ಮೇವು, ನೀರು ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಿ
ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಾ.ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಸೂಚನೆ • ಜನರ ಸಮಸ್ಯೆಗೆ ಸ್ಪಂದಿಸಿ
Team Udayavani, May 1, 2019, 3:19 PM IST
ತುಮಕೂರು: ಜಿಲ್ಲೆಯ 10 ತಾಲೂಕುಗಳು ಬರಪೀಡಿತವಾಗಿರುವುದರಿಂದ ಜನ-ಜಾನುವಾರು ಗಳಿಗೆ ಕುಡಿಯುವ ನೀರು ಮೇವಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮಕೈಗೊಳ್ಳಬೇಕೆಂದು ಯೋಜನೆ ಮತ್ತು ಸಾಂಖ್ಯೀಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತುಮಕೂರು ಜಿಲ್ಲೆಯಲ್ಲಿ ಬರ ಪರಿಹಾರ ಹಾಗೂ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಕುರಿತ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಬರವಿರುವು ದರಿಂದ ಕುಡಿಯುವ ನೀರಿನ ಸಮಸ್ಯೆ ಇರುತ್ತದೆ. ಎಲ್ಲಿ ಸಮಸ್ಯೆ ಇದೆಯೋ ಅಲ್ಲಿ ಕುಡಿಯುವ ನೀರಿನ ಪೂರೈಕೆಯನ್ನು ಮಾಡಬೇಕು. ಅಲ್ಲದೇ ಜನರ ಬಳಿಗೆ ಧಾವಿಸಿ ಅವರ ಸಮಸ್ಯೆಗಳನ್ನು ಆಲಿಸಿ ಅವರ ಸಮಸ್ಯೆಗೆ ಸ್ಪಂದಿಸಬೇಕು. ಜಾನುವಾರುಗಳಿಗೂ ನೀರು ಮತ್ತು ಮೇವು ಕೊರತೆಯಾಗದಂತೆ ನೋಡಿ ಕೊಳ್ಳಿ ಎಂದು ತಿಳಿಸಿದರು.
12 ಮಿ.ಮೀ. ಕೊರತೆ: ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮಾತನಾಡಿ, ಡಿ.2018ರ ಅಂತ್ಯಕ್ಕೆ ವಾಡಿಕೆ ಮಳೆ 697 ಮಿ.ಮೀ. ಆಗಬೇಕಾಗಿತ್ತು. ಆದರೆ, ವಾಸ್ತ ವಿಕವಾಗಿ 617 ಮಿ.ಮೀ. ಮಳೆಯಾಗಿ 12 ಮಿ.ಮೀ. ಕೊರತೆಯಾಗಿದೆ. ಜಿಲ್ಲೆಯಲ್ಲಿ 10 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಧುಗಿರಿ ತಾಲೂಕಿನ ಕಸಬಾ, ಐಡಿಹಳ್ಳಿ, ಬಡವನಹಳ್ಳಿ, ಕೊಡಿಗೇನಹಳ್ಳಿ, ಮಿಡಿಗೇಶಿ, ಪುರವರ, ಕೊರಟಗೆರೆ ತಾಲೂಕಿನ ಕಸಬಾ, ಕ್ಯಾಮೇನಹಳ್ಳಿ, ತೋವಿನಕೆರೆ, ಪಾವಗಡ ತಾಲೂಕಿನ ಸಿಕೆ ಪುರ, ನಾಗಲಮಡಿಕೆ, ವೈ.ಎನ್.ಹೊಸಕೋಟೆ, ಶಿರಾ ತಾಲೂಕಿನ ಚಿಕ್ಕನಹಳ್ಳಿ, ಪಟ್ಟನಾಯಕನಹಳ್ಳಿ, ತಿಪಟೂರು ತಾಲೂಕಿನ ಬಾಗವಾಳೂ ಹಾಗೂ ಚಿಕ್ಕನಾಯಕನಹಳ್ಳಿಯ ಕಸಬಾ ದಲ್ಲಿ 16 ಮೇವು ಬ್ಯಾಂಕ್‌ಗಳು ಕಾರ್ಯ ನಿರ್ವ ಹಿಸುತ್ತಿವೆ. ಮೇವು ವಿತರಿಸಲು ಮೇವು ವಿತರಣೆ ಕಾರ್ಡು ರೈತರಿಗೆ ವಿತರಿಸಿದ್ದು, ಮೇವು ವಿತರಣೆಗೆ ಜಿಲ್ಲೆಯಲ್ಲಿ ಸಹಕಾರಿಯಾಗಿವೆ. ಮೇವನ್ನು ಸಣ್ಣಸಣ್ಣಗೆ ಕತ್ತರಿಸಿ ನೀಡುವಂತೆ ಜನರಿಂದ ಬೇಡಿಕೆ ಇದೆ. ಈ ಬಗ್ಗೆ ಕ್ರಮವಹಿಸುವುದಾಗಿ ತಿಳಿಸಿದರು.
ಹಸಿರು ಮೇವು ಉತ್ಪಾದನೆ: ಜಿಲ್ಲೆಯಲ್ಲಿ 70.8185 ಜಾನುವಾರುಗಳು ಇದ್ದು ರೈತರ ದಾಸ್ತಾನಿನಲ್ಲಿ 28,1482 ಟನ್ ಒಣ ಮೇವು ಲಭ್ಯವಿದ್ದು, 11 ವಾರಗಳಿಗೆ ಸಾಕಾಗುತ್ತದೆ. ಮೇವು ಕಿರುಪೊಟ್ಟಣ ಗಳನ್ನು ರೈತರಿಗೆ ವಿತರಿಸಿದ್ದು, 5,99,117 ಟನ್ ಹಸಿರು ಮೇವು ಉತ್ಪಾದನೆಯಾಗುವುದೆಂದು ಅಂದಾಜಿಸ ಲಾಗಿದೆ. ಜಿಲ್ಲೆಯಲ್ಲಿ 128 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಅಲ್ಲದೇ ಕೊಳವೆ ಬಾವಿ ಬತ್ತಿ ಹೋಗಿರುವ ಕಡೆ ಖಾಸಗಿ ಬೋರ್‌ವೆಲ್ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ನೀರು ಒದಗಿಸಲು ಕೊಳವೆ ಬಾವಿ ಮಾಲೀಕರನ್ನು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇಂಜಿನಿಯರ್‌ಗಳು ಮನವೊಲಿ ಸಿದ್ದಾರೆ ಎಂದರು. ಜಿಲ್ಲೆಯಲ್ಲಿ ಇನ್‌ಪುಟ್ ಸಬ್ಸಿಡಿಗಾಗಿ 1.70ಲಕ್ಷ ರೈತರ ಭಾಗಶಃ ಡೇಟಾಎಂಟ್ರಿ ಕಾರ್ಯವನ್ನು ಒಂದು ವಾರದೊಳಗೆ ಪೂರ್ಣ ಗೊಳಿಸುವುದಾಗಿ ತಿಳಿಸಿದರು. ಸಭೆಯಲ್ಲಿ ಮಾತ ನಾಡಿದ ಜಿಲ್ಲಾ ಪಂಚಾಯತ್ ಸಿಇಒ ಶುಭಾ ಕಲ್ಯಾಣ್ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಆಗಿರುವ ಪ್ರಗತಿಯ ಬಗ್ಗೆ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.