ಸದೃಢವಾಗಿ ಪಕ್ಷ ಕಟ್ಟುವ ವಚನ ಸ್ವೀಕರಿಸಿ


Team Udayavani, Jun 1, 2020, 7:28 AM IST

vacahana

ತುಮಕೂರು: ಜೂ.7 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಅವರು ಅಧಿಕಾರ ಸ್ವೀಕರಿಸುವ ದಿನ, ಕಾಂಗ್ರೆಸ್‌ ಕಾರ್ಯ ಕರ್ತರು ತಮ್ಮ ಗ್ರಾಪಂ, ವಾರ್ಡುಗಳಲ್ಲಿ ತಾವು ಪಕ್ಷವನ್ನು ಸದೃಢವಾಗಿ ಕಟ್ಟುವ ಪ್ರಮಾಣ ವಚನ  ಪಡೆಯುವ ಮೂಲಕ ಕಾರ್ಯಕರ್ತರ ಹಬ್ಬವಾಗಿ ಆಚರಿಸುವಂತೆ ಪ್ರದೇಶ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರೊ.ರಾಧಾಕೃಷ್ಣ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಏರ್ಪಡಿ ಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇರುವ ತಂತ್ರಜ್ಞಾನವನ್ನು ಬಳಸಿ ಕೊಂಡು, ಒಂದೊಂದು ಗ್ರಾಮ ಪಂಚಾಯಿತಿ ಯಲ್ಲಿ ಕನಿಷ್ಠ 100 ಜನ ಕಾಂಗ್ರೆಸ್‌ ಕಾರ್ಯಕರ್ತರು, ಜನಸಾಮಾನ್ಯರು ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭವನ್ನು ವೀಕ್ಷಿಸುವ  ಮೂಲಕ ಪಕ್ಷವನ್ನು ಸದೃಢವಾಗಿ ಕಟ್ಟುವ ಪ್ರತಿಜ್ಞೆ ಕೈಗೊಳ್ಳಬೇಕು ಎಂದರು.

ಮಾರಕವಾದ ಕಾಯ್ದೆಗಳು ಜಾರಿ: ನಮಗೆ ಅರಿವಿಲ್ಲದೆ ಕೊರೊನಾ ಎಂಬ ಮಹಾ ಮಾರಿಯ ನೆಪದಲ್ಲಿ ಸರ್ವಾಧಿಕಾರಿ ಆಡಳಿತಕ್ಕೆ ಒಳಪಡುತ್ತಿದ್ದೇವೆ. ಜನರ ಹಿತದೃಷ್ಟಿಯಿಂದ ಇದನ್ನು ವಿರೋಧಿಸುವಂತಹ ಸ್ಥಿತಿಯಲ್ಲಿಯೂ ನಾವಿಲ್ಲ.  ಇದರ ಪರಿಣಾಮವಾಗಿ ದೇಶದ ಜಿಡಿಪಿ ಶೇ1.2ಕ್ಕೆ ಕುಸಿದಿದೆ. ಆರ್‌ಬಿಐ, ನೀತಿ ಆಯೋಗಗಳು ಎಚ್ಚರಿಕೆ ನೀಡಿದ್ದರೂ ಸಹ ಅದನ್ನು ಗಣನೆಗೆ ತೆಗೆದುಕೊಳ್ಳದೆ ಪ್ರಜಾಪ್ರಭು ತ್ವಕ್ಕೆ ಮಾರಕವಾದ ಕಾಯ್ದೆಗಳು ಜಾರಿಯಾಗುತ್ತಿವೆ ಎಂದು ಆತಂಕ  ವ್ಯಕ್ತಪಡಿಸಿದರು.

ಕಾರ್ಯಕರ್ತರು ಕೆಲಸ ಮಾಡಿ: ದೇಶದೊಳಗೆ ವೀಸಾ ಪಡೆದು ತಿರುಗಾಡುವಂತಹ ದುಸ್ಥಿತಿ ಭಾರತದ ಜನರಿಗೆ ಬಂದೊದಗಿರುವುದು ದುರ ದೃಷ್ಟಕರ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸಾಧ್ಯ.  ಅದು ಈಡೇರಬೇಕೆಂದರೆ ಪಕ್ಷದ ಕಾರ್ಯ ಕರ್ತರು ತಾವೇ ಕೆಪಿಸಿಸಿ ಅಧ್ಯಕ್ಷರು ಎಂಬಂತೆ ಕೆಲಸ ಮಾಡಬೇಕಾಗಿದೆ ಎಂದು ನುಡಿದರು.

