ಶಾಸಕರ ಜತೆ ಬಹಿರಂಗ ಚರ್ಚೆಗೆ ಸಿದ್ಧ

Team Udayavani, Jan 10, 2023, 4:49 PM IST

TDY-22

ಪಾವಗಡ: ನಾನು ಶಾಸಕನಾಗಿ ಎರಡು ಅವಧಿಯಲ್ಲಿ ಹಾಗೂ ಶಾಸಕ ವೆಂಕಟರಮಣಪ್ಪ ಶಾಸಕರಾಗಿ ನಾಲ್ಕೂ ಅವಧಿಯಲ್ಲಿ ತಾಲೂಕಿನಲ್ಲಿ ಮಾಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಬಹಿರಂಗ ಚರ್ಚೆಗೆ ವೆಂಕಟರಮಣಪ್ಪ ಅವರೊಂದಿಗೆ ಚರ್ಚಿಸಲು ನಾನು ಸಿದ್ಧ ಎಂದು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹೇಳಿದರು.

ಪಟ್ಟಣದ ಜೆಡಿಎಸ್‌ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕರು, 5 ದಿನಗಳಿಂದೆ ತಾಲೂಕಿನ ವಿರುಪಸಮುದ್ರ ಗ್ರಾಮದ ಸಭೆಯಲ್ಲಿ ಶಾಸಕರು ತಾಲೂಕಿನ ಅಭಿವೃದ್ಧಿ ಬಗ್ಗೆ ಮಾಜಿ ಶಾಸಕರೊಂದಿಗೆ ಚರ್ಚೆಗೆ ಸಿದ್ಧ ಎಂದು ಹೇಳಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದಿದೆ. ಶಾಸಕರು ದಿನಾಂಕ ನಿಗದಿಪಡಿಸಿದರೆ ನಾನು ಚರ್ಚೆಗೆ ಬರಲು ಸಿದ್ಧ, ಇದಕ್ಕೆ ಪತ್ರಕರ್ತರು ಒಂದು ವೇದಿಕೆ ಕಲ್ಪಿಸಬೇಕು. ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಮುಖಂಡರು ಸುಳ್ಳಿನ ಕಥೆ ಹೇಳುವುದರಲ್ಲಿ ನಿಪುಣರು ಎಂದು ಹೇಳಿದ್ದರು ಹಾಗೂ ಜೆಡಿಎಸ್‌ ಅಪ್ಪ ಮಕ್ಕಳ ಪಕ್ಷ ಎಂದು ಹೇಳಿದ್ದಾರೆ. ಆದರೆ, ಪಾವಗಡ ತಾಲೂಕಿನ ಕಾಂಗ್ರೆಸ್‌ ಪಕ್ಷದಲ್ಲಿ ನಡೆಯುತ್ತಿರುವುದು ಏನು?, ತಂದೆ ಶಾಸಕ, ಮಗ ಜಿಪಂ ಸದಸ್ಯ ಹಾಗೂ ಪಕ್ಷದ ಗ್ರಾಮಾಂತರ ಬ್ಲಾಕ್‌ ಅಧ್ಯಕ್ಷ, ಇದು ಅಪ್ಪ ಮಕ್ಕಳ ಪಕ್ಷ ಅಲ್ಲವೇ ಎಂದು ಪ್ರಶ್ನಿಸಿದರು.

ಅರ್ಹತೆ ಇದೆಯೇ?: ಮಾಜಿ ಪ್ರಧಾನಿ ಎಚ್‌ .ಡಿ.ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವಷ್ಟು ಶಾಸಕ ವೆಂಕಟರಮಣಪ್ಪ ಅವರಿಗೆ ಅರ್ಹತೆ ಇದೆಯೇ ಎಂದು ಆಲೋಚಿಸಲಿ, ಪಟ್ಟಣದಲ್ಲಿ ಬಸ್‌ ಡಿಪೋ, 8 ಮೊರಾರ್ಜಿ ಶಾಲೆ, 8 ಪ್ರೌಢ ಶಾಲೆ ಹೊಸದಾಗಿ ಮಂಜೂರು, ಮಹಿಳಾ ಪ್ರಥಮ ದರ್ಜೆ ಕಾಲೇಜು ಮಂಜೂರು, ಅಗ್ನಿಶಾಮಕ ದಳದ ಠಾಣೆ, ಸಮುದಾಯ ಆರೋಗ್ಯ ಕೇಂದ್ರಗಳನ್ನು ತಿರುಮಣಿ, ಲಿಂಗದಹಳ್ಳಿ, ಕೆ.ಟಿ.ಹಳ್ಳಿ ಗ್ರಾಮಗಳಲ್ಲಿ ಸೇರಿದಂತೆ ತಾಲೂಕಿನಾದ್ಯಂತ ಮಾಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆಗೆ ನಾನು ಸಿದ್ಧ ಎಂದರು.

