ಕಲ್ಪತರು ನಾಡಿನಲ್ಲಿ ಶಿವ ನಾಮಸ್ಮರಣೆ

Team Udayavani, Mar 5, 2019, 7:45 AM IST

kalpatru.jpg

ತುಮಕೂರು: ಶಿವನ ಭಜನೆಯೊಂದಿಗೆ ಜಿಲ್ಲಾದ್ಯಂತ ಸೋಮವಾರ ಸಡಗರ ಸಂಭ್ರಮದಿಂದ ಭಕ್ತರು ಮಹಾಶಿವರಾತ್ರಿ ಹಬ್ಬ ಆಚರಿಸಿದರು.

ಮಹಾಶಿವರಾತ್ರಿ ಅಂಗವಾಗಿ ಸೋಮವಾರ ನಗರಾದ್ಯಂತ ಎಲ್ಲೆಡೆ ಸಡಗರ ಸಂಭ್ರಮ ಎಲ್ಲಾ ದೇವಾಲಯಗಳಲ್ಲೂ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲೇ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಏರ್ಪಡಿಸಿದ್ದರಿಂದ ಸಾವಿರಾರು ಭಕ್ತರು ದೇವಾಲಯಗಳಿಗೆ ತೆರಳಿ ಸಾಮೂಹಿಕ ಅಭಿಷೇಕ ಅರ್ಚನೆಗಳಲ್ಲಿ ಭಾಗವಹಿಸುತ್ತಿದ್ದರು.

ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ: ನಗರದ ಬಿಎಚ್‌ ರಸ್ತೆಯಲ್ಲಿರುವ ಐತಿಹಾಸಿಕ ಪ್ರಸಿದ್ಧ ಸೋಮೇಶ್ವರ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಸಾಮೂಹಿಕ ಅಭಿಷೇಕ ಕಾರ್ಯಕ್ರಮಗಳು ನಿರಂತರವಾಗಿ ನಡೆದವು. ಸಾವಿರಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡಿ ಶಿವಲಿಂಗಗಳ ಮೇಲೆ ಜಲಾಭಿಷೇಕ, ಹಾಲಿನ ಅಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿವಿಧ ಅರ್ಚನೆಗಳನ್ನು ಮಾಡುವ ಮೂಲಕ ದೇವರಲ್ಲಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. 

ವಿಶೇಷ ಪೂಜೆ:ಬನಶಂಕರಿ ನಗರದ ಈಶ್ವರ ದೇವಾಲಯದಲ್ಲಿ ಪಂಚಮುಖೀ ಈಶ್ವರನನ್ನು ಪ್ರತಿಷ್ಠಾಪಿಸಿ ಸಾವಿರಾರು ಭಕ್ತರು ಸಾಮೂಹಿಕ ಪೂಜೆ ಸಲ್ಲಿಸಿದರು. ಟಿಜಿಎಂಸಿ ಬ್ಯಾಂಕ್‌ ಆವರಣದ ಮಹಾಲಕ್ಷ್ಮೀ ದೇವಾಲಯದಲ್ಲಿ ಶಿವನ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಭಕ್ತರಿಗೆ ತಂಬಿಟ್ಟು ಪ್ರಸಾದ ವಿತರಣೆ ಮಾಡಲಾಗಿತ್ತು.

ವಾಸವಿ ದೇವಾಲಯದಲ್ಲಿ, ಹೊರಪೇಟೆ ನೀಲಕಂಠಸ್ವಾಮಿ ದೇವಾಲಯದಲ್ಲಿ, ಮಹಾಗಣಪತಿ ನವಗ್ರಹ ದೇವಾಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ಮಹಾಶಿವರಾತ್ರಿ ಪೂಜೆಗಳು ನಡೆದವು. ನಗರದ ಡಾ.ರಾಧಾಕೃಷ್ಣ ರಸ್ತೆಯ ಭದ್ರಮ್ಮ ಛತ್ರದ ಹಿಂಭಾಗದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ಮಹಾವಿದ್ಯಾಲಯದ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ಪಂಚಲಿಂಗ ದರ್ಶನದ ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.

ನಗರದ ಕುಣಿಗಲ್‌ ರಸ್ತೆಯ ಬನಶಂಕರಿಯಲ್ಲಿನ ಮಳೆ ಬಸವಣ್ಣ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಪಂಚಲಿಂಗ ದರ್ಶನ, ಬಸವನ ಮೇಲೆ ಕುಳಿತ ಶಿವ ಹಾಗೂ ದೇವಾಲಯದ ಆವರಣದಲ್ಲಿರುವ ಬೃಹತ್‌ ಶಿವನ ಪ್ರತಿಮೆಗೆ ವಿಶೇಷ ಅಲಂಕಾರ ಹಾಗೂ ಪೂಜೆ ಏರ್ಪಡಿಸಲಾಗಿತ್ತು. ಸಾವಿರಾರು ಭಕ್ತರು ದೇವಾಲಯಕ್ಕೆ ತೆರಳಿ ಶಿವನ ದರ್ಶನ ಪಡೆದರು.

ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅರೆಯೂರು ವೈದ್ಯನಾಥೇಶ್ವರ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ವೈದ್ಯನಾಥೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ರಥೋತ್ಸವ ವೈಭವಯುತವಾಗಿ ನಡೆಯಿತು. ತಾಲೂಕಿನ ಹಾಲನೂರಿನಲ್ಲಿರುವ ಮಲ್ಲಿಕಾರ್ಜುನಸ್ವಾಮಿಯ ಉತ್ಸವವು ವೈಭವಯುತವಾಗಿ ನಡೆಯಿತು. ನಂಜುಂಡ ಶಿವಯೋಗಿಗಗಳ ಗದ್ದುಗೆಯ ಬಳಿ ಆಗಮಿಸಿ ಅಲ್ಲಿ ಸ್ವಾಮಿ ಗದ್ದುಗೆ ಮೇಲೆ ಸ್ಥಾಪಿಸಿ ಶಿವಲಿಂಗಕ್ಕೆ ಹಾಗೂ ಗಣಪತಿ ಮತ್ತು ನವಗ್ರಹಗಳಿಗೆ ರುದ್ರಾಭಿಷೇಕ, ಸಹಸ್ರನಾಮ ಪೂಜೆ, ಮಹಾಮಂಗಳಾರತಿ ಜರುಗಿತು.

ನಗರದ ಜಯಪುರ ಬಡಾವಣೆಯಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಲಕ್ಷ್ಮೀದೇವಿ ದೇವಾಲಯದಲ್ಲಿ ಗಂಗಾಧರೇಶ್ವರಸ್ವಾಮಿ ಉತ್ಸವ ಮೆರವಣಿಗೆ ಮೂಲಕ ನಡೆಯಿತು. ನಗರದ ಸಿದ್ದರಾಮೇಶ್ವರ ಬಡಾವಣೆ ಶಿವಸುಬ್ರಮಣ್ಯ ಗಣಪತಿ ದೇವಾಲಯದಲ್ಲಿ ಕೈಲಾಸ ಪರ್ವತದ ಪ್ರತಿರೂಪ ಹಾಗೂ 12 ಅಡಿ ಎತ್ತರದ ಶಿವಲಿಂಗ ಪ್ರತಿಷ್ಠಾಪನೆ ಮಾಡಲಾಗಿದ್ದು, ಭಕ್ತರು ದೇವರ ದರ್ಶನ ಪಡೆದರು.

ಉಪ್ಪಾರಹಳ್ಳಿಯ ಶಿವಲಿಂಗ ರಸ್ತೆಯಲ್ಲಿರುವ ಮಹಾಲಿಂಗೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಕುಂಭಾಭಿಷೇಕ ಮತ್ತು ಕ್ಷೀರಾಭಿಷೇಕವನ್ನು ಹಮ್ಮಿಕೊಳ್ಳಲಾಗಿತ್ತು. ಇದಲ್ಲದೆ ಜಿಲ್ಲಾದ್ಯಂತ ಎಲ್ಲಾ ಶಿವ ದೇವಾಲಯಗಳಲ್ಲೂ ವಿಶೇಷ ಪೂಜೆ ಪ್ರಾರ್ಥನೆಗಳು ನಡೆದವು. ಸಿದ್ಧಗಂಗಾ ಮಠದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಕ್ಷೇತ್ರನಾಥ ಸಿದ್ಧಲಿಂಗೇಶ್ವರ ಸ್ವಾಮಿಯವರಿಗೆ ವಿಶೇಷ ಪೂಜೆ ಉತ್ಸವಗಳು ಜರುಗಿದವು.

ಬಿಲ್ವಪತ್ರೆ ಎಳನೀರು ಅಭಿಷೇಕ: ಶಿವನಿಗೆ ಪ್ರಿಯವಾದ ಬಿಲ್ವಪತ್ರೆಯಾಗಿದ್ದು, ಮಹಾಶಿವರಾತ್ರಿಯ ದಿನದಂದು ಶಿವಲಿಂಗಕ್ಕೆ ಬಿಲ್ವಾರ್ಚನೆ ಮಾಡಿ ಎಳನೀರ ಹಾಲಾಭಿಷೇಕ ಮಾಡಿದರೆ ಪುಣ್ಯಪ್ರಾಪ್ತಿ ದೊರೆಯುತ್ತದೆ ಎನ್ನುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲೂ ಅಪಾರ ಸಂಖ್ಯೆಯ ಭಕ್ತರು ಸರದಿಯಲ್ಲಿ ನಿಂತು ಶಿವನಿಗೆ ಬಿಲ್ವಾರ್ಚನೆ ಹಾಗೂ ಸಾಮೂಹಿಕ ಅಭಿಷೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶಿವನ ದರ್ಶನ ಪಡೆದರು.

ಯಡಿಯೂರಿನ ಪ್ರಸಿದ್ಧ ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಅಭಿಷೇಕಗಳು ನಡೆದವು. ಮಧುಗಿರಿಯ ಪ್ರಸಿದ್ಧ ಮಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ರುದ್ರಾಭಿಷೇಕ ಹಾಗೂ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಚಿ.ನಾ.ಹಳ್ಳಿ ತಾಲೂಕಿನ ವಜ್ರದ ರಾಮೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಜಿಲ್ಲಾದ್ಯಂತ ಬರ ಹಾಗೂ ಬಿಸಿಲಿನ ನಡುವೆಯೂ ಮಹಾಶಿವರಾತ್ರಿ ಸಡಗರ ಸಂಭ್ರಮದಿಂದಲೇ ಆಚರಣೆ ಮಾಡಲಾಯಿತು.

ಟಾಪ್ ನ್ಯೂಸ್

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.