ಬ್ಯಾಂಕ್ ವ್ಯವಸ್ಥಾಪಕರ ವರ್ಗಾಯಿಸಲು ಆಗ್ರಹ
Team Udayavani, Sep 27, 2019, 6:02 PM IST
ಪಾವಗಡ: ಅನವಶ್ಯಕ ದಾಖಲೆ ಕೇಳಿ ರೈತರಿಗೆ ಬ್ಯಾಂಕ್ ಅಧಿಕಾರಿ ಕಿರುಕುಳ ನೀಡುತ್ತಿದ್ದ, ಕೂಡಲೇ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಚನ್ನಕೇಶವಪುರ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಬಳಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಮಾತನಾಡಿ, ಬೆಳೆ ಸಾಲ ನವೀಕರಣ ಮಾಡಲು 14 ವರ್ಷದ ಪಹಣಿ ಕೇಳುತ್ತಿದ್ದು, ಎರಡು- ಮೂರು ದಿನ ವಿಳಂಬವಾದರೆ ದಾಖಲೆ ತೆಗೆದುಕೊಳ್ಳುವುದಿಲ್ಲ. ನಾನು ಹೇಳಿದ ದಿನವೇ ತರಬೇಕು ಎಂದು ದರ್ಪ ತೋರಿಸಿ ರೈತರನ್ನು ವಾಪಸ್ ಕಳುಹಿಸುತ್ತಿದ್ದಾರೆ ಎಂದು ದೂರಿದರು.
ತಾಲೂಕಿನ ಯಾವುದೇ ಬ್ಯಾಂಕ್‌ಗಳಲ್ಲಿ ಇಲ್ಲದ ಹೊಸ ನಿಯಮ ಇಲ್ಲಿದೆ. ಆದ್ದರಿಂದ ಕನ್ನಡ ಭಾಷೆ ತಿಳಿಯದ ಹಾಗೂ ಅನನುಭವಿ ಮ್ಯಾನೇಜರನ್ನು ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಕೃಷ್ಣಮೂರ್ತಿ ಕನ್ನಮೇಡಿ ಮಾತನಾಡಿ, ಬ್ಯಾಂಕ್ ವ್ಯವಸ್ಥಾಪಕರು ರೈತರನ್ನು ಗೌರವದಿಂದ ಕಾಣಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ರೈತರಿಗೆ ಸೂಕ್ತವಾಗಿ ಸ್ಪಂದಿಸುವುದಾಗಿ ವ್ಯವಸ್ಥಾಪಕರು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಪೂಜಾರಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ರೈತರಾದ ತಿಮ್ಮಪ್ಪ, ಬೋಡಪ್ಪ, ಚಂದ್ರಪ್ಪ, ಉಗ್ರಪ್ಪ, ನರಸಣ್ಣ, ರಾಮಚಂದ್ರಪ್ಪ, ಪರಮೇಶ್ವರ ನಾಯಕ, ರಾಮಾಂಜಿ, ತಿಪ್ಪಣ್ಣ, ವೆಂಕಟೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.