೇ ಇಂಗ್ಲಿಷ್‌, ಹಿಂದಿ ಕಲಿಯುವುದು ಒಳ್ಳೆಯದು. ಬೇರೆ ಬೇರೆ ಭಾಷೆಗಳ ಭಾಷ್ಯ ಜ್ಞಾನಉನ್ನತ ವ್ಯಾಸಂಗ, ಉದ್ಯೋಗಕ್ಕೆ ಸಹಕಾರಿಯಾಗುತ್ತದೆ ಎಂದರು.

ಕಾಲಹರಣ ಮಾಡಬೇಡಿ: ಯೌವನಾವಸ್ಥೆಯಲ್ಲಿ ಉದಾಸೀನ ಮತ್ತು ಕಾಲಹರಣ ಮಾಡಿದರೆ ಮುಂದಿನ ಬದುಕು ಕಷ್ಟಕರವಾಗುತ್ತದೆ. ಹಾಗಾಗಿ ಗುರುಹಿರಿಯರು ಹೇಳುವ ಅನುಭವದ ಮಾತು ಅರ್ಥ ಮಾಡಿಕೊಂಡು ಸಮಯದ ಸದ್ಬಳಕೆ ಮಾಡಿಕೊಳ್ಳಬೇಕು. ಅಂಕ ಗಳಿಕೆಗಿಂತ ಅರ್ಥ ಮಾಡಿಕೊಳ್ಳುವುದು ಶ್ರೇಷ್ಠ ಶಿಕ್ಷಣ ಎಂದು ಭಾವಿಸಿ ಶಿಕ್ಷಕರು ಕೊಡುವ ನೋಟ್ಸ್‌ ಮಾತ್ರ ಓದದೆ ಪುಸ್ತಕ ಓದಿ ಅರ್ಥ ಮಾಡಿಕೊಂಡು ತಾವೇ ನೋಟ್ಸ್‌ ಮಾಡಿಕೊಳ್ಳುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದರು.

ಪ್ರಾಚಾರ್ಯ ಬಿಳಿಗೆರೆ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮರುಳಸಿದ್ಧಪ್ಪ, ಎಲ್‌.ಆರ್‌.ಬಾಲಾಜಿ, ನಜರುಲ್ಲಾಖಾನ್‌, ವಕೀಲರಾದ ರತ್ನ ರಂಜಿನಿ, ಹಿರಿಯ ವಿದ್ಯಾರ್ಥಿಗಳ ಸಂಘದ ಕೆಂಕೆರೆ ನವೀನ್‌, ಬರಕನಹಾಲ್‌ ಶಿವಕುಮಾರ್‌, ವಿಶ್ವನಾಥ್‌, ಉಪನ್ಯಾಸಕರುಗಳಾದ ಪ್ರೊ.ಮೋಹನ್‌, ಪ್ರೊ.ವಲಿ, ಪ್ರೊ.ಸುಷ್ಮಾಬೀರಾದಾರ್‌, ಶಿವಯ್ಯ, ಡಾ.ಲೋಕೇಶ್‌ ನಾಯ್ಕ ಮತ್ತಿತರರು ಇದ್ದರು.

ಲಾ ಓದಿ ಲಾ ಮಿನಿಸ್ಟರ್‌ ಆದೆ: ಕಾನೂನು ಅರಿವು ಪಡೆಯುವ ಸಲುವಾಗಿ ಲಾ ಓದಿದೆ. ನನ್ನಲ್ಲಿನ ಓದಿನ ಆಸಕ್ತಿ ಮತ್ತು ತಿಳಿದುಕೊಳ್ಳುವ ಕುತೂಹಲ ಕಾನೂನು ಪಾಂಡಿತ್ಯ ಪಡೆಯಲು ಸಹಕಾರಿಯಾಯಿತು. ಈ ಪಾಂಡಿತ್ಯ ಇಂದು ಲಾ ಮಿನಿಸ್ಟರ್‌ ಮಾಡಿದ್ದು, ವಿಧಾನಸಭೆಯಲ್ಲಿ ಕಾನೂನಿನ ಬಗ್ಗೆ ಮಾತನಾಡಿ ಹಳ್ಳಿಯವರಿಗೆ ಕಾನೂನಿನ ಬಗ್ಗೆ ಏನು ಗೊತ್ತಿದೆ ಎಂದು ಮೂದಲಿಸುವವರು ಬಾಯಿ ಮೇಲೆ ಬೆರಳು ಇಟ್ಟುಕೊಳ್ಳುವಂತೆ ಮಾಡಿದ್ದೇನೆ. ಹಾಗಾಗಿ ಓದುವುದನ್ನು ಶ್ರದ್ಧೆಯಿಂದ ಓದಿ ಮಾಡುವ ಕೆಲಸ ಶ್ರಮದಿಂದ ಮಾಡಿದರೆ ಇತುವ ಕ್ಷೇತ್ರದಲ್ಲೇ ಹೆಸರು, ಗೌರವ ಸಂಪಾದಿಸಲು ಸಾಧ್ಯ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.