Goravanahalli ಮಹಾಲಕ್ಷ್ಮೀ ದೇವಾಲಯದಲ್ಲಿ ಸಹಸ್ರಾರು ಭಕ್ತರಿಂದ ವಿಶೇಷ ಪೂಜೆ


Team Udayavani, Aug 16, 2024, 8:47 PM IST

1-go-aaa

ಕೊರಟಗೆರೆ: ನಾಡಿನೆಲ್ಲೆಡೆ ಶುಕ್ರವಾರ (ಆ16) ಶ್ರೀ ವರಮಹಾಲಕ್ಷ್ಮೀ ಹಬ್ಬ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯದ ನಾನಾ ಭಾಗಗಳಿಂದ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯಕ್ಕೆ ಸಹಸ್ರಾರು ಭಕ್ತರು ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

ಬೆಳಗ್ಗೆ 6 ರಿಂದ 7.30 ರವೆರೆಗೆ ಪಂಚಾಮೃತ ಅಭಿಷೇಕ, ನಂತರ ಗಣ ಹೋಮ ಸೇರಿದಂತೆ ವಿಶೇಷ ಪೂಜೆ ಹಾಗೂ ತಾಯಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ, ಎಲೆರಾಂಪುರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ, ತಗ್ಗೀಹಳ್ಳಿ ಶ್ರೀಮಠದ ಸ್ವಾಮೀ ರಮಾನಂದಜೀ ಸೇರಿದಂತೆ ಇತರೆ ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಶ್ರೀಗೊರವನಹಳ್ಳಿ ಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಸಹ ಕಲ್ಪಿಸಲಾಗಿತ್ತು. ಬಂದಂತಹ ಭಕ್ತರಿಗೆ ನೂತನ ದಾಸೋಹ ಕಟ್ಟಡದಲ್ಲಿ ದಾಸೋಹದ ವ್ಯವಸ್ಥೆ ಕೂಡ ಮಾಡಲಾಗಿದ್ದು, ಫ್ರೆಂಡ್ಸ್ ಗ್ರೂಪ್‌ನವರು ದಾಸೋಹ ಕಾರ್ಯದಲ್ಲಿ ಕೈ ಜೋಡಿಸಿದರು. ಪೋಲಿಸ್ ಇಲಾಖೆ ಅಧಿಕಾರಿಗಳು ಸೂಕ್ತ ಭದ್ರತೆ ನೀಡಿ ಭಕ್ತರ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.

ಎಲೆರಾಂಪುರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವು ಸಹ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯದಲ್ಲಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗಿದೆ. ರಾಜ್ಯದ ನಾನಾ ಭಾಗಗಳಿಂದ ಬರುವ ಭಕ್ತರಿಗೆ ವಿಶೇಷ ದರ್ಶನಕ್ಕೆ ಮತ್ತು ದಾಸೋಹ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ವರ್ಷ ನಿರೀಕ್ಷೆಗೂ ಮೀರಿದ ಜನರು ತಾಯಿಯ ದರ್ಶನ ಪಡೆದಿದ್ದು, ಗೊರವನಹಳ್ಳಿ ಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉತ್ತಮ ಕಾರ್ಯನಿರ್ವಹಿಸಿದೆ ಎಂದು ಹೇಳಿದರು.ತಗ್ಗಿಹಳ್ಳಿ ಶ್ರೀಮಠದ ಸ್ವಾಮೀ ರಮಾನಂದಜೀ ಮಾತನಾಡಿದರು.

ಈ ಸಂದರ್ಭದಲ್ಲಿ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ವಾಸುದೇವ ಮಾತನಾಡಿ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಭಕ್ತರು ಆಗಮಿಸಿ ಪ್ರತಿವರ್ಷದಂತೆ ಈ ವರ್ಷವು ಸಹ ಶ್ರೀಮಹಾಲಕ್ಷ್ಮೀ ತಾಯಿಯ ದರ್ಶನ ಪಡೆದಿದ್ದಾರೆ. ಟ್ರಸ್ಟ್ ವತಿಯಿಂದ ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮತ್ತು ದಾಸೋಹ ವ್ಯವಸ್ಥೆ ಕೂಡ ಕಲ್ಪಿಸಲಾಗಿತ್ತು 35 ಸಾವಿರಕ್ಕೂ ಅಧಿಕ ಭಕ್ತರು ತಾಯಿಯ ದರ್ಶನ ಪಡೆದಿದ್ದು, ಪ್ರತಿವರ್ಷ ತಾಯಿಯ ಆಶೀರ್ವಾದದಿಂದ ಭಕ್ತರ ಸಂಖೈ ಏರಿಕೆಯಾಗುತ್ತಿದೆ ಎಂದರು.

ವಿಶೇಷ ಅಧಿಕಾರಿ ಕೇಶವಮೂರ್ತಿ ಮಾತನಾಡಿ ‘ ಹಬ್ಬದ ಪ್ರಯುಕ್ತ ಬೆಳಗ್ಗಿನಿಂದಲೇ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿತ್ತು.ರಾಜ್ಯದ ಹಲವು ಮಠದ ಶ್ರೀಗಳು, ಗಣ್ಯರು ಸೇರಿದಂತೆ ಸಾವಿರಾರು ಭಕ್ತರು ತಾಯಿಯ ದರ್ಶನ ಪಡೆದಿದ್ದಾರೆ. ನಿರೀಕ್ಷೆಗೂ ಮೀರಿದ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದಾರೆ’ ಎಂದರು.

ಕಾರ್ಯದರ್ಶಿ ಮುರುಳಿಕೃಷ್ಣ, ಖಚಾಂಚಿ ಜಗದೀಶ್, ಧರ್ಮದರ್ಶಿಗಳಾದ ಡಾ.ಲಕ್ಷ್ಮೀಕಾಂತ, ನಟರಾಜು, ಶ್ರೀಪ್ರಸಾದ್, ರವಿರಾಜೇಅರಸ್, ಮಂಜುನಾಥ್, ಓಂಕಾರೇಶ್, ಚಿಕ್ಕನರಸಯ್ಯ, ಬಾಲಕೃಷ್ಣ, ನರಸರಾಜು, ಲಕ್ಷ್ಮೀನರಸಯ್ಯ, ನಾಗರಾಜು, ಕಾರ್ಯನಿರ್ವಾಹಕ ಅಧಿಕಾರಿ ಜಿ.ಸಿ ಲಕ್ಷ್ಮಯ್ಯ, ಫ್ರೆಂಡ್ಸ್ ಗ್ರೂಪ್‌ನ ರವಿಕುಮಾರ್, ಮಲ್ಲಣ್ಣ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.