ನಾಳೆಯಿಂದ ಜಿಲ್ಲೆಯಲ್ಲಿ “ಸಖೀ’ ಕೇಂದ್ರ ಆರಂಭ
Team Udayavani, Nov 30, 2019, 5:09 PM IST
ತುಮಕೂರು: ಸರ್ಕಾರ ಏನೇ ಬಿಗಿಯಾಗಿರುವ ಕಾನೂನುಗಳನ್ನು ಜಾರಿಗೆ ತರುತ್ತಿದ್ದರೂ, ಮಹಿಳೆಯ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಪ್ರಕರಣಗಳು ಹೆಚ್ಚುತ್ತಲೇ ಇವೆ.
ಮಹಿಳೆ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಸರ್ವೆ ಸಾಮಾನ್ಯವಾಗಿದೆ. ಈ ದೌರ್ಜನ್ಯ ಪ್ರಕರಣಗಳಲ್ಲಿ ತೊಂದರೆ ಗೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ನೀಡಲು ರಾಜ್ಯ ಸರ್ಕಾರ ಗೆಳತಿ ಯೋಜನೆಯನ್ನು ಈವರೆಗೆ ಅನುಷ್ಠಾನಕ್ಕೆ ತಂದಿತ್ತು, ಈಗ ಈ ಯೋಜನೆಯನ್ನು ಕೇಂದ್ರಸರ್ಕಾರ ವಿಸ್ತಾರಗೊಳಿಸಿ ಸಖೀ ಯೋಜನೆಯನ್ನು ಅನುಷ್ಠಾನಗೊಳಿಸಲು ನ.16 ರಂದು ಆದೇಶ ಹೊರಡಿಸಿದೆ.
ಈ ಆದೇಶ ಬರುತ್ತಲೇ ತುಮಕೂರು ಜಿಲ್ಲೆಯಲ್ಲಿ ಸಖೀ ಕೆಂದ್ರ ಆರಂಭಿಸಲು ಜಿಲ್ಲಾಧಿಕಾರಿ ಡಾ.ಕೆ ರಾಕೇಶ್‌ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯಗಳಲ್ಲಿ ನೊಂದವರಿಗೆ ಸೂಕ್ತ ರಕ್ಷಣೆ ನೀಡಲು ಸಖೀ ಕೇಂದ್ರ ಆರಂಭಿಸಲು ಸಿದ್ಧತೆ ನಡೆಸಿ ಡಿ.1ರಂದು ಈ ಕೇಂದ್ರವನ್ನು ಆರಂಭಿಸಲು ತಯಾರಿ ನಡೆದಿದೆ.
ಸಖೀ ಕೇಂದ್ರ ಎಲ್ಲಿ ಸ್ಥಾಪನೆ: ತುಮಕೂರಿನ ಜಿಲ್ಲಾಸ್ಪತ್ರೆಯ ಮೊದಲ ಮಹಡಿಯಲ್ಲಿರುವ ಗೆಳತಿ ಕೇಂದ್ರ ದಲ್ಲಿ ಸಖೀ ಕೇಂದ್ರವು ಆರಂಭವಾಗಲಿದೆ. ದೌರ್ಜನ್ಯಕ್ಕೊಳಗಾದ ಮಹಿಳೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸೌಲಭ್ಯ ಕಲ್ಪಿಸುವ ಯೋಜನೆ ಇದಾಗಿದ್ದು, ಈ ಕೇಂದ್ರದಲ್ಲಿ ಒಬ್ಬರು ಆಡಳಿತಾಧಿಕಾರಿ, ಒಬ್ಬರು ಸಮಾಲೋಚಕರು, ಇಬ್ಬರು ಸಮಾಜ ಕಾರ್ಯ ಕರ್ತರು, ಇಬ್ಬರು ಮಹಿಳಾ ಪೊಲೀಸರು, ಇಬ್ಬರು ಕಾನೂನು ಸಲಹೆಗಾರರು ಕೆಲಸ ನಿರ್ವಹಿಸಲಿದ್ದಾರೆ.
