ವಿವಿಧ ಬೇಡಿಕೆ ಈಡೇರಿಕೆಗೆ ಶಿಕ್ಷಕರ ಒತ್ತಾಯ


Team Udayavani, Jun 18, 2020, 7:09 AM IST

vividha-ottaya

ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ  ಉಪನಿರ್ದೇಶಕಿ ಎಂ.ಆರ್‌. ಕಾಮಾಕ್ಷಿ ಮೂಲಕ ಬುಧವಾರ ಮನವಿ ಸಲ್ಲಿಸಿದರು.

ನಂತರ ಸಂಘದ ಜಿಲ್ಲಾಧ್ಯಕ್ಷ ಷಣ್ಮುಖಪ್ಪ ಮಾತನಾಡಿ, ಆಂಗ್ಲಭಾಷಾ ಶಿಕ್ಷಕರು, ವಿಜ್ಞಾನ ಶಿಕ್ಷಕರು, ಎಲ್‌ಪಿಎಸ್‌ ಮತ್ತು ಎಚ್‌ಪಿಎಸ್‌ ಶಾಲೆ ಆಯ್ಕೆ  ಮಾಡಿಕೊಳ್ಳಲು ಆಂಗ್ಲಭಾಷಾ ಶಿಕ್ಷಕರಿಗೆ ಅವಕಾಶ ಮಾಡಿಕೊಡಬೇಕು. ಅಂತರ್‌ಘಟಕ ವರ್ಗಾವಣೆ ನಿಗದಿಪಡಿಸಿರುವ ಶೇ.2ರ ಮಿತಿಯನ್ನು ಶೇ.6ಕ್ಕೆ ಹೆಚ್ಚಿಸಬೇಕು, ಶೇ.25 ಖಾಲಿ ಹುದ್ದೆಗಳಿರುವ ತಾಲೂಕಿನಲ್ಲಿ ಶಿಕ್ಷಕರಿಗೆ ವರ್ಗಾವಣೆ  ಅವಕಾಶವಿಲ್ಲ ಎಂಬ ನಿಯಮ ರದ್ದುಪಡಿಸಬೇಕು ಎಂದರು.

ಖಾಲಿ ಹುದ್ದೆಗಳ ಸೃಷ್ಟಿಮಾಡಬೇಕು: ಪತಿ, ಪತ್ನಿ ಪ್ರಕರಣ ಪರಸ್ಪರ ವರ್ಗಾವಣೆಗಳನ್ನು ಸೇವಾವಧಿಯಲ್ಲಿ ಕನಿಷ್ಠ ಮೂರು ಬಾರಿಗೆ ಅವಕಾಶ ನೀಡಬೇಕು, ವಲಯ ವರ್ಗಾವಣೆ ಎ ವಲಯಕ್ಕೆ ಸೀಮಿತ ಮಾಡದೇ ಎಲ್ಲಾ ವಲಯದ  ಶಿಕ್ಷಕರಿಗೆ ವಲಯ ವರ್ಗಾವಣೆ ಎಂಬ ನಿಯಮ ಜಾರಿಗೊಳಿಸಬೇಕು, ಕಳೆದ ಬಾರಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾ ವಣೆಗೊಂಡಿರುವವರಿಗೆ ಈ ಬಾರಿ ಪ್ರಥಮ ಆದ್ಯತೆ ಮೇರೆಗೆ ಎಲ್ಲಾ ವಿಧದ ವರ್ಗಾವಣೆಗೆ ಅವಕಾಶ ನೀಡಬೇಕು.  ದಿ ಶಿಕ್ಷಕರಿಗೆ ಕೌನ್ಸೆಲಿಂಗ್‌ನಲ್ಲಿ ಸ್ಥಳ ಆಯ್ಕೆ ಮಾಡಿಕೊಳ್ಳಲು ಖಾಲಿ ಹುದ್ದೆಗಳ ಸೃಷ್ಟಿಮಾಡಬೇಕು ಎಂದು ಮನವಿ ಮಾಡಿದರು.

