ಶಿವನಾಮ ಸ್ಮರಣೆಗೆ ಸಜ್ಜುಗೊಂಡ ಕಲ್ಪತರು ನಾಡು

Team Udayavani, Mar 4, 2019, 10:55 AM IST

tumkur.jpg

ತುಮಕೂರು: ಮಹಾಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸುವುದರ ಜೊತೆಗೆ ಶಿವನಾಮ ಸ್ಮರಣೆಗೆ ಕಲ್ಪತರು ನಾಡು ತುಮಕೂರು ಸಜ್ಜುಗೊಂಡಿದೆ. ಜಿಲ್ಲೆಯ ಎಲ್ಲಾ ಶಿವಾಲಯಗಳಲ್ಲಿ ವಿಶೇಷ ಪೂಜೆ, ಜಾಗರಣೆ ಆಚರಣೆ ಮಾಡಲು ವಿವಿಧ ಕಾರ್ಯಕ್ರಮ ಏರ್ಪಡಿಸಿದ್ದು, ಸೋಮವಾರ ಬೆಳಗ್ಗೆಯಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ಆಯೋಜನೆಗೊಂಡಿವೆ. ಬೆಲೆ ಏರಿಕೆ ನಡುವೆಯೂ ಮಹಾಶಿವರಾತ್ರಿಯನ್ನು ಸಂಭ್ರಮದಿಂದ ಆಚರಿಸಲು ಭಾನುವಾರ ನಗರದ ಮಾರುಕಟ್ಟೆಗಳಲ್ಲಿ ನಾಗರೀಕರು ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿ ಭರಾಟೆ ಜೋರಾಗಿಯೇ ನಡೆದಿತ್ತು.

ಪೂಜೆಗೆ ಖರೀದಿ: ಹಿಂದೂ ಧರ್ಮದಲ್ಲಿ ಪವಿತ್ರಹಬ್ಬವೆಂದೇ ಗುರುತಿಸಿಕೊಂಡಿರುವ ಮಹಾ ಶಿವರಾತ್ರಿಯನ್ನು ಪ್ರತಿಮನೆಯಲ್ಲೂ ಆಚರಿಸುವಹಿನ್ನೆಲೆಯಲ್ಲಿ ಹಬ್ಬಕ್ಕೆ ಅಗತ್ಯವಾಗಿರುವ ದಿನ ಬಳಕೆಯ ವಸ್ತುಗಳಾದ ಹೂವು, ಹಣ್ಣು, ತರಕಾರಿ ಮೊದಲಾದ ವಸ್ತುಗಳನ್ನು ಖರೀದಿ ಮಾಡುತ್ತಿದ್ದುದು ಸಾಮಾನ್ಯವಾಗಿತ್ತು.

ಇಲ್ಲಿಯ ಅಂತರಸನಹಳ್ಳಿಯಲ್ಲಿರುವ ಕೃಷಿ ಉತ್ಪನ್ನ ಹೂವು, ಹಣ್ಣು, ತರಕಾರಿ ಮಾರುಕಟ್ಟೆ, ಸಿದ್ದಿವಿನಾಯಕ ಮಾರುಕಟ್ಟೆ, ಎಂ.ಜಿ.ರಸ್ತೆ, ಮಂಡಿಪೇಟೆ, ಎಸ್‌.ಎಸ್‌.ಪುರಂ, ಎಸ್‌ಐಟಿ, ಶಿರಾಗೇಟ್‌, ಹನುಮಂತಪುರ, ಶ್ರೀರಾಮ ನಗರ, ಶೆಟ್ಟಿಹಳ್ಳಿಗೇಟ್‌, ಕ್ಯಾತ್ಸಂದ್ರಯಲ್ಲಾಪುರ ಸೇರಿದಂತೆ ವಿವಿಧ ಭಾಗಗಳಲ್ಲಿ ನಾಗರೀಕರುಹಬ್ಬಕ್ಕೆ ಬೇಕಾದ ಹೂವು, ಹಣ್ಣು, ತರಕಾರಿ ಸೇರಿದಂತೆವಿವಿಧ ಸಾಮಗ್ರಿಗಳನ್ನು ಖರೀದಿ ಮಾಡುತ್ತಿದ್ದರು.

