ಮಾದಕ ವ್ಯಸನ ಮುಕ್ತ ಭಾರತಕ್ಕೆ ಶ್ರಮಿಸಿ


Team Udayavani, Jul 23, 2018, 12:40 PM IST

Jilla–Kajal.jpg

ತಿಪಟೂರು: ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಹದಗೆಡುವುದಲ್ಲದೆ ತಮ್ಮ ಜೀವಿತಾವಧಿಯ ಆಯಸ್ಸನ್ನು ಕಸಿದುಕೊಳ್ಳುತ್ತದೆ. ಆದ್ದರಿಂದ ದುರಾಭ್ಯಾಸಗಳಿಂದ ದೂರ ಉಳಿದು ಉತ್ತಮ ಜೀವನವನ್ನು ಕಂಡುಕೊಳ್ಳಬೇಕೆಂದು ಬೆಂಗಳೂರಿನ ಪ್ರಾದೇಶಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರದ ರಾಜ್ಯ ಸಂಯೋಜಕರಾದ ಶೈಲಜಾ ತಿಳಿಸಿದರು.

ನಗರದ ಎಸ್‌ವಿಪಿ. ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಎನ್‌ಎಸ್‌ಎಂ ಬಾಲಿಕಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆರ್‌ಆರ್‌ಟಿಸಿ ಹಾಗೂ ಹರಿಹರ  ಶಕ್ತಿ ಅಸೋಸಿಯೇಟ್‌  ಸಂಯುಕ್ತಾಶ್ರಯದಲ್ಲಿ ಮಕ್ಕಳಿಗೆ ಮಾದಕ ವ್ಯಸನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಾದಕ ವ್ಯಸನದಿಂದ ದೂರವಿರಿ: ಮಕ್ಕಳು ಮಾದಕ ವ್ಯಸನದಿಂದ ದೂರ ಇರಬೇಕು. ತಮ್ಮ ಸುತ್ತಮುತ್ತ ಅಥವಾ ಕುಟುಂಬದಲ್ಲಿ ಯಾರಾದರೂ ಮಾದಕ ವ್ಯಸನಿಗಳು ಕಂಡು ಬಂದರೆ ಅದರ ದುಷ್ಪರಿಣಾಮವನ್ನು ಅವರಿಗೆ ತಿಳಿಸಿ ಮಾದಕ ವ್ಯಸನದಿಂದ ಮುಕ್ತ ಮಾಡಲು ಪ್ರಯತ್ನಿಸಬೇಕು ಎಂದರು.

 ಇತ್ತೀಚಿನ ದಿನಗಳಲ್ಲಿ ಶೋಕಿಗಾಗಿ ಹಾಗೂ ಕಷ್ಟಗಳನ್ನು ಮರೆಯಬಹುದು ಎಂಬ ನೆಪದಿಂದ, ಇನ್ನೂ ಕೆಲವರು ಸ್ನೇಹಿತರ ಒತ್ತಾಯಕ್ಕೆ ಹೀಗೆ ನಾನಾ ಕಾರಣಗಳಿಂದ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಇಂತಹವರು ಕಂಡುಬಂದರೆ ಅವರ ಮನ ಪರಿವರ್ತನೆ ಮಾಡಿ ಮಾದಕ ವ್ಯಸನದಿಂದ ದೂರ ಮಾಡಬೇಕು. ಇದರಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯೊಂದಿಗೆ ಸಮಾಜಮುಖೀ ಕಾರ್ಯದಲ್ಲಿ ತೊಡಗಿದಂತಾಗುತ್ತದೆ ಎಂದರು.

ಸ್ವತ್ಛ ಭಾರತಕ್ಕೆ ಸಹಕರಿಸಿ: ಮಾದಕ ವ್ಯಸನ ಮುಕ್ತ ಭಾರತ ಮಾಡುವುದು ಎಲ್ಲಾ ಮಕ್ಕಳ ಕನಸಾಗಿದೆ. ಅಲ್ಲದೆ ಮಹಾತ್ಮ ಗಾಂಧೀಜಿಯವರ ಆಕಾಂಕ್ಷೆ ಸ್ವತ್ಛ ಭಾರತ ನಿರ್ಮಾಣ ಇದರ ಸಾಕಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇದರಲ್ಲಿ ಮಕ್ಕಳ ಪಾತ್ರ ಬಹಳ ಮುಖ್ಯ ಎಂದರು.

ಈ ಸಂದರ್ಭದಲ್ಲಿ ಮಾದಕ ವ್ಯಸನ ಕುರಿತು ಹಲವು ಸ್ಪರ್ಧೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜನ ಶಿಕ್ಷಣ ಸಂಸ್ಥೆಯ ಸಂಯೋಜಕ ಬಿ.ಜಗದೀಶ್‌, ಕಾರ್ಯ ಕ್ಷೇತ್ರಾಧಿಕಾರಿಗಳಾದ ರವಿಕಾಂಬಳೆ, ಪುಂಡಲೀಕ ಗೋಗಿಹಾಳ,

ಶಿವಕುಮಾರ್‌, ಎಸ್‌ವಿಪಿ ಪ್ರೌಢಶಾಲೆ ಹಿರಿಯ ಶಿಕ್ಷಕ ಬಿ.ಎಸ್‌. ಸಿದ್ದರಾಮಯ್ಯ, ಎನ್‌ಎಸ್‌ಎಂ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎಚ್‌.ಕೆ.ಪದ್ಮಾಕ್ಷಮ್ಮ, ಸಹ ಶಿಕ್ಷಕರಾದ ಜುಂಜಯ್ಯ, ಎಸ್‌.ಜಿ. ಬಸವರಾಜು, ಶಿವಕುಮಾರ್‌, ಸಿದ್ದೇಶ್‌ ಮತ್ತಿತರರಿದ್ದರು. 

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.