ಮಾದರಿ ಕ್ಷೇತ್ರ ನಿರ್ಮಾಣ ಗುರಿ

Team Udayavani, Sep 27, 2022, 5:13 PM IST

ಮಾದರಿ ಕ್ಷೇತ್ರ ನಿರ್ಮಾಣ ಗುರಿ

ತುಮಕೂರು: ಕಳೆದ 20 ವರ್ಷಗಳಿಂದ ಯಾವುದೇ ರೀತಿಯ ಅಭಿವೃದ್ಧಿ ಕಾಣದೆ ನನೆ ಗುದಿಗೆ ಬಿದ್ದಿದ್ದ ಅನೇಕ ರಸ್ತೆಗಳ ಅಭಿವೃದ್ಧಿಗೆ ಪ್ರಸ್ತುತ ಆದ್ಯತೆ ನೀಡಲಾಗಿದ್ದು, ಮುಂದೆಯೂ ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿಯಾಗಿದ್ದು, ತುಮಕೂರು ಗ್ರಾಮಾಂತರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ ಎಂದು ಶಾಸಕ ಡಿ.ಸಿ. ಗೌರಿಶಂಕರ್‌ ತಿಳಿಸಿದರು.

ಋಣ ತೀರಿಸುವ ಕೆಲಸ: 13 ಕೋಟಿ ರೂ. ವೆಚ್ಚದಲ್ಲಿ ಗ್ರಾಮಾಂತರ ಕ್ಷೇತ್ರದ ಬಸವಣ್ಣನ ಗುಡಿ ಸರ್ಕಲ್‌ನಿಂದ ಹಾದು ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತ ನಾಡಿದ ಅವರು, ಜನರ ಮೂಲಭೂತ ಸೌಲಭ್ಯ ಕಲ್ಪಿಸುವುದೇ ನನ್ನ ಆದ್ಯತೆಯಾಗಿದೆ. ಮತದಾರ ಪ್ರಭುಗಳ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.

13 ಕೋಟಿ ರೂ. ವೆಚ್ಚ: ಬಸವಣ್ಣನ ಗುಡಿ ಸರ್ಕಲ್‌ನಿಂದ ಕೌತಮಾರನಹಳ್ಳಿ, ದಿಣ್ಣೆಪಾಳ್ಯ, ಕೊಟ್ಟಿಗೆ ಗೊಲ್ಲಹಳ್ಳಿ, ದೊಡ್ಡೆ ಗೌಡನಪಾಳ್ಯ, ಆದಿಶಕ್ತಿ ಕೆಂಪಮ್ಮನ ದೇವಾಲಯ, ಗುಣಿ ಗೊಲ್ಲಹಳ್ಳಿ, ಐನಾಪೂರ, ನೇರಳಾಪುರ ಗ್ರಾಮದ ಮೂಲಕ ಹಾದು ಹೋಗಿ ಸಾಸಲು ಗ್ರಾಮ ಸಂಪರ್ಕಿಸುವ ರಸ್ತೆ ಹದಗೆಟ್ಟಿದ್ದು, ಈ ಭಾಗದಲ್ಲಿ ಜನರು ಓಡಾಡಲು ಸಾಧ್ಯವಿಲ್ಲದ ಸ್ಥಿತಿ ಇತ್ತು. ಕಳೆದ 20 ವರ್ಷಗಳಿಂದ ಈ ರಸ್ತೆ ಅಭಿವೃದ್ಧಿಪಡಿಸಬೇಕು ಎನ್ನುವ ಬೇಡಿಕೆ ಯಿತ್ತು. ಜನರ ಭಾವನೆಗಳಿಗೆ ಸ್ಪಂದಿಸಿ 13 ಕೋಟಿ ರೂ. ವೆಚ್ಚದಲ್ಲಿ ಈ ರಸ್ತೆ ಡಾಂಬರೀ ಕರಣ ಮಾಡುವ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ನುಡಿದರು. ಈ ರಸ್ತೆ ಅಭಿವೃದ್ಧಿಯಿಂದಾಗಿ ಸಾವಿರಾರು ರೈತರಿಗೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲವಾಗಿದ್ದು, ಈ ರಸ್ತೆಯನ್ನು 13 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುತ್ತಿರುವುದು ಹರ್ಷ ತಂದಿದೆ ಎಂದರು.

ಗ್ರಾಮಸ್ಥರಿಂದ ಅಭಿನಂದನೆ: ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿಪಡಿಸಲು ಒತ್ತು ನೀಡಿರುವ ಶಾಸಕ ಡಿ.ಸಿ.ಗೌರಿಶಂಕರ್‌ ಅವರಿಗೆ ಗ್ರಾಮಸ್ಥರು, ವಿದ್ಯಾರ್ಥಿಗಳು ಅಭಿನಂದಿಸಿದರು. ಜನರ ಸಮಸ್ಯೆ ಆಲಿಸಿದ ಶಾಸಕರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಡಿ.ಸಿ.ಗೌರಿಶಂಕರ್‌ ಅವರು ಸಾರ್ವ ಜನಿಕರ ಕುಂದುಕೊರತೆ ಆಲಿಸಿ, ಸ್ಥಳದಲ್ಲಿ ಸೂಕ್ತ ಪರಿಹಾರ ಒದಗಿಸಿದರು.

ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್‌ ಅಧ್ಯಕ್ಷರಾದ ರಾಮಚಂದ್ರಪ್ಪ, ಗೂಳೂರು ಜಿಲ್ಲಾ ಪಂಚಾಯತ್‌ ಉಸ್ತುವಾರಿಗಳಾದ ಪಾಲನೇತ್ರಯ್ಯ, ತಾಲೂಕು ಪಂಚಾಯತ್‌ ಮಾಜಿ ಸದಸ್ಯರಾದ ಗೋವಿಂದರಾಜು, ಮಸ್ಕಲ್‌ ಗ್ರಾಪಂ ಮಾಜಿ ಅಧ್ಯಕ್ಷರಾದ ರೂಪಾ, ಮೋಹನ್‌ ಕುಮಾರ್‌, ಗ್ರಾಪಂ ಸದಸ್ಯರು ಗಳಾದ ಪವಿತ್ರ ಶಿವಪ್ರಸಾದ್‌, ಲೋಕೇಶ್‌, ಹೇಮಂತ್‌, ವೆಂಕಟೇಶ್‌, ಮುಖಂಡರುಗಳಾದ ನಾಗರಾಜು, ಬಸವ ರಾಜು, ಶಿವಣ್ಣ, ನಾಗಣ್ಣ, ರವಿಕಿರಣ್, ಕುಶಾಲ್ ಗೋಪಾಲ್ ಹಾಗೂ ನೂರಾರು ಕಾರ್ಯಕರ್ತರು ಮತ್ತು ಗ್ರಾಮಸ್ಥರು ಹಾಜರಿದ್ದರು.

ಗ್ರಾಮಾಂತರ ಕ್ಷೇತ್ರದ ಜನರ ಭಾವನೆಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿದ್ದೇನೆ. ನನ್ನ ಈ ಅವಧಿಯಲ್ಲಿ ನಿರೀಕ್ಷೆಗೂ ಮೀರಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ನಿಮ್ಮ ಮನೆಯ ಮಗನಾಗಿ ಕೆಲಸ ಮಾಡುತ್ತಿದ್ದೇನೆ. ಡಿ.ಸಿ.ಗೌರಿಶಂಕರ್‌, ಶಾಸಕ

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.