ಶ್ರೀನಿವಾಸ್, ವೆಂಕಟರಮಣಪ್ಪಗೆ ಒಲಿದ ಸಚಿವ ಸ್ಥಾನ
Team Udayavani, Jun 7, 2018, 4:08 PM IST
ತುಮಕೂರು: ಅಂತೂ ಇಂತೂ ಗುಬ್ಬಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್‌ಗೆ ಮತ್ತು ಪಾವಗಡ ವಿಧಾನ ಸಭಾ ಕ್ಷೇತ್ರದ ಶಾಸಕ ವೆಂಕಟರಮಣಪ್ಪರಿಗೆ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಒದಗಿಬಂತು ಸಚಿವರಾಗುವ ಯೋಗ ಅಭಿಮಾನಿಗಳಲ್ಲಿ ಹೆಚ್ಚಿದ ಸಂಭ್ರಮ.
ಕಲ್ಪತರು ನಾಡಿನ ಅಭಿವೃದ್ಧಿಗೆ ಪೂರಕವಾಗು ವಂತೆ ಸಮ್ಮಿಶ್ರ ಸರ್ಕಾರದಲ್ಲಿ ಜಿಲ್ಲೆಗೆ ಪ್ರಥಮ ಬಾರಿಗೆ ಉಪ ಮುಖ್ಯಮಂತ್ರಿ ಸ್ಥಾನ ದೊರೆತಿದೆ. ಬುಧವಾರ ವಿಸ್ತರಣೆಗೊಂಡ ಸಚಿವ ಸಂಪುಟದಲ್ಲಿ ಜೆಡಿಎಸ್ ಪಕ್ಷದಿಂದ ನಾಲ್ಕು ಬಾರಿ ಗುಬ್ಬಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಎಸ್.ಆರ್.ಶ್ರೀನಿವಾಸ್‌ಗೆ ಒಕ್ಕಲಿಗರ ಕೋಟಾದಡಿ, ಪಾವಗಡ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ನಾಲ್ಕು ಬಾರಿ ಗೆಲುವು ಸಾಧಿಸಿರುವ ವೆಂಕಟರಮಣಪ್ಪ ಅವರಿಗೆ ಭೋವಿ ಜನಾಂಗದ ಕೋಟಾದಡಿ ಸಚಿವ ಸ್ಥಾನ ಸಿಕ್ಕಿದೆ. ಜಿಲ್ಲೆಯಲ್ಲಿ ಯಾರಿಗೆ ಸಚಿವ ಸ್ಥಾನ ಸಿಗುತ್ತೆ ಎಂದು ಕುತೂಹಲ ಮೂಡಿದಕ್ಕೆ ತೆರೆ ಎಳೆದು ಕಾಂಗ್ರೆಸ್ ಜೆಡಿಎಸ್ ಎರಡು ಪಕ್ಷಗಳಿಂದಲೂ ಸಚಿವ ಸ್ಥಾನ ಸಿಕ್ಕಿರುವುದು ಸಂತಸ ಮೂಡಿದೆ.
ಎಸ್.ಆರ್. ಶ್ರೀನಿವಾಸ್‌ಗೆ ಸಚಿವ ಸ್ಥಾನ: ಗುಬ್ಬಿ ವಿಧಾನ ಸಭಾ ಕ್ಷೇತ್ರದಲ್ಲಿ ನಾಲ್ಕು ಬಾರಿ ಗೆಲುವಿನ ನಗೆ ಬೀರಿರುವ ಎಸ್.ಆರ್. ಶ್ರೀನಿವಾಸ್‌ಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಿರುವುದು ಅವರ ಅಭಿಮಾನಿಗಳಲ್ಲಿ ಹರ್ಷ ಮೂಡಿದೆ. ಗುಬ್ಬಿಯಲ್ಲಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಎರಡನೇ ಬಾರಿ ಸಚಿವರಾದ ವೆಂಕಟರಮಣಪ್ಪ ಜಿಲ್ಲೆಯ ಗಡಿ ಭಾಗ ಪಾವಗಡದಿಂದ ಆಯ್ಕೆಯಾಗಿರುವ ವೆಂಕಟರಮಣಪ್ಪ ಎರಡನೇ ಬಾರಿ ಸಚಿವರಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಡಾ. ಜಿ. ಪರಮೇಶ್ವರ್‌ಗೆ ಉಪಮುಖ್ಯಮಂತ್ರಿನ ಸ್ಥಾನ ದೊರೆತ್ತಿತ್ತು. ಸಚಿವ ಸ್ಥಾನ ಜಿಲ್ಲೆಗೆ ದೊರೆಯುವುದಿಲ್ಲ ಎನ್ನಲಾಗಿತ್ತು.