ಹೂವಿನ ಧಾರಣೆ ಕುಸಿತ: ಮಾರುಕಟ್ಟೆಯಲ್ಲಿ ಹೂವಿನಧಾರಣೆ ಸ್ವಲ್ಪ ಮಟ್ಟಿಗೆ ಕುಸಿದಿದೆ. ಇದರ ಜೊತೆಗೆತರಕಾರಿಗಳ ಬೆಲೆಯಲ್ಲೂ ಅಂಥ ಏರಿಕೆ ಕಂಡು ಬಂದಿಲ್ಲ. ಆದರೆ, ಹಣ್ಣು ಸ್ವಲ್ಪ ಏರಿಕೆಯಾಗಿದ್ದರೂ, ಹಬ್ಬ ಆಚರಿಸಲೇಬೇಕಾದ ಹಿನ್ನೆಲೆಯಲ್ಲಿ ಖರೀದಿ ನಡೆಯುತ್ತಿತ್ತು. ದವನ, ಬಿಲ್ವಪತ್ರೆ, ಹೊಸ ವಸ್ತ್ರ, ವಿಭೂತಿ ಗಟ್ಟಿಗಳ ಮಾರಾಟವೂ ಭರದಿಂದ ನಡೆಯುತ್ತಿತ್ತು.

ದೇಗುಲ ಶುದ್ಧೀಕರಣ: ನಗರದ ಎಲ್ಲಾ ದೇವಾಲಯಗಳಲ್ಲಿ ಮಹಾಶಿವರಾತ್ರಿಯ ಹಬ್ಬದಅಂಗವಾಗಿ ವಿಶೇಷ ಪೂಜೆ ಉತ್ಸವ ಕಾರ್ಯಕ್ರಮಆಯೋಜಿಸಿರುವ ಹಿನ್ನೆಲೆಯಲ್ಲಿ ದೇವಾಲಯಗಳ ಶುದ್ಧೀಕರಣ ಕಾರ್ಯ ಭಾನುವಾರ ನಡೆಯುತ್ತಿದ್ದುದು ಕಂಡು ಬಂದಿತು.

ವಿಶೇಷ ಪೂಜೆ: ತುಮಕೂರಿನ ಸೋಮೇಶ್ವರ ದೇವಾಲಯ, ಗಂಗಾಧರೇಶ್ವರ ದೇವಾಲಯ, ಮಹಾಗಣಪತಿ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿದೆ.

ಮಹಾರಥೋತ್ಸವ: ಜಿಲ್ಲೆಯ ಪವಿತ್ರ ಕ್ಷೇತ್ರವಾಗಿರುವ ಚಿಕ್ಕನಾಯಕನಹಳ್ಳಿ ತೀರ್ಥರಾಮೇಶ್ವರ ಕ್ಷೇತ್ರದಲ್ಲಿವಿಶೇಷ ಪೂಜೆ ನಡೆಯಲಿದೆ. ತಾಲೂಕಿನ ಅರೆಯೂರಿನಶ್ರೀ ವೈದ್ಯನಾಥೇಶ್ವರ ಸ್ವಾಮಿ ಮಹಾರಥೋತ್ಸವನಡೆಯಲಿದ್ದು, ಜಿಲ್ಲೆಯ ವಿವಿಧ ದೇವಾಲಯಗಳಲ್ಲೂವಿಶೇಷ ಪೂಜೆ, ಉತ್ಸವ, ಅರ್ಚನೆಗಳು ಇಡೀ ರಾತ್ರಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ತುರುವೇಕೆರೆ ಮಲ್ಲೇಶ್ವರ ದೇವಾಲಯ, ಪಾವಗಡದಈಶ್ವರ ದೇವಾಲಯ, ಚಿಕ್ಕ ನಾಯಕನಹಳ್ಳಿಯ ಪ್ರಸನ್ನ  ರಾಮೇಶ್ವರ ದೇವಾಲಯ ಸೇರಿದಂತೆ ವಿವಿಧ ಶಿವದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಗಳು ನಡೆಯಲಿವೆ.

ಧರ್ಮಗೋಷ್ಠಿ : ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿ ಭಸ್ಮಾಂಗಿ ಬೆಟ್ಟದಲ್ಲಿರುವ ಐತಿಹಾಸಿಕ ಪ್ರಸಿದ್ಧ ಭಸ್ಮಾಂಗಿ ರುದ್ರೇಶ್ವರ ಸ್ವಾಮಿಗೆ ಮಹಾಶಿವರಾತ್ರಿ ಅಂಗವಾಗಿ ಬೆಳಗ್ಗೆ 10 ಗಂಟೆಯಿಂದ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 8 ಗಂಟೆಯಿಂದ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ,
ಮಹಾಮಂಗಳಾರತಿ, ಧರ್ಮ ಗೋಷ್ಠಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.