ವೈಭವದ ಸಿದ್ಧಗಂಗೆ ಶಿವರಾತ್ರಿ ರಥೋತ್ಸವ

Team Udayavani, Mar 6, 2019, 7:25 AM IST

vaibhavada.jpg

ತುಮಕೂರು: ಸಿದ್ಧಗಂಗೆಯ ಸಿದ್ಧಲಿಂಗೇಶ್ವರ ಸ್ವಾಮಿಯವರ ಮಹಾಶಿವರಾತ್ರಿ ರಥೋತ್ಸವ ಮಂಗಳವಾರ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.

ಬೇಡಿ ಬಂದ ಭಕ್ತರ ಇಷ್ಟಾರ್ಥ ನೆರವೇರಿಸುವ ತಪೋನಿಷ್ಠೆಯ ಸಿದ್ಧಿ ರೂಪವಾಗಿ ಉದ್ಭವವಾದ ಗಂಗೆಯು ನೆಲೆಸಿರುವ ಶ್ರೀ ಕ್ಷೇತ್ರ ಸಿದ್ಧಗಂಗೆಯಲ್ಲಿ ಕ್ಷೇತ್ರದ ಆರಾಧ್ಯ ದೈವ ಸಿದ್ಧಲಿಂಗೇಶ್ವರ ಸ್ವಾಮಿಯವರ ರಥೋತ್ಸವದಲ್ಲಿ ಸಾವಿರಾರು ಭಕ್ತರು ಸುಡು ಬಿಸಿಲನ್ನೂ ಲೆಕ್ಕಿಸದೆ ಭಾಗವಹಿಸಿ ರಥಕ್ಕೆ ಬಾಳೆಹಣ್ಣು, ದವನ ಎಸೆದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಬೇಡಿಕೊಳ್ಳುತ್ತಿದ್ದುದು ಸಾಮಾನ್ಯವಾಗಿತ್ತು.

ಮಂಗಳವಾರ ಮಧ್ಯಾಹ್ನ ಸಿದ್ಧಲಿಂಗೇಶ್ವರ ಸ್ವಾಮಿಯವರನ್ನು ಅಭೂತಪೂರ್ಣ ವಸ್ತ್ರಗಳಿಂದ ಸುವರ್ಣ ಕಲಶಗಳಿಂದ ಧಾರ್ಮಿಕ ಲಾಂಛನಗಳಾದ ಮಕರ, ತೋರಣ, ಕಳಶ, ಕನ್ನಡಿ ವಿವಿಧ ಬಗೆಯ ಪುಷ್ಪ ಮಾಲೆಗಳಿಂದ ಅಲಂಕೃತವಾದ ರಥದಲ್ಲಿ ಮಧ್ಯಾಹ್ನ 12.10ಕ್ಕೆ ಕೂರಿಸಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಧ್ಯುಕ್ತವಾಗಿ ಪೂಜೆ ಸಲ್ಲಿಸಿದ ಮೇಲೆ ನಂದಿಧ್ವಜ, ಕರಡಿ ಮಜಲು, ನಾಗಸ್ವರ ವಾದ್ಯ, ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಅಲಂಕೃತವಾದ ರಥೋತ್ಸವ ಆರಂಭಗೊಂಡಿತು.

ರಥೋತ್ಸವಕ್ಕೆ ಚಾಲನೆ: ಸಿದ್ಧಗಂಗಾ ಮಠದ ನಡೆದಾಡುವ ದೇವರಾಗಿದ್ದ ಡಾ.ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾದ ನಂತರ ಕ್ಷೇತ್ರದಲ್ಲಿ ನಡೆಯುತ್ತಿರುವ ಮೊದಲ ರಥೋತ್ಸವ ಇದಾಗಿದ್ದು, ಮಧ್ಯಾಹ್ನ 12.10ಕ್ಕೆ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿಯವರು ಹರಗುರುಚರಮೂರ್ತಿಗಳ ಸಮ್ಮುಖದಲ್ಲಿ ಹಿರಿಯ ಶ್ರೀಗಳಂತೆ ರಥದ ಬಲಭಾಗದ ಗಾಲಿಗೆ ತೆಂಗಿನಕಾಯಿ ಒಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.