ಸೋಲಿನ ಭೀತಿಯಿಂದ ಅಪಪ್ರಚಾರ: ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಆರ್‌.ಸಿ.ಅಂಜಿನಪ್ಪ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಸೋಲಿನ ಭಯದಿಂದ ಶಾಸಕ ವೆಂಕಟರಮಣಪ್ಪ ನಮ್ಮ ಪಕ್ಷದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ಪಕ್ಷದ ಮುಖಂಡರೇ ಸುದ್ದಿಗೋಷ್ಠಿಗಳಲ್ಲಿ ವೆಂಕಟರಮಣಪ್ಪನವರ ಅವಧಿಯಲ್ಲಿ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಅವರಿಗೆ ಕಾಂಗ್ರೆಸ್‌ ಪಕ್ಷದಲ್ಲಿ ಟಿಕೆಟ್‌ ನೀಡಬೇಡಿ ಎಂದು ಹೇಳಿದ್ದರೆ, ನಮ್ಮ ಪಕ್ಷದ ಶಾಸಕರ ಅಡಳಿತ ಅವಧಿಯಲ್ಲಿ ನಡೆದ ಚರ್ಚೆ ಬಗ್ಗೆ ಪಕ್ಷದಿಂದ ನಾವು ಸಿದ್ಧ ಎಂದು ಹೇಳಿದರು.

ರಾಜ್ಯ ಜೆಡಿಎಸ್‌ ಉಪಾಧ್ಯಕ್ಷ ತಿಮ್ಮಾರೆಡ್ಡಿ, ತಾಲೂಕು ಜೆಡಿಎಸ್‌ ಅಧ್ಯಕ್ಷ ಬಲರಾಮರೆಡ್ಡಿ, ತಾಲೂಕು ಜೆಡಿಎಸ್‌ ಕಾರ್ಯಾಧ್ಯಕ್ಷ ಎನ್‌ .ಎ.ಈರಣ್ಣ, ಗೌರವ ಅಧ್ಯಕ್ಷ ರಾಜಶೇಖರಪ್ಪ, ರೈತ ಘಟಕದ ಅಧ್ಯಕ್ಷ ಗಂಗಧಾರ ನಾಯ್ಡು, ವಕ್ತಾರ ಅಕ್ಕಲಪ್ಪನಾಯ್ಡು ಮಾತನಾಡಿದರು.

ಮುಖಂಡರಾದ ಕೋಟಗುಡ್ಡ ಅಂಜಿನಪ್ಪ, ಜಯರಾಮರೆಡ್ಡಿ, ಪಾಲಾನಾಯಕ, ತಾಳೇಮರದಹಳ್ಳಿ ಅಂಜಿ, ಕಾವಲಗೇರಿ ರಾಮಾಂಜಿ, ರಾಜಶೇಖರರೆಡ್ಡಿ, ಅಂಜನ್‌, ಮಂಜುನಾಥ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

ಶಾಸಕರಾಗಿ ದಿನಾಂಕ ಬಹಿರಂಗ ಚರ್ಚೆಗೆ ನಿಗದಿಪಡಿಸುವ ಜಾವಾಬ್ದಾರಿ ಅವರ ಮೇಲಿದೆ. ಇವರು ಸಚಿವರಾದಾಗ ತಾಲೂಕಿಗೆ ಬಂದ 6,800 ಮನೆಗಳು ಮಂಜೂರಾಗಿ ರುವುದನ್ನು ರದ್ದುಪಡಿಸಿದರೂ ಪ್ರಶ್ನೆ ಮಾಡಿಲ್ಲ, ವಿಧಾನಸಭೆಯಲ್ಲಿ ತಾಲೂ ಕಿನ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿರುವ ಚರ್ಚೆಗಳ ಬಗ್ಗೆ ಕೂಡ ಚರ್ಚೆಗೆ ಬರಲಿ. -ಕೆ.ಎಂ.ತಿಮ್ಮರಾಯಪ್ಪ, ಮಾಜಿ ಶಾಸಕ

ಟಾಪ್ ನ್ಯೂಸ್

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.