ಭೀಕರ ರಸ್ತೆ ಅಪಘಾತ: ಸ್ನೇಹಿತನ ಶವ ಸಂಸ್ಕಾರಕ್ಕೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು
Team Udayavani, Feb 17, 2023, 8:23 PM IST
ಕೊರಟಗೆರೆ: ಪಟ್ಟಣದ ಬೈಪಾಸ್ ರಿಂಗ್ ರೋಡ್ ಭೋಡ ಬಂಡೇನಹಳ್ಳಿ ಕ್ರಾಸ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ಸವಾರನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿ ಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಕೊರಟಗೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಬೈಕ್ ಸವಾರ ನವೀನ್ ಕುಮಾರ್( 32) ಮೃತಪಟ್ಟ ದುರ್ದೈವಿ ಯಾಗಿದ್ದಾನೆ.
ಘಟನೆಯ ವಿವರ:
ಬೆಂಗಳೂರು ಮೂಲದ ಮಲ್ಲೇಶ್ವರಂ ನಿವಾಸಿಯಾದ ರಾಧಾಕೃಷ್ಣ ಶೆಟ್ಟಿ ರವರ ಮಗನಾದ ನವೀನ್ ಕುಮಾರ್ ಬೆಂಗಳೂರಿನಿಂದ ಪಾವಗಡಕ್ಕೆ ಸ್ನೇಹಿತನ ಶವ ಸಂಸ್ಕಾರಕ್ಕೆ ಹೋಗುತ್ತಿರುವಾಗ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ವೇಗವಾಗಿ ಬಂದ ಲಾರಿಯು ನವೀನ್ ಸಂಚರಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಗಂಭೀರ ಗಾಯಗೊಂಡಿದ್ದ ಆತನನ್ನು ಅ್ಯಂಬುಲೆನ್ಸ್ ಸಹಾಯ ದಿಂದ ಕೊರಟಗೆರೆ ಸಾರ್ವಜನಿಕ ಅಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ಕರೆದೊಯ್ಯವಾಗ ಮಾರ್ಗ ಮಧ್ಯೆ ಮೃತ ಪಟ್ಟಿದ್ದಾನೆಂದು ತಿಳಿದು ಬಂದಿದೆ.
ಈ ಸಂಭಂದ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಐಪಿಸಿ 304(A) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಸಿಪಿಐ ಸುರೇಶ್ ಕೆ ಪಿಎಸ್ಐ ಪ್ರದೀಪ್ ಸಿಂಗ್, ಎಎಸ್ಐ ಗೋವಿಂದ ನಾಯ್ಕ್ ಮುಖ್ಯಪೇದೆ ಸಂಜೀವ್, ರಂಗರಾಜು, ಜಯಪ್ರಕಾಶ್ ಪೇದೆ ಧರ್ಮಪಾಲ್ ನಾಯಕ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಫೆ.20ರಂದು ಜೆ.ಪಿ.ನಡ್ಡಾ ಪ್ರವಾಸ: ಉಡುಪಿ ಜಿಲ್ಲಾ ಬಿಜೆಪಿ ಬೂತ್ ಸಮಾವೇಶಕ್ಕೆ ಚಪ್ಪರ ಮಹೂರ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.