ಹರ್ಷೋದ್ಗಾರ: ರಥೋತ್ಸವಕ್ಕೂ ಮುನ್ನ ಸಿದ್ಧಲಿಂಗೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ಹಿರಿಯ ಶ್ರೀಗಳ ಗದ್ದುಗೆ ಬಳಿಗೆ ಕೊಂಡೊಯ್ದು ಪೂಜೆ ಸಲ್ಲಿಸಿ, ನಂತರ ರಥದ ಸುತ್ತ ಮೂರು ಸುತ್ತು ಸುತ್ತಿದ ನಂತರ ರಥಕ್ಕೆ ಕೂರಿಸಲಾಯಿತು. ನಂತರ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ರಥದ ಗಾಲಿಗೆ ತೆಂಗಿನಕಾಯಿ ಒಡೆದು ಚಾಲನೆ ನೀಡುತ್ತಿದ್ದಂತೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಸಮೂಹದ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ನೆತ್ತಿ ಸುಡುವ ಬಿಸಿಲಿನ ಝಳವನ್ನು ಲೆಕ್ಕಿಸದೆ ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿ ಸಮರ್ಪಿಸಿದರು. ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಹಲವು ಸಂಘ-ಸಂಸ್ಥೆಗಳಿಂದ ಪಾನಕ, ನೀರು, ಮಜ್ಜಿಗೆ ವಿತರಿಸಲಾಯಿತು. ರಥೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್‌, ಅಮೂಲ್ಯ ರಾಕೇಶ್‌ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ವಿವಿಧ ಮಠಾಧೀಶರುಗಳು ಸೇರಿದಂತೆ ಅನೇಕ ಗಣ್ಯರು, ಭಕ್ತರು ಭಾಗವಹಿಸಿದ್ದರು.

ಇಂದು ಬೆಳ್ಳಿ ಪಲ್ಲಕ್ಕಿ ಉತ್ಸವ: ಬುಧವಾರ ರಾತ್ರಿ 11 ಗಂಟೆಗೆ ಪ್ರಸಿದ್ಧ ಬೆಳ್ಳಿ ಪಲ್ಲಕ್ಕಿ ಉತ್ಸವ ನಡೆಯಲಿದೆ. ಮಾ.7ರಂದು ತೆಪ್ಪೋತ್ಸವ ಮತ್ತು ಪಂಚಬ್ರಹ್ಮೋತ್ಸವಗಳು ನಡೆಯಲಿವೆ. ಜಾತ್ರೆಯ ಅಂಗವಾಗಿ ನಡೆಯುತ್ತಿರುವ ರಾಜ್ಯ ಮಟ್ಟದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜನ ಮನ ಸೆಳೆಯುತ್ತಿವೆ.

ಜಾತ್ರೆಯ ಅಂಗವಾಗಿ ಮಠದ ಆವರಣದಲ್ಲೆಲ್ಲಾ ಬಗೆ ಬಗೆಯ ವಸ್ತುಗಳ ಮಾರಾಟ ನಡೆಯುತ್ತಿದೆ. ಜಾತ್ರೆಗೆ ಬಂದವರು ಕಡಲೆ ಪುರಿಕೊಳ್ಳುವುದು ವಿಶೇಷ. ಕಡಲೆಪುರಿ ಅಂಗಡಿಗಳೇ ಹೆಚ್ಚಾಗಿದ್ದು, ಸಾವಿರಾರು ಮೂಟೆ ಪುರಿ, ಬಗೆ ಬಗೆಯ ಕಾರಾ, ಚಕುಲಿ, ಕಡಲೆಬೀಜ, ಕಡ್ಲೆ, ಬತಾಸು, ಜಿಲೇಬಿ, ಬೋಂಡಾ, ವಡೆ ಬಜ್ಜಿ, ಹೀಗೆ ಹಲವು ತಿಂಡಿ ತಿನ್ನಿಸುಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ.

ಟಾಪ್ ನ್ಯೂಸ್

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.