ಪ್ರತಿಯೊಬ್ಬರಿಗೂ ಸ್ವಾಮಿ ವಿವೇಕಾನಂದರು ಆದರ್ಶ
Team Udayavani, Jan 13, 2022, 11:25 PM IST
ತುಮಕೂರು: ಯುಗ ಪ್ರವರ್ತಕ ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವ ಹಾಗೂ ರಾಷ್ಟ್ರೀಯಯುವ ದಿನಾಚರಣೆ ಮಹೋ ತ್ಸವ ವನ್ನು ಪಾವಗಡದ ಶ್ರೀರಾಮಕೃಷ್ಣ ಸೇವಾ ಶ್ರಮದ ಅಧ್ಯಕ್ಷರಾದ ಸ್ವಾಮಿ ಜಪಾನಂದಜೀ ಅವರು ಅನಾಥ ಮಕ್ಕಳಿಗೆ ಹೊಸ ಬಟ್ಟೆ, ಹೊದಿಕೆ ಮತ್ತು ದಿನಸಿ ಸಾಮಗ್ರಿ ವಿತರಿಸುವ ಮೂಲಕ ವಿಶೇಷವಾಗಿ ಆಚರಿಸಿದರು.
ನಗರದ ಕೊಂಡನಾಯಕನಹಳ್ಳಿ, ಮೈದಾಳ ದಲ್ಲಿನ ಶ್ರೀಶಿವ ಶೈಕ್ಷಣಿಕ ಸೇವಾಶ್ರಮದ ಮಕ್ಕಳಿಗೆ ಹಾಗೂ ಉಪಾಧ್ಯಾಯರಿಗೆ ವಸ್ತ್ರಗಳು, ಸೀರೆ, ಪಂಚೆ ಹಾಗೂ ದಿನಸಿ ಮತ್ತು ರಾಜ್ಯದ ವಿವಿಧ ಭಾಗಗಳ ನಿರ್ಗತಿಕ, ಅನಾಥ ಮಕ್ಕಳಿಗೆ ಕಂಬಳಿ, ಪುಸ್ತಕಗಳು ಇತ್ಯಾದಿಗಳನ್ನು ವಿತರಿಸಿದರು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವಹಿಸಿದ್ದ ಶ್ರೀರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮಿ ಜಪಾನಂದಜೀ ಮಾತನಾಡಿ, ಪ್ರತಿ ಯೊಬ್ಬರೂ ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಬೇಕು.
ಸ್ವಾಮಿ ವಿವೇಕಾನಂದರ ಕನಸಿನ ಭಾರತ ವಿಚಾರ ಹಾಗೂ ಭವಿಷ್ಯ ಭಾರತದ ಬಗ್ಗೆ ತಿಳಿಸಿದ ಸ್ವಾಮೀಜಿ, ಮಕ್ಕಳಲ್ಲಿ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರಲ್ಲಿ ಸ್ವಾಮಿ ವಿವೇಕಾನಂದರ ವಿಚಾರಧಾರೆ ಹಾಗೂ ಚೈತನ್ಯ ಶಕ್ತಿಯನ್ನು ತಮ್ಮ ವಿಚಾರಗಳ ಮೂಲಕ ತುಂಬಿದರು.
ವಿವೇಕಾನಂದರ ವಿಚಾರ ಅಳವಡಿಸಿಕೊಳ್ಳಿ: ಕವಿ ಕವಿತಾ ಕೃಷ್ಣ ಮಾತನಾಡಿ, ಈ ಭಾಗಕ್ಕೆ ಸ್ವಾಮೀಜಿಯವರ ಆಗಮನ ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವದಂದೇ ಈ ಅನಾಥಾಲಯಕ್ಕೆ ಒಂದು ರೀತಿಯ ವಿವೇಕಾನಂದರ ಪ್ರತಿರೂಪವೇ ಬಂದಂತಾ ಯಿತು ಎಂದು ಬಣ್ಣಿಸಿದರು. ಸ್ವಾಮಿ ವಿವೇಕಾನಂದರ ವಿಚಾರಧಾರೆ ಯನ್ನು ತಮ್ಮ ಜೀವನದ ಪ್ರತಿಕ್ಷಣದಲ್ಲೂ ಅಳವಡಿಸಿಕೊಂಡು ಸಹಸ್ರ ಜನರಿಗೆ ಆಸರೆಯಾಗಿರುವ ಸ್ವಾಮಿ ಜಪಾನಂದಜೀ ಅವರನ್ನು ಸ್ವಾಮಿ ವಿವೇಕಾನಂದರು ಈ ಹಿಂದುಳಿದ ಗ್ರಾಮಾಂತರ ಅನಾಥಾಲಯಕ್ಕೆ ಕರೆತಂದಿದ್ದಾರೆ ಎಂಬುದೇ ನಮ್ಮ ಭಾವನೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಗಿಲ್ ಸುಭೇ ದಾರ್ ಆಗಿರುವ ಎಂ.ಸಿ ಸತೀಶ್ ಮತ್ತು ನಿವೃತ್ತ ಸೈನಿಕರು ಹಾಗೂ ಹಾಲಿ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ವಿ.ಡಿ.ನಾಗರಾಜಯ್ಯ, ಶಿವ ಶೈಕ್ಷಣಿಕ ಸೇವಾಶ್ರಮದ ಮುಖ್ಯಸ್ಥರಾದ ಪಾಲಾಕ್ಷಯ್ಯ ಮಾತನಾಡಿದರು. ತುಮಕೂರು ಮಹಾನಗರದ ವಿವೇಕ ಬಳಗ ಸ್ವಯಂ ಸೇವಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.