ಪ್ರಥಮ ಆದ್ಯತೆ ನೀಡಿ: 10 ವರ್ಷಗಳ ವರೆಗೂ ಒಂದೇ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ ಒಮ್ಮೆಯೂ ವರ್ಗಾವಣೆಯಾಗದ ಶಿಕ್ಷಕರಿಗೆ ಅವರ ಮೂಲ ಜಿಲ್ಲೆಗೆ ವರ್ಗಾವಣೆ ಹೊಂದಲು ಅವಕಾಶ ಕಲ್ಪಿಸಬೇಕು. 2018-19ನೇ ಸಾಲಿನ ಕಡ್ಡಾಯ  ವರ್ಗಾವಣೆಗೆ ಸಂಬಂಧಿಸಿ ದಂತೆ ಬಿಆರ್‌ಪಿ, ಸಿಆರ್‌ಪಿಗಳಿಗೆ ಈ ಬಾರಿ ಪ್ರಥಮ ಆದ್ಯತೆ ವರ್ಗಾವಣೆ ನೀಡಬೇಕು. ದಿವ್ಯಾಂಗ ಶಿಕ್ಷಕರಿಗೆ ಸೇವಾವಧಿಯಲ್ಲಿ ಒಂದು ಬಾರಿ ವರ್ಗಾವಣೆ ಎನ್ನುವ ನಿಯಮ ರದ್ದುಪಡಿಸಬೇಕು ಎಂದು ಹೇಳಿದರು.

ಶೇಕಡಾವಾರು ನಿಗದಿಗೊಳಿಸಿ: ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಜಿ.ತಿಮ್ಮೇಗೌಡ ಮಾತ ನಾಡಿ, ಕೋರಿಕೆ ವರ್ಗಾವಣೆ ಬಯಸಿದ ಶಿಕ್ಷಕರಿಗೆ ಆದ್ಯತಾ ಪಟ್ಟಿಯನ್ನು ತಯಾರಿಸು ವಾಗ ಬೇರೆ ಬೇರೆ ವಿಧದ ಕೋರಿಕೆ ವರ್ಗಾ ವಣೆಗೆ  ಪ್ರತ್ಯೇಕ ಶೇಕಡವಾರು ನಿಗದಿ ಗೊಳಿಸುವುದು, ಇದರಿಂದ ಸೇವಾ ಹಿರಿತನಕ್ಕೆ ಆದ್ಯತೆ ದೊರೆಯಲಿದೆ ಎಂದರು.

ವಿನಾಯಿತಿ ನೀಡಬೇಕು: ಕಡ್ಡಾಯ ವರ್ಗಾ ವಣೆ ಪತಿ-ಪತ್ನಿ ಪ್ರಕರಣಕ್ಕೆ ವಿನಾಯಿತಿ ನೀಡ ಬೇಕು. ಹೆಚ್ಚುವರಿ ಕಡ್ಡಾಯ ವರ್ಗಾವಣೆ ಯಲ್ಲಿ ಮಹಿಳೆಯರು ಮತ್ತು ಪುರುಷರಿಗೆ ವಯೋಮಿತಿಯನ್ನು 55 ವರ್ಷಗಳಿಗೆ ನಿಗದಿ ಮಾಡಬೇಕು  ಎಂಬ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎಂ.ಆರ್‌.ಕಾಮಾಕ್ಷಿ ಅವರೊಂದಿಗೆ  ಸಂಘದ ಪದಾಧಿಕಾರಿಗಳು ಚರ್ಚಿಸಿದರು. ಮನವಿ ಸ್ವೀಕರಿಸಿ ನಿಮ್ಮ ಮನವಿಯನ್ನು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ತಲುಪಿಸಲಾಗು ವುದು ಎಂದು ತಿಳಿಸಿದರು. ಸಂಘದ ಖಜಾಂಚಿ ಸಿ.ಶಿವಕುಮಾರ,  ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಚ್‌.ಬಿ. ರವಿಕುಮಾರ್‌ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಇದ್ದರು.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಸಸ್ಪೆಂಡ್

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.