ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸಿ
Team Udayavani, Feb 9, 2020, 4:25 PM IST
ಚೇಳೂರು: ಮಾವು, ಹಲಸು ಈ ಭಾಗದ ಆರ್ಥಿಕ ಬೆಳೆಯಾಗಿದ್ದು, ಸಸ್ಯಗಳ ಸಂರಕ್ಷಣೆ ಬಗ್ಗೆ ಇಲಾಖೆಯಿಂದ ನೀಡುವ ತರಬೇತಿ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಪಂ ಸದಸ್ಯೆ ಕೆ.ಆರ್. ಭಾರತಿ ಹೇಳಿದರು.
ಪಾರ್ವತಿ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ತೋಟಗಾರಿಕೆ ಇಲಾಖೆಯಿಂದ ಮಾವು ಬೆಳೆ ಬೇಸಾಯದ ಸುಧಾರಿತ ಕ್ರಮ ಹಾಗೂ ಸಸ್ಯ ಸಂರಕ್ಷಣೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬೆಳೆ ಹೆಚ್ಚಾಗಿ ಬೆಳೆದಾಗ ಬೆಲೆ ಇರುವುದಿಲ್ಲ. ಬೆಲೆ ಇದ್ದಾಗ ಬೆಳೆ ಇರುವುದಿಲ್ಲ. ಹೀಗಾಗಿ ಸೂಕ್ತ ಬೆಂಬಲ ಬೆಲೆ ಸರ್ಕಾರ ನಿಗದಿಪಡಿಸಬೇಕು ಎಂದರು. ತಾಪಂ ಸದಸ್ಯ ಕೆಂಪರಾಜು ಮಾತನಾಡಿ, ಮಾವು ಉತ್ಪನ್ನಗಳ ಸಂರಕ್ಷಣಾ ಘಟಕ ಮಾಡಬೇಕು. ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು ಎಂದು ಹೇಳಿದರು.
ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಿ. ನಾಗರಾಜು ಮಾತನಾಡಿ, ಈ ಭಾಗದಲ್ಲಿದೆ. ಮಾವು ಬೆಳೆ ಸುಮಾರು ಶೇ.40ರಿಂದ 50ರಷ್ಟು ಈ ಭಾಗದಲ್ಲಿದ್ದು, ಕೋಲಾರ, ಚಿಕ್ಕಬಳ್ಳಾಪುರ ಕಡೆ ಶೇ.30ರಿಂದ 35ರಷ್ಟಿದೆ. ಕಾಲಕಾಲಕ್ಕೆ ಔಷಧಿ ಹೊಡೆಯುವುದರಿಂದ ಬೆಳೆ ವೃದ್ಧಿಸಿಕೊಳ್ಳಬಹುದು. ಬೆಳೆಗಳಿಗೆ ಹಾನಿಯಾಗದಂತೆ ಟ್ರೇಗಳ ಮೂಲಕ ಶೇಖರಿಸಿಕೊಂಡು ಮಾರುಕಟ್ಟೆಗೆ ತರಬೇಕು ಎಂದು ಹೇಳಿದರು.
ಮಾವು ಬೆಳೆ ಬಗ್ಗೆ ತೋಟಗಾರಿಕೆ ಇಲಾಖೆ ನಿವೃತ್ತ ಅಪರ ನಿರ್ದೇಶಕ ಡಾ.ಎಸ್.ಹಿತ್ತಲಮನಿ, ವಿಜ್ಞಾನಿ ಡಾ.ನಾಗಪ್ಪ ದೇಸಾಯಿ ಮಾವಿನ ಸಸ್ಯ, ಬೆಳೆಗಳ ಸಂರಕ್ಷಣೆ ಉಪನ್ಯಾಸ ನೀಡಿದರು. ಗ್ರಾಪಂ ಅಧ್ಯಕ್ಷೆ ಗಂಗಮ್ಮ, ಮಾವು ಬೆಳೆಗಾರ ಸಂಘದ ಅಧ್ಯಕ್ಷ ಸಿ.ಎನ್ .ತಿಮ್ಮೇಗೌಡ, ತೋಟಗಾರಿಕೆ ಉಪನಿರ್ದೇಶಕ ಡಾ.ಎಚ್. ಟಿ.ಬಾಲಕೃಷ್ಣ, ಡಾ.ಬಿ.ರಘು, ಸಹಾಯಕ ನಿರ್ದೇಶಕ ಬಿ.ರಾಜಪ್ಪ, ಸಹಾಯಕ ಅಧಿಕಾರಿ ಟಿ.ಹೊನ್ನೇಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.