ಟ್ಯಾಂಕರ್ ನೀರು ಸರಬರಾಜು ದಂಧೆ
ಅಧಿಕಾರಿಗಳು ಭಾಗಿ • ಕ್ರಮ ಕೈಗೊಳ್ಳುವಂತೆ ತಾಪಂ ಇಒಗೆ ಶಾಸಕ ಡಾ.ರಂಗನಾಥ್ ಸೂಚನೆ
Team Udayavani, Jul 27, 2019, 12:13 PM IST
ಕುಣಿಗಲ್ ತಾಪಂ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ, ಕುಡಿಯುವ ನೀರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಮೃತೂರು ಗ್ರಾಮ ಪಂಚಾಯಿತಿ ಪಿಡಿಒ ಲತಾ ಅವರನ್ನು ಶಾಸಕ ಡಾ.ಎಚ್.ಡಿ. ರಂಗನಾಥ್ ತರಾಟೆ ತೆಗೆದುಕೊಂಡರು.
ಕುಣಿಗಲ್: ಟ್ಯಾಂಕರ್ ನೀರು ಸರಬರಾಜು ದಂಧೆ ಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಇಒಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಎಚ್ಚರಿಸಿದರು.
ತಾಪಂ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ, ಕುಡಿಯುವ ನೀರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಲುಷಿತ ಟ್ಯಾಂಕರ್ ನೀರು ಪೂರೈಸಲಾಗುತ್ತಿದ್ದು, ಸದಂಧೆಯಲ್ಲಿ ಪಾಲ್ಗೊಂಡ ಅಧಿಕಾರಿಗಳನ್ನು ಸುಮ್ಮನೆ ಬಿಡುವುದಿಲ್ಲ, ಅವ್ಯವಹಾರ, ಅಕ್ರಮ ಕಂಡು ಬಂದಲ್ಲಿ ತನಿಖೆಗೆ ಲೋಕಾಯುಕ್ತಕ್ಕೆ ವಹಿ ಸುತ್ತೇನೆ. ತಾಪಂ ಕಾರ್ಯನಿರ್ವಹಣಾಧಿಕಾರಿ ಕೆಲಸ ಮಾಡಿದರೆ ನಾನು ಇಷ್ಟೊಂದು ಶ್ರಮಪಡುವ ಅಗತ್ಯ ವಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಣ್ಣ ನೀರಿನ ಸಮಸ್ಯೆ ಬಗೆಹರಿಸದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಶಾಸಕ, ಗ್ರಾಮೀಣ ಭಾಗಕ್ಕೆ ಹೋದರೆ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿ ಹಲವು ಸಮಸ್ಯೆಗಳ ಬಗ್ಗೆ ಜನರು ದೂರು ಹೇಳುತ್ತಾರೆ. ಸಣ್ಣ ಸಮಸ್ಯೆ ಬಗೆಹರಿಸಲು ನಿಮ್ಮಿಂದ ಸಾಧ್ಯವಾಗ ದಿದ್ದರೆ ಸರ್ಕಾರಿ ಕೆಲಸದಲ್ಲಿ ಯಾಕಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಿಡಿಒಗೆ ತರಾಟೆ: ಅಮೃತೂರಿನ ಹಲವು ಬಡಾವಣೆ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಈ ಸಂಬಂಧ ಕ್ರಮಕೈಗೊಳ್ಳುವಂತೆ ಜನಸ್ಪಂದನಾ ಕಾರ್ಯಕ್ರಮದಲ್ಲಿ ತಿಳಿಸಿ ತಿಂಗಳು ಕಳೆದರೂ ಕ್ರಮ ಕೈಗೊಂಡಿಲ್ಲ. ಬೇಜವಾಬ್ದಾರಿಯಿಂದ ಕೆಲಸ ಮಾಡಿದರೆ ಕ್ರಮ ಕೈಗೊಳ್ಳಲಾಗುವುದೆಂದು ಪಿಡಿಒ ಲತಾಗೆ ಎಚ್ಚರಿಸಿದರು.
