ಜಿಲ್ಲೆಯ ಜನರ ಬಾಧಿಸುತ್ತಿದೆ ಸಾಂಕ್ರಾಮಿಕ ರೋಗ
ಸ್ವಚ್ಛತೆ ಕೊರತೆಯಿಂದ ಡೆಂಘೀ, ಮಲೇರಿಯಾ• ಮಳೆ ನೀರು ನಿಂತು ಸೊಳ್ಳೆ ಉತ್ಪತ್ತಿ ಹೆಚ್ಚಳ
Team Udayavani, Jul 29, 2019, 12:25 PM IST
ತುಮಕೂರು: ಜಿಲ್ಲೆಯಲ್ಲಿ ವಾಡಿಕೆ ಮಳೆ ಬಾರದೆ ರೈತರು ಕಂಗಾಲಾಗಿರುವುದು ಒಂದೆಡೆಯಾದರೆ, ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೀರು ಒಂದೆಡೆ ನಿಂತು, ಸ್ವಚ್ಛತೆ ಕೊರತೆಯಿಂದ ರೋಗ-ರುಜಿನುಗಳು ಕಾಣಿಸಿಕೊಳ್ಳುತ್ತಿದ್ದು, ಆಸ್ಪತ್ರೆಗಳ ಮುಂದೆ ಜನರು ಸಾಲು ನಿಲ್ಲುವಂತಾಗಿದೆ.
ಹಿಂದೆ ಜಿಲ್ಲೆಯಲ್ಲಿ ಮಲೇರಿಯಾ ಮಹಾಮಾರಿ ವ್ಯಾಪಕವಾಗಿ ಕಂಡು ಬರುತ್ತಿತ್ತು. ಚಿಕ್ಕನಾಯಕನಹಳ್ಳಿ ಮಲೇರಿಯಾ ತವರೆಂದೇ ಹೆಸರಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಮಲೇರಿಯಾ ಪ್ರಭಾವ ಕಡಿಮೆಯಾಗಿದ್ದು, ಹಿಂದಿನ ಅಂಕಿ ಅಂಶಗಳಿಗಿಂತ ತೀರಾ ಕನಿಷ್ಠವಾಗಿದೆ.
ಕಾಡುತ್ತಿದೆ ಡೆಂಘೀ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಜ್ವರ ಬಾಧೆಯಿಂದ ಜನರು ಬಳಲುತ್ತಿದ್ದಾರೆ. ತುಮಕೂರು ತಾಲೂಕಿನಲ್ಲಿ ಹೆಚ್ಚು ಜನರು ಜ್ವರಕ್ಕೆ ತುತ್ತಾಗಿದ್ದಾರೆ. ಹೆಚ್ಚಿನವರಲ್ಲಿ ಡೆಂಘೀ ಲಕ್ಷಣ ಕಂಡುಬಂದಿರುವುದರಿಂದ ಜಿಲ್ಲಾಸ್ಪತ್ರೆ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 30 ಜನರು ಡೆಂಘೀಯಿಂದ ಬಳಲುತ್ತಿದ್ದಾರೆ. ಅದರಲ್ಲಿ ತುಮಕೂರು ತಾಲೂಕಿನಲ್ಲಿಯೇ 14 ಜನರಿಗೆ ಡೆಂಘೀ ಬಾಧಿಸಿದೆ. ಅದರಲ್ಲಿ 12 ಜನ ನಗರದವರೇ ಆಗಿದ್ದಾರೆ. ನಗರದಲ್ಲಿ ಸೊಳ್ಳೆಗಳ ಕಾಟ ತೀವ್ರವಾಗಿದೆ. ಜಿಲ್ಲೆಯಲ್ಲಿ ಚಿಕೂನ್‌ಗುನ್ಯಾದಿಂದ 24 ಜನ, ಮಲೇರಿಯಾದಿಂದ 19 ಜನ ಬಳಲುತ್ತಿದ್ದಾರೆ.
ಮುಂಗಾರು ವಿಫಲವೇ ಕಾಯಿಲೆಗೆ ಕಾರಣ: ಜೂನ್ ತಿಂಗಳಲ್ಲಿ ಈ ಭಾಗದಲ್ಲಿ ಮಳೆ ಆರಂಭವಾಗಬೇಕು. ಆದರೆ ಈ ಬಾರಿ ಜೂನ್, ಜುಲೈ ಕಳೆದು ಆಗಸ್ಟ್ ಬರುತ್ತಿದ್ದರೂ, ನಿಂತಿರುವ ಕೊಳಕು ನೀರು ಕೊಚ್ಚಿ ಹೋಗುವ ರೀತಿಯಲ್ಲಿ ಮಳೆ ಬಂದಿಲ್ಲ. ತುಂತುರು ಮಳೆಯಿಂದ ಅಲ್ಲಲ್ಲಿ ಗುಂಡಿಗಳಲ್ಲಿ ನೀರು ನಿಂತು, ಮಳೆ ನೀರು ಮಲೀನವಾಗಿ ಸೊಳ್ಳೆಗಳ ಉಗಮಸ್ಥಾನಗಳಾಗಿರುವುದು ವಿವಿಧ ಸಾಂಕ್ರಾಮಿಕ ರೋಗಗಳಿಗೆ ಕಾರಣವೂ ಆಗಿದೆ.
