ಸಿದ್ಧಗಂಗಾ ಶ್ರೀಗಳಿಗೆ ಮಹಾವೀರ ಪ್ರಶಸ್ತಿ ಪ್ರದಾನ
Team Udayavani, Apr 18, 2017, 3:45 AM IST
ತುಮಕೂರು: ಕರ್ನಾಟಕ ಸರ್ಕಾರವು ಮಹಾವೀರರ ಹೆಸರಿನಲ್ಲಿ ಮೊದಲ ಬಾರಿಗೆ ನೀಡುತ್ತಿರುವ ಶ್ರೀ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಯನ್ನು ಸೋಮವಾರ ಸಂಜೆ ತುಮಕೂರಿನ ಯಡಿಯೂರು ಸಿದ್ಧಗಂಗಾ ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮಭೂಷಣ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.
ಪ್ರಶಸ್ತಿ 10 ಲಕ್ಷ ರೂ. ನಗದು, ಮಹಾವೀರರ ಪುತœಳಿ, ಪ್ರಶಸ್ತಿ ಫಲಕ ಹೊಂದಿದೆ. ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿದ್ಧಗಂಗಾಶ್ರೀಗಳ ಸಹನೆ, ಅಹಿಂಸಾ ನಿಲುವು, ಸೇವಾತತ್ಪರತೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ವರ್ಷದಿಂದ ಆರಂಭಿಸಿರುವ ಶ್ರೀ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಯನ್ನು ಮೊದಲ ಬಾರಿಗೆ ಸ್ವಾಮೀಜಿಯವರಿಗೆ ನೀಡಲಾಗುತ್ತಿದೆ ಎಂದರು.
ಶ್ರೀಗಳಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಕಾನೂನು ಸಚಿವ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಹೋಗಿ ಇನ್ನೊಂದು ಬಾರಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತ ಸಚಿವೆ ಉಮಾಶ್ರೀ, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಶಾಸಕರಾದ ಬಿ.ಸುರೇಶ್ಗೌಡ ಸಿ.ಬಿ.ಸುರೇಶ್ ಬಾಬು, ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.