ಇದರ ನಿರ್ವಹಣೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉಸ್ತುವಾರಿ ಸಮಿತಿ ಇರುತ್ತದೆ. ಈ ಸಮಿತಿಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಜಿಲ್ಲಾ ಶಸ್ತ್ರ ಚಿಕಿತ್ಸಕರು, ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಗಳು ಇರುತ್ತಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಸದಸ್ಯ, ಕಾರ್ಯ ದರ್ಶಿಗಳಾಗಿರುತ್ತಾರೆ.
ಸಖೀ(ಒಎನ್‌ಸಿ ಸೆಂಟರ್)ಯಲ್ಲಿ ಸಿಗುವ ಸೌಲಭ್ಯ ಗಳು: ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆದಾಗ ಅವರಿಗೆ ಮುಂದೆ ಏನು ಮಾಡಬೇಕು ಎನ್ನುವುದು ತೋಚದ ಸ್ಥಿತಿ ಇರುತ್ತದೆ. ಇಂಥ ಸಂದರ್ಭದಲ್ಲಿ ಸಖೀ ಕೇಂದ್ರಕ್ಕೆ ಬಂದರೆ ಅಲ್ಲಿ ನೊಂದವರಿಗೆ ನೆರವಿನ ಹಸ್ತ ದೊರಕುತ್ತದೆ. ದೌರ್ಜನ್ಯ ಕ್ಕೊಳಗಾದ ಮಹಿಳೆ ಮತ್ತು ಮಕ್ಕಳಿಗೆ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡಲಾಗುವುದು. ವೈದ್ಯಕೀಯ ಸೇವೆಯ ನಂತರ ಅಲ್ಲಿಯೇ ಪೊಲೀಸ್ ನೆರವು ದೊರಕುವುದು, ಅದೇ ಕೇಂದ್ರದಲ್ಲಿ ಕಾನೂನು ನೆರವು, ಆಪ್ತ ಸಮಾ ಲೋಚನೆಯು ನಡೆಯಲಿದೆ. ಈ ಯೋಜನೆಯು ದೇಶಾದ್ಯಂತ ಅನುಷ್ಠಾನಗೊಳ್ಳುತ್ತಿದ್ದು, ಇದಕ್ಕೆ ತಗಲುವ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ.
ಸಖೀ ಕೇಂದ್ರಕ್ಕೆ 38 ಲಕ್ಷಕ್ಕೆ ಪ್ರಸ್ತಾವನೆ: ಜಿಲ್ಲೆಯಲ್ಲಿ ಸಖೀ ಕೇಂದ್ರವನ್ನು ಆರಂಭಿಸಲು ಅಗತ್ಯವಿರುವ ವಾರ್ಡ್,ಆಪ್ತ ಸಮಾಲೋಚನಾ ಕೊಠಡಿ ಇತರೆ ಸೌಲಭ್ಯಗಳನ್ನು ಕೇಂದ್ರದಲ್ಲಿ ಕಲ್ಪಿಸಲು 38 ಲಕ್ಷ ಅನುದಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ.
ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು, ಈ ಬಗ್ಗೆ ಮಕ್ಕಳಿಗೆ ಮತ್ತು ಪೋಷಕರಿಗೆ ಅರಿವುಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚುಮಾಡಬೇಕು. ಶಾಲಾ, ಕಾಲೇಜುಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಲು ಅಗತ್ಯ ಕ್ರಮಕೈಗೊಂಡಿದ್ದೇವೆ. ದೌರ್ಜನ್ಯಕ್ಕೊಳಗಾದ ಮಹಿಳೆ ಮತ್ತು ಮಕ್ಕಳಿಗೆ ಸೂಕ್ತ ವೈದ್ಯಕೀಯ, ರಕ್ಷಣೆ, ಕಾನೂನು ಮತ್ತು ಸಮಾಲೋಚನೆ ಒಂದೇ ಸೂರಿನಡಿ ಸಖೀ ಕೇಂದ್ರ ತುಮಕೂರಿನಲ್ಲೂಆರಂಭವಾಗುತ್ತಿದೆ, ಅದಕ್ಕೆ ಎಲ್ಲಾ ರೀತಿಯ ಸಿದ್ಧತೆ ಆಗಿದೆ. – ಡಾ. ಕೆ.ರಾಕೇಶ್‌ಕುಮಾರ್, ಜಿಲ್ಲಾಧಿಕಾರಿ
-ಚಿ.ನಿ ಪುರುಷೋತ್ತಮ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.