ಲಿಂಗೈಕ್ಯ ಸಿದ್ಧಗಂಗಾ ಶ್ರೀಗಳ ಜಯಂತ್ಯುತ್ಸವ
112ನೇ ಜಯಂತಿಯಲ್ಲಿ ಗದ್ದುಗೆಗೆ ನಮನ ಸಲ್ಲಿಸಿದ ಭಕ್ತರು; ಮಠಾಧೀಶರಿಂದ ವಿಶೇಷ ಪೂಜೆ
Team Udayavani, Apr 2, 2019, 6:00 AM IST
ತುಮಕೂರು: ಶತಾಯುಷಿ ಸಿದ್ಧಗಂಗಾ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳು 111 ವಸಂತಗಳನ್ನು ಪೂರೈಸಿ ಲಿಂಗೈಕ್ಯರಾಗಿದ್ದು, ಶ್ರೀಗಳ 112ನೇ ವರ್ಷದ ಜಯಂತ್ಯುತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಸೋಮವಾರ ಶ್ರೀಮಠದಲ್ಲಿ ಸಿದ್ದಲಿಂಗ ಸ್ವಾಮಿಗಳ ನೇತೃತ್ವದಲ್ಲಿ ನಡೆಯಿತು.
ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ 112ನೇ ವರ್ಷದ ಜಯಂತಿ ಹಿನ್ನೆಲೆಯಲ್ಲಿ ಈ ವರ್ಷವೂ ಭಕ್ತರು ಬೆಳಗ್ಗೆಯಿಂದಲೇ ಶ್ರೀಮಠಕ್ಕೆ ಬಂದಿದ್ದರು. ಆದರೆ ಶ್ರೀಗಳಿಲ್ಲದ ಮಠದಲ್ಲಿ ಶ್ರೀಗಳಿದ್ದಾರೆ ಎನ್ನುವ ಭಾವ ಆವರಿಸಿತ್ತು.
ಮೊದಲ ಬಾರಿಗೆ ಮೂರ್ತ ಶ್ರೀಗಳಿಲ್ಲದ ಜಯಂತ್ಯುತ್ಸವದಲ್ಲಿ ಗುರುವಂದನೆ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಗಳ ಹರಗುರುಚರಮೂರ್ತಿಗಳು ವಿಶೇಷ ಪಾದಪೂಜೆ, ಆರತಿ ಮಾಡಿ ಭಕ್ತಿ ಸಮರ್ಪಿಸಿದರು. ಶಿವಕುಮಾರ ಶ್ರೀಗಳು ಈವರೆಗೆ ಬೆಳಗಿನಜಾವ 3 ಗಂಟೆಗೆ ಎದ್ದು 5 ಗಂಟೆಯೊಳಗೆ ಶಿವಪೂಜೆ ಮಾಡುತ್ತಿದ್ದರು. ಆದರೆ ಶ್ರೀಗಳು ಲಿಂಗೈಕ್ಯರಾಗಿರುವ ಹಿನ್ನೆಲೆ ಶ್ರೀ ಸಿದ್ಧಗಂಗ ಸ್ವಾಮಿಗಳು ಹಿರಿಯ ಶ್ರೀಗಳ ಗದ್ದುಗೆಗೆ ಸೋಮವಾರ ಬೆಳಗ್ಗೆ 4 ಗಂಟೆಗೆ ಹಳೇ ಮಠದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದರು. ಅಲ್ಲಿ ನೂರಾರು ಮಂದಿ ಲಿಂಗಪೂಜೆಯನ್ನು ಸಾಕ್ಷೀಕರಿಸಿದರು. ನಂತರ ಇಡೀ ದಿನ ಭಕ್ತರಿಗೆ ದರ್ಶನ ನೀಡದರು. ಅಧಿಕಾರಿಗಳು ಸೇರಿ ಅನೇಕ ಗಣ್ಯರು, ಭಕ್ತರು ಸರತಿಯಲ್ಲಿ ಶಿವಕುಮಾರಸ್ವಾಮಿಗಳ ಗದ್ದುಗೆಗೆ ನಮಿಸಿದರು.
ಭಕ್ತರಿಗೆ ಸಿಹಿ ಊಟ
ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ 112ನೇ ವರ್ಷದ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಭಕ್ತರಿಗೆ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 5.30 ರಿಂದಲೇ ಬಿಸಿ ಬಿಸಿ ಉಪ್ಪಿಟ್ಟು, ಕೇಸರಿಬಾತ್ ವಿತರಿಸಲಾಯಿತು. ಜತೆಗೆ ಇಡ್ಲಿ ಕೂಡ ನೀಡಲಾಯಿತು. ಮಧ್ಯಾಹ್ನ ಊಟದಲ್ಲಿ ಅನ್ನ ಸಾಂಬಾರ್, ಪಾಯಸ, ತುಪ್ಪ, ಸಿಹಿಬೂಂದಿ, ಖಾರಬೂಂದಿ, ಕೋಸಂಬರಿ, ತರಕಾರಿ ಕೂಟು ಬಡಿಸಿದರು. 5 ಕಡೆಗಳಲ್ಲಿ ಊಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಠದಲ್ಲಿಯೂ ರಾತ್ರಿವರೆಗೆ ನಿರಂತರ ದಾಸೋಹ ನಡೆಯಿತು.
ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು
ತ್ರಿವಿದ ದಾಸೋಹಿ, ಅಭಿನವ ಬಸವಣ್ಣ ಎಂದೆಲ್ಲ ಭಕ್ತರಿಂದ ಕರೆಸಿಕೊಳ್ಳುತ್ತಿದ್ದ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 112ನೇ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಡೆವೋಟೀಸ್ ಅಸೋಸಿಯೇಷನ್‌ನಿಂದ 112 ಮಕ್ಕಳಿಗೆ ಶ್ರೀಗಳ ಹೆಸರನ್ನು ನಾಮಕರಣ ಮಾಡಿ ಮಕ್ಕಳಿಗೆ ತೊಟ್ಟಿಲು ನೀಡಿದರು. ಜತೆಗೆ ರಕ್ತದಾನ ಶಿಬಿರವನ್ನು ನಡೆಸಲಾಯಿತು. ಪರಿಸರ ಜಾಗೃತಿ ಹಿನ್ನೆಲೆಯಲ್ಲಿ 112 ಹೊಂಗೆ ಸಸಿಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.