ಕೊರಟಗೆರೆಯಾದ್ಯಂತ ಬೀದಿ ನಾಯಿಗಳ ಹಾವಳಿ; ಸಾರ್ವಜನಿಕರಲ್ಲಿ ಆತಂಕ

Team Udayavani, Oct 11, 2022, 10:24 PM IST

1-ddsdad-a

ಕೊರಟಗೆರೆ :ತಾಲೂಕಿನಾದ್ಯಂತ  ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ.

ಬೀದಿ ನಾಯಿಗಳ ಕಾಟದಿಂದ ಮಕ್ಕಳನ್ನು ಹೊರಗೆ ಬೀಡುವುದು ಕಷ್ಟವಾಗಿದೆ ಎಂದು ಪಾಲಕರು ತಮ್ಮ ಅಳಲನ್ನು ಹಂಚಿಕೊಂಡಿದ್ದಾರೆ. ಪಕ್ಕದ ರಾಜ್ಯ ಕೇರಳದಲ್ಲಿ ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳು ಎರಗಿ ದೇಹ ಪೂರ್ತಿಯಾಗಿ ತಿಂದಿರುವುದು ಹಲವು ಮಾಧ್ಯಮಗಳಲ್ಲಿ ಪ್ರಕಟಣ ವಾಗಿರುವುದು ನಾವು ಕೇಳಿದ್ದೇವೆ. ನಮ್ಮ ತಾಲೂಕಿನ   ಅಧಿಕಾರಿಗಳು ಬೀದಿ ನಾಯಿಗಳ ಉಪಟಳವನ್ನು ನಿಯಂತ್ರಿಸಲು ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ.

ಹಿಡಿಶಾಪ
ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಪಟ್ಟಣ ಪಂಚಾಯಿತಿಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಸಾರ್ವಜನಿಕರು ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದಾರೆ. ತಾಲೂಕಿನ ಚನ್ನರಾಯನ ದುರ್ಗ ಕೊಳಾಲ ಕಸಬಾ . ಹೊಳವನಹಳ್ಳಿ ಹೋಬಳಿಯ. ಬಸ್ ನಿಲ್ದಾಣಗಳ  ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

ತಾಲೂಕಿನಾದ್ಯಂತ ಗ್ರಾಮ ಮತ್ತು ಪಟ್ಟಣ ಹೋಬಳಿಯದ್ಯಾಂತ ಮಾಂಸದಂಗಡಿಗಳು ಇವೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳು ಕಾಣಿಸುತ್ತವೆ. ಅಂಗಡಿದಾರರು ಸಾರ್ವಜನಿಕ ಸ್ಥಳ, ಕಸದ ತೊಟ್ಟಿಯಲ್ಲಿ ಮಾಂಸದ ತ್ಯಾಜ್ಯ ಹಾಕುವುದರಿಂದ ನಾಯಿಗಳು ಚೆಲ್ಲಾಟ ಹೆಚ್ಚಾಗಿದೆ. ನಾನಾ ತಾಲೂಕುಗಳಲ್ಲಿ   ನಾಯಿಗಳ ಹಾವಳಿ ತಡೆಯಲು ಕೆಲ ವರ್ಷಗಳ ಹಿಂದೆ  ವಿಷ ಹಾಕಿ ನಾಯಿಗಳನ್ನು ಕೊಂದಿತ್ತು. ಇದರಿಂದ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಆದ್ದರಿಂದ ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ   ಅಧಿಕಾರಿಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಹೋಗುವುದನ್ನು ಬಿಟ್ಟಿತ್ತು. ಅಲ್ಲಿಂದ ಇಲ್ಲಿಯವರೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

ಸಂತಾನ ತಡೆ ಚಿಕಿತ್ಸೆ ಮಾಡುವುದರಿಂದ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಮಾಡಬಹುದು. ಆದರೆ, ಈ ಕಾರ್ಯಕ್ಕೆ ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ  ಮುಂದಾಗುತ್ತಿಲ್ಲ. ಆದ್ದರಿಂದ ಪಟ್ಟಣ ಮತ್ತು ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

ಬೀದಿ ನಾಯಿಗಳ ಕಾಟದಿಂದ ಮಕ್ಕಳನ್ನು ಹೊರಗೆ ಬೀಡುವುದು ಕಷ್ಟವಾಗಿದೆ. ಶಾಲೆಗೆ ಹೋಗುವಾಗಲೂ ಮಕ್ಕಳು ಭಯದ ವಾತಾವರಣದಲ್ಲಿ ಹೋಗುತ್ತಾರೆ ಎಲ್ಲಿ ನಾಯಿಗಳು ನಮ್ಮ ಮೇಲೆ ಎರಗುತ್ತವೆಯೋ ಎಂಬ ಭಯ ಹುಟ್ಟುತ್ತದೆ.

ಬೀದಿ ನಾಯಿಗಳ ಉಪಟಳಕ್ಕೆ ಜನ ಕಂಗಾಲಾಗಿದ್ದಾರೆ. ಗ್ರಾಮ ಪಂಚಾಯಿತಿ ಮತ್ತು ಪಟ್ಟಣ   ಪಂಚಾಯತಿ  ಇವುಗಳ ನಿಯಂತ್ರಣ ಮಾಡುವುದಕ್ಕೆ ನಿರ್ಲಕ್ಷ್ಯವಹಿಸಿದ್ದಾರೆ.

ಶ್ರೀನಿವಾಸ್.ಎಚ್.ಎನ್. ಚಿಗುರು ಜನಸೇವಾಟ್ರಸ್ಟ್ ಅಧ್ಯಕ್ಷ ಹೊಳವನಹಳ

ಬೀದಿ ನಾಯಿಗಳ ಬಗ್ಗೆ ಸಾಕಷ್ಟು ಕೇಳಿದ್ದೇನೆ ವಾಹನಗಳ ಹಿಂದೆ ಕೊಡುವುದು ಶಾಲೆಗಳಿಗೆ ಹೋಗುವ ಚಿಕ್ಕ ಚಿಕ್ಕ ಮಕ್ಕಳ ಮೇಲೆ ಎರಗುವುದು ನಾನು ಕೇಳಿದ್ದೇನೆ. ಪಕ್ಕದ ರಾಜ್ಯ ಕೇರಳದಲ್ಲಿ ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳ ಮಕ್ಕಳ ಮೇಲೆ ಎರಗಿ ದೇಹ ಪೂರ್ತಿಯಾಗಿ ತಿಂದಿರುವುದು ಹಲವು ಮಾಧ್ಯಮಗಳಲ್ಲಿ ಪ್ರಕಟಣ ವಾಗಿರುವುದು ನಾವು ಕೇಳಿದ್ದೇವೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಮಾಹಿತಿ ರವಾನಿಸುತ್ತೇನೆ.

 ರಾಮಕೃಷ್ಣಯ್ಯ ಎಸ್ ಕೆ- ಅರಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು.

ಸಿದ್ದರಾಜು. ಕೆ.ಕೊರಟಗೆರೆ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

1-pavagada

Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.