ಸಾರ್ವಜನಿಕರೊಂದಿಗೆ ಸಂವಾದ: ಮಾಜಿ ಸಂಸದ ಎಸ್‌.ಪಿ.ಮುದ್ದಹನುಮೇಗೌಡ ಮಾತನಾಡಿ, ದೇಶದಲ್ಲಿ ಇಷ್ಟೊಂದು ವಲಸೆ ಕಾರ್ಮಿಕರಿದ್ದಾರೆಯೇ ಎಂದು ತಿಳಿದಿದ್ದೇ ಕೊರೊನಾದಿಂದ, ಲಾಕ್‌ಡೌನ್‌ ಮುಗಿಯ ದಿದ್ದರೆ ದೇಶ ಮತ್ತಷ್ಟು  ಅಧೋಗತಿಗೆ ತಳ್ಳಲ್ಪ ಡುವುದರಲ್ಲಿ ಅನುಮಾನವಿಲ್ಲ. ಕೆಪಿಸಿಸಿ ಅಧ್ಯಕ್ಷ ಕೈಗೊಂಡಿರುವ ಅಧಿಕಾರ ವಿಕೇಂದ್ರೀ ಕರಣ ಚೆನ್ನಾಗಿದೆ. ಎಲ್ಲರೂ ಒಂದೆಡೆ ಸೇರುವ ಬದಲು ತಾವು ಎಲ್ಲಿರುತ್ತೀರೋ ಅಲ್ಲಿಯೇ ಕಾರ್ಯಕ್ರಮ ವೀಕ್ಷಿಸಿ,  ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಯಶಸ್ವಿಗೊಳಿ ಸುವಂತೆ ಸಲಹೆ ನೀಡಿದರು.

ಯುವ ಜನರನ್ನು ಸೆಳೆಯಬೇಕು: ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ಮಾಸ್‌ ಪಾರ್ಟಿಯನ್ನು ಕೇಡರ್‌ ಲೀಡರ್‌ ಶಿಫ್ ಪಾರ್ಟಿಯಾಗಿ ಬದಲಾಯಿಸಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಹೊರಟ್ಟಿದ್ದಾರೆ. ಜೂನ್‌  7ರಂದು ಯುವಜನರಲ್ಲಿ ಅದರಲ್ಲಿಯೂ ಗ್ರಾಮೀಣ ಯುವಜನರನ್ನು ತಂತ್ರಜ್ಞಾನದ ಮೂಲಕ ಸೆಳೆಯುವ ಮೂಲಕ ಅವರು ಪಕ್ಷದ ಆಸ್ತಿಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಸಂಯೋಜಕರಿಗೆ  ಮಾಹಿತಿ: ಪಕ್ಷದ ಉಸ್ತು ವಾರಿಗಳು, ರಾಜ್ಯದ ಮೇಲ್ಮನೆ ಸದಸ್ಯರಾದ ವೇಣುಗೋಪಾಲ್‌ ಮತ್ತು ರಾಜಪ್ಪ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ರಾಮಕೃಷ್ಣ, ಈಗಾ ಗಲೇ ಗ್ರಾಪಂ ಮತ್ತು ವಾರ್ಡು ಮಟ್ಟದಲ್ಲಿ ನೇಮಕಗೊಂಡಿರುವ ಸಂಯೋಜಕರಿಗೆ ಜೂನ್‌ 7ರಂದು ಕೆಪಿಸಿಸಿ ಅಧ್ಯಕ್ಷರು ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕೈಗೊಳ್ಳಬೇಕಾಗಿ  ರುವ ಕ್ರಮಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ವಿಧಾನಪರಿಷತ್‌ ಸದಸ್ಯ ಎಂ.ಡಿ.ಲಕ್ಷ್ಮೀ ನಾರಾಯಣ್‌, ಮಾಜಿ  ಶಾಸಕರಾದ ಎಸ್‌. ರಫೀಕ್‌ ಅಹಮದ್‌, ಎಸ್‌. ಅಹಮದ್‌, ಆರ್‌.ನಾರಾಯಣ್‌, ಮುರಳೀಧರ ಹಾಲಪ್ಪ, ಅಪ್ತಾಬ್‌ ಅಹಮದ್‌, ಹೊನ್ನಗಿರಿಗೌಡ, ಎಚ್‌.ಸಿ.ಹನುಮಂತಯ್ಯ, ಸಿದ್ದಲಿಂಗೇಗೌಡ ಇದ್ದರು.

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.