ಮಾನಸಿಕ ಬೆಳವಣಿಗೆಗೆ ಕ್ರೀಡೆ ಅವಶ್ಯ
Team Udayavani, May 11, 2019, 12:31 PM IST
ತುಮಕೂರು: ಮನುಷ್ಯನ ಮಾನಸಿಕ, ನೈತಿಕ ಹಾಗೂ ಆಧ್ಯಾತ್ಮಿಕ ಬೆಳವಣಿಗೆಗೆ ಕ್ರೀಡೆಗಳು ಸಹಾಯಕ ಎಂದು ತುಮಕೂರು ವಿವಿ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಹೇಳಿದರು.
ತುಮಕೂರು ವಿವಿ ಪರೀಕ್ಷಾ ಭವನ ದಲ್ಲಿ ನಡೆದ ಸ್ನಾತಕೋತ್ತರ ಅಂತರ ವಿಭಾಗ ಕ್ರೀಡಾಕೂಟ ಸಮಾರೋಪ ಹಾಗೂ ವಿಶ್ವ ರೆಡ್‌ಕ್ರಾಸ್ ದಿನ ಉದ್ಘಾ ಟಿಸಿದ ಅವರು ಮಾತನಾಡಿ, ಮನುಷ್ಯ ನಿಗೆ ಆರೋಗ್ಯವೇ ಭಾಗ್ಯ. ಸಮರ್ಥ ಜೀವನದಲ್ಲಿ ಆರೋಗ್ಯಕ್ಕೆ ಪ್ರಮುಖ ಸ್ಥಾನವಿದೆ. ದೇಹಕ್ಕೂ ಮನಸ್ಸಿಗೂ ಸಂಬಂಧವಿದೆ. ಯಾವುದೇ ಒಂದಕ್ಕೆ ತೊಂದರೆಯಾದರೂ ನಮ್ಮ ಎಲ್ಲಾ ಚಟುವಟಿಕೆಗಳಿಗೆ ಅಡ್ಡಿಯಾಗುತ್ತದೆ. ಕ್ರೀಡೆಗಳು ದೇಹ ಮತ್ತು ಮನಸ್ಸನ್ನು ಸದೃಢವಾಗಿಸಲು ಸಹಾಯಕ. ಅಲ್ಲದೆ, ಕ್ರೀಡೆಗಳು ಸಮಾನತೆ ಭಾವನೆ ಮೂಡಿ ಸುತ್ತವೆ. ರಕ್ತದಾನಕ್ಕಿಂತ ಮಹಾದಾನ ಮತ್ತೂಂದಿಲ್ಲ ಎಂದರು.
ಆರೋಗ್ಯದತ್ತ ಗಮನ ನೀಡಿ: ಕಲ್ಬುರ್ಗಿ ವಿಶ್ವವಿದ್ಯಾಯಲದ ಪ್ರಭಾರ ಕುಲಪತಿ ಡಾ.ಪ್ರತಾಪ್ ಸಿಂಗ್ ತಿವಾರಿ ಮಾತ ನಾಡಿ, ರೆಡ್ ಕ್ರಾಸ್ ಸಂಸ್ಥೆ ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯ ನಿರ್ವ ಹಿಸುತ್ತಿದೆ. ಮಹಾಯುದ್ಧಗಳ ಸಮಯ ದಲ್ಲಿ ಗಾಯಾಳುಗಳಿಗೆ ಸೇವೆ ಮಾಡಿದೆ. ಪ್ರತಿಯೊಬ್ಬರು ಆರೋಗ್ಯದ ಕಡೆ ಹೆಚ್ಚು ಗಮನ ನೀಡಬೇಕು. ಲವಲವಿಕೆಯಿಂದ ಇದ್ದಷ್ಟು ಆರೋಗ್ಯ ಹೆಚ್ಚುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತುಮ ಕೂರು ವಿವಿ ಕುಲಸಚಿವ ಪ್ರೊ.ಕೆ.ಎಂ. ಗಂಗಾ ನಾಯಕ್, ಮೌಲ್ಯಮಾಪನ ಕುಲ ಸಚಿವ ಪ್ರೊ.ಕೆ.ಜಿ.ಸುರೇಶ್, ಹಣಕಾಸು ಅಧಿಕಾರಿ ಪ್ರೊ.ಪರಮಶಿವಯ್ಯ, ಯುವ ರೆಡ್ ಕ್ರಾಸ್ ಘಟಕದ ನೋಡಲ್ ಅಧಿಕಾರಿ ಪ್ರೊ.ಕೆ.ಜೆ.ಪರಶುರಾಮ, ಸಹಾಯಕ ಕಾರ್ಯಕ್ರಮ ಅಧಿಕಾರಿ ಎಂ.ಹೇಮಂತ್, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಸಂಯೋಜಕ ಆರ್. ಸುದೀಪ್ ಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.