ವೆಂಕಟರಮಣಪ್ಪನರಿಗೆ ಸಚಿವ ಸ್ಥಾನ ದೊರೆತಿರುವುದು ಪಾವಗಡ ಜನರಲ್ಲಿ ಸಂತಸ ಮೂಡಿದೆ. ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದ್ದರು ನನಗೂ ಸಚಿವ ಸ್ಥಾನ ನೀಡಿ ಎಂದು ಉಪ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡಿ ತಮ್ಮ ಕ್ಷೇತ್ರದಲ್ಲಿದ್ದ ವೆಂಕಟರಮಣಪ್ಪನವರಿಗೆ ಬುಧವಾರ ಬೆಳಗ್ಗೆ 8 ಗಂಟೆಗೆ ನೀವು ಸಚಿವರಾಗುತ್ತೀರಿ. ಬೆಂಗಳೂರಿಗೆ ಬನ್ನಿ ಎನ್ನುವ ಕರೆ ಅವರಿಗೆ ಸಂತಸ ಮೂಡಿಸಿತ್ತು.
ಪಾವಗಡ ವಿಧಾನ ಸಭಾ ಕ್ಷೇತ್ರದಲ್ಲಿ 1989ರಲ್ಲಿ ಕಾಂಗ್ರೆಸ್‌ನಿಂದ 2004 ರಲ್ಲಿ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿದರು. 2008 ರಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ತಪ್ಪಿದ ಪರಿಣಾಮ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದರು. ಆಗ ಬಿಜೆಪಿಗೆ ಬೆಂಬಲ ನೀಡಿ ಸಚಿವರಾದರು.ಮತ್ತೆ 2018 ರಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ ಪರಿಣಾಮ ಭೋವಿ ಜನಾಂಗಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಕಾರಣದಿಂದ ವೆಂಕಟರಮಣಪ್ಪನವರಿಗೆ ಸಚಿವ ಸ್ಥಾನ ಲಭಿಸಿದೆ.
ಮೊದಲ ಬಾರಿ ಸಚಿವ ಸ್ಥಾನ ಪಡೆದ ಶ್ರೀನಿವಾಸ್ ನೇರ ಮಾತು, ಜನರೊಂದಿಗೆ ಬೆರೆಯುವ ಸ್ವಭಾವ ದಿಂದಲೇ ಜನರ ಮನಸ್ಸಿನಲ್ಲಿ ನೆಲೆಸಿ ನಾಲ್ಕು ಬಾರಿ ನಿರಂತರವಾಗಿ ಗೆಲುವು ಸಾಧಿಸಿರುವ ಎಸ್.ಆರ್. ಶ್ರೀನಿವಾಸ್ 2004 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ವಿಧಾನ ಸಭೆ ಪ್ರವೇಶಿಸಿ ಆನಂತರ ಜೆಡಿಎಸ್ ಪಕ್ಷಕ್ಕೆ ಸೇರಿ 2008, 2013, 2018 ರ ವಿಧಾನ ಸಭಾ ಚುನಾವಣೆಯಲ್ಲಿ ನಿರಂತರ ಗೆಲುವು ಸಾಧಿಸಿ ಈ ಭಾಗದ ಹ್ಯಾಟ್ರಿಕ್ ಹೀರೋ ಆಗಿದ್ದಾರೆ.
ಈ ಬಾರಿ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಲೇ ಬೇಕೆಂದು ಜೆಡಿಎಸ್ ಪಕ್ಷದ ವರಿಷ್ಠರಲ್ಲಿ ಗುಬ್ಬಿ ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರು ಬಾರಿ ಒತ್ತಡ ಹಾಕಿದ್ದರು. ತುಮಕೂರಿಗೆ ದೇವೇಗೌಡರು ಬಂದಾಗಲೂ ಕಾರ್ಯಕರ್ತರು ದೇವೇಗೌಡರ ಕಾರಿಗೆ ಅಡ್ಡ ಹಾಕಿ ಪ್ರತಿಭಟಿಸಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದರು.
ಈ ಎಲ್ಲದರ ಪರಿಣಾಮವಾಗಿ ಜಿಲ್ಲೆಯ ಪ್ರಬಲ ಒಕ್ಕಲಿಗ ನಾಯಕರಾಗಿರುವ ಎಸ್.ಆರ್. ಶ್ರೀನಿವಾಸ್ ಗೆ ಸಚಿವ ಸಂಪುಟದಲ್ಲಿ ಮಂತ್ರಿಯಾಗುವ ಯೋಗ ಬಂದು ಸಚಿವರಾಗಿ ಪ್ರಮಾಣ ವಚನವನ್ನು ಸ್ವೀಕರಿ ಸಿದ್ದು ಯಾವ ಖಾತೆ ಅವರಿಗೆ ದೊರಕುತ್ತದೆ ಎನ್ನುವುದು ಕುತೂಹಲವಾಗಿದೆ.
ಚಿ.ನಿ. ಪುರುಷೋತ್ತಮ್
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.