ಸ್ವಚ್ಛತೆ ಇಲ್ಲ: ಗ್ರಾಮಗಳು ಸ್ವಚ್ಛತೆ ಇಲ್ಲದಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚು ಉಲ್ಬಣವಾಗಲು ಕಾರಣವಾಗಿದೆ. ಗ್ರಾಮದ ಒಳಗೆಯೇ ತಿಪ್ಪೆಗುಂಡಿಗಳು, ಚರಂಡಿಗಳು, ಅಲ್ಲಲ್ಲಿ ಬಚ್ಚಲು ನೀರು, ತೆಂಗಿನ ಚಿಪ್ಪು ಮತ್ತು ಟೈರ್ ಒಳಗೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗಿ ರೋಗಗಳಿಗೆ ಆಹ್ವಾನ ನೀಡಿದಂತಾಗಿದೆ. ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಗ್ರಾಮ ಪಂಚಾಯಿತಿಗಳು ವಿಫಲವಾಗಿದ್ದು, ಜನರೂ ಸ್ವಚ್ಛತೆಗೆ ಮನಸ್ಸು ಮಾಡಿಲ್ಲ.
ಕ್ರಮ ಕೈಗೊಳ್ಳದ ಜಿಲ್ಲಾಡಳಿತ: ಜಿಲ್ಲೆಯಲ್ಲಿ ವಿವಿಧ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿವೆ. ಜನರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಮುಂದೆ ಸಾಲು ನಿಲ್ಲುತ್ತಿದ್ದಾರೆ. ಇನ್ನೂ ಕೆಲವರು ಬೆಂಗಳೂರು ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಇಷ್ಟಾದರೂ ಜಿಲ್ಲಾಡಳಿತ ಜಿಲ್ಲೆಯಲ್ಲಿ ಹರಡುತ್ತಿರುವ ಸಾಂಕ್ರಾಮಿಕ ರೋಗಗಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವುದು ಹಲವು ನಾಗರಿಕರ ಆರೋಪ.
ಮುಂಜಾಗ್ರತಾ ಕ್ರಮ ಅಗತ್ಯ: ಜಿಲ್ಲೆಯಲ್ಲಿ ಈಗಾಗಲೇ ಹತ್ತು ಹಲವು ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಅಗತ್ಯವಾಗಿದೆ. ಈ ಬಗ್ಗೆ ಗ್ರಾಮಗಳ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ಶುದ್ಧ ಕುಡಿಯುವ ನೀರು ಒದಗಿಸಲು ಮುಂದಾಗಬೇಕಾಗಿದೆ. ಜ್ವರ ಪೀಡಿತ ಗ್ರಾಮಗಳಲ್ಲಿ ಅಗತ್ಯವಾಗಿರುವ ಚಿಕಿತ್ಸೆ ನೀಡುವುದರ ಜೊತೆಗೆ ರೋಗ ಹರಡದಂತೆ ಕ್ರಮ ಕೈಗೊಳ್ಳಬೇಕಾಗಿದೆ.
ಸ್ವಚ್ಛತೆಗೆ ಗಮನಹರಿಸಲಿ: ತುಮಕೂರು ನಗರ ಸ್ಮಾರ್ಟ್‌ಸಿಟಿಯಾಗುತ್ತಿದೆ. ಆದರೆ ಈ ನಗರದಲ್ಲಿ ಉತ್ಪತ್ತಿಯಾಗುತ್ತಿರುವ ಸೊಳ್ಳೆಗಳ ನಿಯಂತ್ರಣ ಮಾಡುವಲ್ಲಿ ಮಹಾನಗರ ಪಾಲಿಕೆ ವಿಫಲವಾಗಿದೆ. ನಗರದ ಬಹುತೇಕ ಕಡೆಗಳಲ್ಲಿ ಚರಂಡಿಗಳು ಸ್ವಚ್ಛತೆಯಿಲ್ಲದೇ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿವೆ. ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಹೆಚ್ಚು ಗಮನಹರಿಸಿ ಸ್ವಚ್ಛತೆಗೆ ಒತ್ತುನೀಡಿ, ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.