3.45 ಕೋಟಿ ಅವಶ್ಯಕ: ತಾಲೂಕಿನಲ್ಲಿ 753 ಗ್ರಾಮ ಗಳು ಇವೆ. ಈ ಪೈಕಿ 105 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಸಮಸ್ಯೆ ಪರಿ ಹರಿಸಲು 3.43 ಕೋಟಿ ರೂ. ಅಗತ್ಯ. ಈ ಸಂಬಂಧ ಅಂದಾಜು ಪಟ್ಟಿ ತಯಾರಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಿರಣ್‌ಕುಮಾರ್ ತಿಳಿಸಿದರು. ದಾಖಲೆ ಗಳೊಂದಿಗೆ ಸೋಮವಾರ ವಿಧಾನಸೌಧಕ್ಕೆ ಬರುವಂತೆ ಶಾಸಕರು ಸೂಚಿಸಿದರು.
ಬೆಸ್ಕಾಂ ಸಹಕಾರವಿಲ್ಲ: ಗ್ರಾಮಗಳಲ್ಲಿ ಸಾರ್ವಜನಿಕರಿಗೆ ನೀರು ಪೂರೈಸಲು ವಿದ್ಯುತ್ ಅವಶ್ಯಕ. ಆದರೆ ಬೆಸ್ಕಾಂ ಅಧಿಕಾರಿಗಳು ಸಹಕರಿಸುತ್ತಿಲ್ಲ ಎಂದು ದೂರಿದ ಬಹುತೇಕ ಪಿಡಿಒಗಳು, ಬೀದಿದೀಪ, ಕಚೇರಿಯಲ್ಲಿ ಬಳಸುವ ವಿದ್ಯುತ್ ಸರಬರಾಜಿಗೆ ತಿಂಗಳಿಗೆ 6ಂದ 7 ಸಾವಿರ ಬಿಲ್ ಬರಬೇಕು. ಆದರೆ 70 ಸಾವಿರದಿಂದ ಒಂದು ಲಕ್ಷದವರೆಗೆ ಬಿಲ್ ಬರುತ್ತಿದೆ. ಅಲ್ಲದೆ ಬಿಲ್ನ ಬಡ್ಡಿ ಹಣ ಸರ್ಕಾರ ಪಾವತಿಸುತ್ತಿದೆ.
ಹೀಗಿದ್ದರೂ ಬೆಸ್ಕಾಂ ಅಧಿಕಾರಿಗಳು ಮನಬಂದಂತೆ ಬಿಲ್ ನೀಡುತ್ತಿ ದ್ದಾರೆ, ಇದರಿಂದ ಹಣ ಕಟ್ಟಲು ಸಾಧ್ಯ ವಾಗುತ್ತಿಲ್ಲ ಎಂದು ದೂರಿದರು. ಕೂಡಲೇ ಸಮಸ್ಯೆ ಬಗೆಹರಿಸ ಬೇಕೆಂದು ಬೆಸ್ಕಾಂ ಎಇ ವೀರಭದ್ರಯ್ಯಗೆ ಶಾಸಕರು ಸೂಚಿಸಿದರು.
90 ಸಾವಿರ ಜಾನುವಾರುಗಳು: ತಾಲೂಕಿನಲ್ಲಿ 90,600 ಜಾನುವಾರುಗಳಿವೆ. ಮೇವಿನ ಸಮಸ್ಯೆ ಸದ್ಯಕ್ಕಿಲ್ಲ. ಒಂದು ತಿಂಗಳಿಗೆ ಆಗುವಷ್ಟು ಮೇವು ಇದೆ ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ಶಶಿಕಾಂತ್ ಬೂದಾಳ್ ಹೇಳಿದರು.
ಇದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ ಶಾಸಕ ಡಾ.ರಂಗನಾಥ್, ತಾಲೂಕಿನಲ್ಲಿ 2.5 ಲಕ್ಷ ಜನರಿದ್ದಾರೆ. ಆದರೆ 90 ಸಾವಿರಕ್ಕೂ ಅಧಿಕ ಜಾನುವಾರುಗಳು ಇವೆ ಎಂದರೆ ಹೇಗೆ ನಂಬುವುದು ಎಂದು ಪ್ರಶ್ನಿಸಿದರು. ಪಟ್ಟಣದಲ್ಲಿ ಮೇವು ಬ್ಯಾಂಕ್ ತೆರೆ ಯುವಂತೆ ಸೂಚಿಸಿದರು.
ಪುರಸಭಾ ಮುಖಾಧಿಕಾರಿ ಆರ್.ರಮೇಶ್, ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.