ಅಂಗನವಾಡಿಯಿಂದಲೇ ಆಂಗ್ಲ ಮಾಧ್ಯಮ ಆರಂಭಿಸಿ
ಶಿರಾ ತಾಲೂಕು ಕಚೇರಿ ಮುಂದೆ ಕಾರ್ಯಕರ್ತೆಯರ ಪ್ರತಿಭಟನೆ
Team Udayavani, Jul 8, 2019, 1:29 PM IST
ಶಿರಾದ ತಾಲ್ಲೂಕು ಕಛೇರಿ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿಗಳಲ್ಲೆ ಎಲ್ಕೆಜಿ, ಯುಕೆಜಿ ಆರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಸಿದರು.
ಶಿರಾ: ರಾಜ್ಯ ಸರ್ಕಾರ ಪ್ರಾಥಮಿಕ ಶಿಕ್ಷಣದಲ್ಲಿ ಇಂಗ್ಲಿಷ್ ಮೀಡಿಯಂ ಯೋಜನೆ ಅಂಗನವಾಡಿಗಳ ಮೂಲಕವೇ ಕಾರ್ಯಗತಗೊಳಿಸಲಿ ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಕಾರ್ಯಕರ್ತೆ ಕಲಾವತಮ್ಮ ರಾಷ್ಟ್ರೀಯ ಶಿಶು ಅಭಿವೃದ್ಧಿ ಯೋಜನೆ ಕಳೆದ 40 ವರ್ಷದಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ. ಯೋಜನೆ ಅಡಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಕಲಿಸಲು ತಕ್ಕ ಮಟ್ಟಿನ ಜ್ಞಾನ ಹೊಂದಿದ್ದಾರೆ. ತರಬೇತಿ ನೀಡಿ, ಈಗ ನೀಡುತ್ತಿರುವ ವೇತನ ಮೊದಲಾದ ಸೌಲಭ್ಯ ಸ್ವಲ್ಪ ಹೆಚ್ಚಿಸುವ ಮೂಲಕ ಯೋಜನೆ ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾಧ್ಯವಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಸಂಘದ ಸದಸ್ಯೆ ಸರಳಾದೇವಿ ಮಾತ ನಾಡಿ, ಎಲ್ಕೆಜಿಗೆ ಸೇರಿಸಲು ಮಗುವಿಗೆ 3 ವರ್ಷ 10 ತಿಂಗಳಾಗಬೇಕಿದ್ದು, ನಾವು 3 ವರ್ಷಕ್ಕೆ ಮಕ್ಕಳನ್ನು ಅಂಗನವಾಡಿಗೆ ಸೇರಿಸಿಕೊಳ್ಳುತ್ತೇವೆ. ಅಂಗನವಾಡಿಗಳ ಬಗ್ಗೆ ಕೀಳರಿಮೆ ಹೋಗಲಾಡಿಸಲು, ಅವುಗಳಲ್ಲೇ ಎಲ್ಕೆಜಿ ಮತ್ತು ಯುಕೆಜಿ ಅಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು. ವಿವಿಧ ಬೇಡಿಕೆ ಈಡೇರಿಸುವಂತೆ ಚುನಾವಣಾ ಶಿರಸ್ತೆದಾರ್ ಲಕ್ಷಿ ್ಮೕಕಾಂತ್‌ಗೆ ಮನವಿ ಸಲ್ಲಿಸಲಾಯಿತು. ಎಐಟಿಯುಸಿಯ ವಿವಿಧ ಪದಾಧಿಕಾರಿಗಳು, ನೂರಾರು ಕಾರ್ಯಕರ್ತೆಯರು, ಸಹಾಯಕಿ ಯರು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.